ಆಂಜನೇಯಗೆ ಬ್ರೇಕ್‌ ಹಾಕಲು ಹರಸಾಹಸ


Team Udayavani, May 10, 2018, 6:25 AM IST

h-anjaneya–85858.jpg

ಚಿತ್ರದುರ್ಗ: ಸಾಂಪ್ರದಾಯಿಕ ಎದುರಾಳಿಗಳ ಮತ್ತೂಂದು ಹಣಾಹಣಿಗೆ ಹೊಳಲ್ಕೆರೆ ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರ ಸಜ್ಜಾಗಿದೆ. ಕಾಂಗ್ರೆಸ್‌ನಿಂದ ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಎಂ.ಚಂದ್ರಪ್ಪ ಕಣಕ್ಕೆ ಇಳಿದಿದ್ದಾರೆ.

ಆಂಜನೇಯ ಶಾಸಕರಾಗಿ ಪುನರಾಯ್ಕೆಯಾಗಲು ಹೋರಾಟ ನಡೆಸಿದ್ದಾರೆ. ಅವರ ಗೆಲುವಿಗೆ ಬ್ರೇಕ್‌ ಹಾಕಲು ಎಂ.ಚಂದ್ರಪ್ಪ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಇವರಿಬ್ಬರ ನಡುವಿನ ಸೆಣಸಾಟದಲ್ಲಿ ಜೆಡಿಎಸ್‌ ಅಭ್ಯರ್ಥಿ ಶ್ರೀನಿವಾಸ ಗದ್ದಿಗೆ ತೀರಾ ಸಪ್ಪೆ ಎನ್ನಿಸಿದ್ದಾರೆ. ಹಾಗಾಗಿ ಇಲ್ಲೇನಿದ್ದರೂ ಕಾಂಗ್ರೆಸ್‌-ಬಿಜೆಪಿ ಮಧ್ಯೆ ನೇರ ಫೈಟ್‌.

ಬಿಜೆಪಿಗೆ ಬಂಡಾಯದ ಬಿಸಿ: ಕಾಂಗ್ರೆಸ್‌ ಪಕ್ಷಕ್ಕೆ ಆಡಳಿತ ವಿರೋ ಧಿ ಅಲೆ ಅಷ್ಟಾಗಿ ಕಾಡದಿದ್ದರೂ ಆಂಜನೇಯ ಮಾತ್ರ ಎಚ್ಚರಿಕೆ ವಹಿಸಿದ್ದಾರೆ. ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಹೊಳಲ್ಕೆರೆ ಮಾಜಿ ಶಾಸಕ ಪಿ.ರಮೇಶ್‌ ಹಾಗೂ ಅಭ್ಯರ್ಥಿ ಚಂದ್ರಪ್ಪ ಮಧ್ಯೆ ಅಷ್ಟಕ್ಕಷ್ಟೇ. ಜೊತೆಗೆ ಚಂದ್ರಪ್ಪ ಕೆಜೆಪಿಯಿಂದ ಬಿಜೆಪಿಗೆ ಬಂದವರು ಎಂಬ ಅಸಮಾಧಾನ ಇನ್ನೂ ಹೊಗೆಯಾಡುತ್ತಲೇ ಇದೆ. ಹಾಗಾಗಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಹನುಮಕ್ಕ ಅವರನ್ನು ಮಾಜಿ ಶಾಸಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ.

