![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 16, 2020, 5:28 PM IST
ಚಿತ್ರದುರ್ಗ: ಕೊರೊನಾ ವೈರಸ್ ಹರಡುವ ಭೀತಿ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೂ ತಟ್ಟಿದ್ದು, ಅರಣ್ಯ ಇಲಾಖೆ ಮಾ. 23 ರವರೆಗೆ ಮೃಗಾಲಯಕ್ಕೆ ಪ್ರವಾಸಿಗರು ಬಾರದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಶನಿವಾರ ತೆರೆದಿದ್ದ ಮೃಗಾಲಯ ಭಾನುವಾರ ಮಧ್ಯಾಹ್ನದಿಂದ ಇದ್ದಕ್ಕಿದ್ದಂತೆ ಬಂದ್ ಆಗಿತ್ತು. ಆಡುಮಲ್ಲೇಶ್ವರ ಕಿರು ಮೃಗಾಲಯದ ಪ್ರವೇಶ ದ್ವಾರದಲ್ಲಿ “ಪ್ರವಾಸಿಗರಿಗೆ ಪ್ರವೇಶವಿಲ್ಲ’ ಎಂಬ ಫಲಕ ಹಾಕಲಾಗಿತ್ತು.
ಜತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರನ್ನು ಪ್ರವೇಶ ದ್ವಾರದ ಬಳಿಯೇ ತಡೆದು ವಾಪಸ್ ಕಳಿಸುತ್ತಿದ್ದರು. ಕಿರು ಮೃಗಾಲಯಕ್ಕೆ ಪ್ರವಾಸಿಗರನ್ನು ನಿರ್ಬಂಧಿಸುವ ನಿರ್ಧಾರವನ್ನು ಸಚಿವಾಲಯ ಕೈಗೊಂಡಿದ್ದು, ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಒಂದು ವಾರ ಮೃಗಾಲಯಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಡಿಎಫ್‌ಒ ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ.
ಶನಿವಾರ ಕಿರು ಮೃಗಾಲಯಕ್ಕೆ 97 ಪ್ರವಾಸಿಗರು ಮಾತ್ರ ಭೇಟಿ ನೀಡಿದ್ದರು. ಭಾನುವಾರ ಮಧ್ಯಾಹ್ನದವರೆಗೂ ತೆರೆದಿದ್ದರೂ ಯಾರೂ ಬಂದಿರಲಿಲ್ಲ. ಮಧ್ಯಾಹ್ನ 12 ಗಂಟೆ ನಂತರ ಸಂಪೂರ್ಣ ಬಂದ್ ಮಾಡಲಾಗಿದೆ. ಹಂಪಿ ಪ್ರವಾಸಕ್ಕೆ ಬರುವವರು ಚಿತ್ರದುರ್ಗಕ್ಕೂ ಬಂದು ಹೋಗುತ್ತಿದ್ದರು. ಈಗಾಗಲೇ ಹಂಪಿಯಲ್ಲೂ ನಿರ್ಬಂಧ ವಿಧಿ ಸಿದ್ದರಿಂದ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖವಾಗಿತ್ತು. ಶಾಲಾ-ಕಾಲೇಜುಗಳು, ಹೋಟೆಲ್, ಮಾಲ್, ಕ್ಲಬ್‌ಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸಹಜವಾಗಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.