ಅಂತರ್ಜಲ ಚೇತನ-ನರೇಗಾ ಯಶಸ್ವಿಗೊಳಿಸಿ

ಕೊಳವೆಬಾವಿ ಕೊರೆಸಿ ಭೂಮಿಗೆ ಮಾಡಿದ ಅನ್ಯಾಯ ಸರಿಪಡಿಸಲು ಇದು ಸಕಾಲ: ಸಚಿವ ಈಶ್ವರಪ್ಪ

Team Udayavani, Jun 13, 2020, 5:50 PM IST

13-June-17

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿತ್ರದುರ್ಗ: ಅಂತರ್ಜಲ ಚೇತನ ಮತ್ತು ನರೇಗಾ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು ಪಿಡಿಒ, ತಾಪಂ, ಗ್ರಾಪಂ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಕೈಯಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಆರ್ಟ್‌ ಆಫ್‌ ಲಿವಿಂಗ್‌ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ “ಅಂತರ್ಜಲ ಚೇತನ’ ಯೋಜನೆಗೆ ನಗರದ ಕಮ್ಮಾರೆಡ್ಡಿ ಸಮುದಾಯ ಭವನದಲ್ಲಿ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ಅಂತರ್ಜಲ ಮಟ್ಟ ಹೆಚ್ಚಿಸಲು ಯಾವುದೇ ಪ್ರಯತ್ನ ಮಾಡದೆ ಕೇವಲ ಕೊಳವೆಬಾವಿಗಳನ್ನು ಕೊರೆದು ಭೂಮಿಗೆ ಇಷ್ಟು ವರ್ಷಗಳ ಕಾಲ ಅನ್ಯಾಯ ಮಾಡಿದ್ದೇವೆ. ಆ ತಪ್ಪನ್ನು ಸರಿಪಡಿಸಲು ಇದು ಸಕಾಲ. ಹಳ್ಳಿಗಳಲ್ಲಿ ನರೇಗಾದಡಿ ಅಂತರ್ಜಲ ಕಾರ್ಯಕ್ರಮಗಳನ್ನು ಯಶಸ್ವಿ ಮಾಡಬೇಕಿದೆ ಎಂದರು. ಕೂಲಿ ಕಾರ್ಮಿಕರಿಗೆ ನರೇಗಾದಡಿ ದಿನಕ್ಕೆ 275 ರೂ. ಕೂಲಿ ಹಣ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರು ಸ್ಥಳೀಯವಾಗಿಯೇ ಹೆಚ್ಚೆಚ್ಚು ಕೂಲಿ ಕೆಲಸ ಮಾಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿದೆ. ಇದರಿಂದಾಗಿ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ತಾಲೂಕುಗಳಲ್ಲಿ ಫ್ಲೋರೈಡ್‌ಯುಕ್ತ ನೀರು ಸಿಗುತ್ತಿದೆ. ಫ್ಲೋರೈಡ್‌ ಅಂಶ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ. ಇಂತಹ ಸನ್ನಿವೇಶದಲ್ಲಿ ಅಂತರ್ಜಲ ಚೇತನ ಯೋಜನೆಯಿಂದ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಸುಧಾರಣೆಯಾಗಿ ಫ್ಲೋರೈಡ್‌ನಿಂದ ಜಿಲ್ಲೆ ಮುಕ್ತಿ ಹೊಂದಲು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವ ನರೇಗಾ ಯೋಜನೆಗೆ ಈ ವರ್ಷ 1 ಲಕ್ಷ ಕೋಟಿ ರೂ. ಅನುದಾನವನ್ನು ದೇಶದಲ್ಲಿ ಮೀಸಲಿಡಲಾಗಿದೆ. ಈ ಯೋಜನೆಯಡಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಯೋಜನೆಯಲ್ಲಿ ಇರುವ ಅವಕಾಶಗಳ ಬಗ್ಗೆ ಪಿಡಿಒಗಳು, ಕಂದಾಯ ಅ ಧಿಕಾರಿಗಳು, ಎನ್‌ಜಿಒ, ಸಂಘ ಸಂಸ್ಥೆಗಳು ವ್ಯಾಪಕ ಪ್ರಚಾರ ನೀಡಬೇಕು ಎಂದು ತಿಳಿಸಿದರು.

ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಬಸವರಾಜ್‌, ಶಾಸಕರಾದ ಎಂ. ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್‌, ಟಿ. ರಘುಮೂರ್ತಿ, ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌, ತಾಪಂ ಅಧ್ಯಕ್ಷ ಲಿಂಗರಾಜು ಉಪಸ್ಥಿತರಿದ್ದರು. ಜಿಪಂ ಸಿಇಒ ಟಿ. ಯೋಗೇಶ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.