ನಿರ್ಣಾಯಕ ಅಂಶ
ಕಳೆದ ಚುನಾವಣೆಯಲ್ಲಿ ಬಹುತೇಕ ಕುಂಚಿಟಿಗರ ಮತಗಳು ಚಂದ್ರಪ್ಪ ಅವರಿಗೆ ಚಲಾವಣೆಯಾಗಿದ್ದವು. ಈಗ ಪರಿಸ್ಥಿತಿ ಬದಲಾಗಿದ್ದು, ಕುಂಚಿಟಿಗ ಸಮುದಾಯದ ಮತಗಳನ್ನು ಸೆಳೆಯಲು ಆಂಜನೇಯ ತಂತ್ರ ರೂಪಿಸಿದ್ದಾರೆ. ಅಲ್ಲದೆ ಸಿರಿಗೆರೆಯ ತರಳಬಾಳು ಜಗದ್ಗುರುಗಳ ಸೂಚನೆ ಮೇರೆಗೆ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ, ಭರಮಸಾಗರ ಸುತ್ತಮುತ್ತಲಿನ ಮೂರು ಕೆರೆಗಳಿಗೆ ನೀರು ಭರ್ತಿ ಮಾಡುವ ಯೋಜನೆಗೆ ಸರ್ಕಾರದಿಂದ ಮಂಜೂರಾತಿ ಕೊಡಿಸಿದ್ದಾರೆ. ಆದರೂ ಹೊಳಲ್ಕೆರೆ ಕ್ಷೇತ್ರದಲ್ಲಿ ಯಡಿಯೂರಪ್ಪ ಪ್ರಭಾವ ಜಾಸ್ತಿ ಇದೆ. ಬಿಜೆಪಿ ಅಭ್ಯರ್ಥಿಯ ವೈಯಕ್ತಿಕ ವರ್ಚಸ್ಸಿಗಿಂತ ಯಡಿಯೂರಪ್ಪನವರ ಹೆಸರೇ ಹೆಚ್ಚು ಚಾಲ್ತಿಯಲ್ಲಿರುವುದರಿಂದ ಫಲಿತಾಂಶದಲ್ಲಿ ಏನು ಬೇಕಾದರೂ ಆಗಬಹುದು.

ಒಟ್ಟು ಮತದಾರರು: 2,24,393.
ಪುರುಷರು: 1,14,127.
ಮಹಿಳೆಯರು: 1,10,266.

ಜಾತಿವಾರು ಮತಗಳು
ಲಿಂಗಾಯತ-60 ಸಾವಿರ
ಮಾದಿಗ-40 ಸಾವಿರ
ವಾಲ್ಮೀಕಿ ನಾಯಕ-20 ಸಾವಿರ
ಗೊಲ್ಲ-20 ಸಾವಿರ
ಭೋವಿ18 ಸಾವಿರ
ಲಂಬಾಣಿ-16 ಸಾವಿರ
ಮುಸ್ಲಿಂ- 10 ಸಾವಿರ
ಕುರುಬ-8 ಸಾವಿರ
ಬಲಗೈ- 5 ಸಾವಿರ.

ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದರಿಂದ ಮತದಾರರು ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ.
– ಎಚ್‌. ಆಂಜನೇಯ, ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ

ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗಿಲ್ಲ. ನನ್ನ ಅವ ಧಿಯಲ್ಲಿ ಮಾಡಿರುವ ರಸ್ತೆಗಳು ಈಗಲೂ ನನ್ನ ಹೆಸರು ಹೇಳುತ್ತಿವೆ. ಆದ್ದರಿಂದ ಈ ಬಾರಿ ಜನರು ನನ್ನನ್ನೇ ಆಯ್ಕೆ ಮಾಡಲಿದ್ದಾರೆ.
– ಎಂ. ಚಂದ್ರಪ್ಪ, ಬಿಜೆಪಿ ಅಭ್ಯರ್ಥಿ

ಬಿಜೆಪಿ, ಕಾಂಗ್ರೆಸ್‌ ಆಡಳಿತದಿಂದ ಕ್ಷೇತ್ರದ ಜನತೆ ರೋಸಿ ಹೋಗಿದ್ದಾರೆ.  ಕ್ಷೇತ್ರದಲ್ಲಿ ಜೆಡಿಎಸ್‌ ಅಲೆ ಇದೆ. ಜೊತೆಗೆ ನಾನು ಸ್ಥಳೀಯ ಅಭ್ಯರ್ಥಿಯಾಗಿರುವುದರಿಂದ  ಗೆಲುವು ನಿಶ್ಚಿತ.
– ಶ್ರೀನಿವಾಸ್‌ ಗದ್ದಿಗೆ, ಜೆಡಿಎಸ್‌ ಅಭ್ಯರ್ಥಿ

– ಹರಿಯಬ್ಬೆ ಹೆಂಜಾರಪ್ಪ
 

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.