ಚಿತ್ರದುರ್ಗ: ಎಸಿಎಫ್ ಶ್ರೀನಿವಾಸ್ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ ಜಪ್ತಿ
Team Udayavani, Feb 2, 2021, 4:51 PM IST
ಚಿತ್ರದುರ್ಗ: ಧಾರವಾಡ ಅರಣ್ಯ ಇಲಾಖೆ ಎಸಿಎಫ್ ಎಸ್.ಶ್ರೀನಿವಾಸ್ ಅವರ ಚಿತ್ರದುರ್ಗದ ನಿವಾಸ ಹಾಗೂ ತೋಟದ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಚಿನ್ನಾಭರಣ ಹಾಗೂ ನಗದು ಜಪ್ತಿ ಮಾಡಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದಡಿ ಮಂಗಳವಾರ ನಗರದ ತಮಟಕಲ್ಲು ರಸ್ತೆಯ ಈಶ್ವರ ಬಡಾವಣೆಯ ಮನೆ, ಕೆಎಚ್‌ಬಿ ಕಾಲೋನಿಯಲ್ಲಿರುವ ಮನೆ ಹಾಗೂ ಮಾರಘಟ್ಟ ಬಳಿ ಇರುವ ತೋಟದ ಮನೆ, ಸದ್ಯ ಕಾರ್ಯನಿರ್ವಹಿಸುತ್ತಿರುವ ಧಾರವಾಡದ ಎಸಿಎಫ್ ಕಚೇರಿ, ಅರಣ್ಯ ಇಲಾಖೆ ವಸತಿ ಗೃಹ ಸೇರಿದಂತೆ ಐದು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ಇದನ್ನೂ ಓದಿ: ಎಟಿಎಂನಲ್ಲಿ ಹಲ್ಲೆ ಪ್ರಕರಣ: ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷಗಳ ಜೈಲು ಶಿಕ್ಷೆ ಪ್ರಕಟ
ಈ ಪೈಕಿ ಚಿತ್ರದುರ್ಗದ ಈಶ್ವರ ಬಡಾವಣೆಯ ಮನೆಯಲ್ಲಿ 870 ಗ್ರಾಂ ತೂಕದ ಚಿನ್ನಾಭರಣ, ಎರಡೂವರೆ ಕೆಜಿ ಬೆಳ್ಳಿ ಸಾಮಾಗ್ರಿಗಳು ಹಾಗೂ 4.70 ಲಕ್ಷ ರೂ. ನಗದು ದೊರೆತಿದೆ. ಉಳಿದಂತೆ ಮನೆಯಲ್ಲಿ ಗೃಹೋಪಯೋಗಿ ವಸ್ತುಗಳು ಮತ್ತು ದಾಖಲೆ ಪತ್ರಗಳ ಪರಿಶೀಲನೆ ಮುಂದುವರೆದಿದೆ.
ದಾವಣಗೆರೆ ಪೂರ್ವ ವಲಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಾದ ಎಚ್. ಜಯಪ್ರಕಾಶ್ ದಾಳಿಯ ನೇತೃತ್ವ ವಹಿಸಿದ್ದರು. ಚಿತ್ರದುರ್ಗ ಎಸಿಬಿ ಡಿಎಸ್‌ಪಿ ಬಸವರಾಜ ಆರ್. ಮುಗದುಮ್, ಶಿವಮೊಗ್ಗ ಎಸಿಬಿ ಡಿಎಸ್‌ಪಿ ಲೋಕೇಶ್, ಹಾವೇರಿ ಎಸಿಬಿ ಡಿಎಸ್‌ಪಿ ಮಹಾಂತೇಶ್ವರ ಎಸ್. ಜಿದ್ದಿ, ಇನ್ಸ್‌ಪೆಕ್ಟರ್‌ಗಳಾದ ಪ್ರವೀಣ್‌ಕುಮಾರ್, ಮಧುಸೂದನ್, ಇಮ್ರಾನ್ ಬೇಗ್ ಹಾಗೂ ಸಿಬ್ಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಸಾರಿಗೆ ನೌಕರರ 3 ಬೇಡಿಕೆ ಈಡೇರಿಸಿದ್ದೇವೆ; ಇನ್ಮುಂದೆ ಸಂಬಳ ಕಡಿತ ಮಾಡುವುದಿಲ್ಲ:ಸವದಿ ಭರವಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.