ಕೊರೊನಾ ತಡೆಗೆ ಜಾಗೃತಿ ಅಗತ್ಯ

ಸಾರ್ವಜನಿಕರು ಕೊರೊನಾ ಕುರಿತ ಸುಳ್ಳು ವದಂತಿ ನಂಬದಿರಿ: ಡಿಸಿ ವಿನೋತ್‌ ಪ್ರಿಯಾ

Team Udayavani, Mar 14, 2020, 1:28 PM IST

14-March-11

ಚಿತ್ರದುರ್ಗ: ಕೊರೊನಾ ವೈರಸ್‌ ಸೋಂಕು ತಡೆಗಟ್ಟುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ವಿಶೇಷ ಪ್ರಚಾರ ವಾಹನಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶೇಷ ಪ್ರಚಾರ ವಾಹನವನ್ನು ಸಿದ್ಧಪಡಿಸಿದೆ. ಕೊರೋನಾ ವೈರಸ್‌ ಸೋಂಕು ತಡೆಯಲು ಜಾಗೃತಿ ಅಗತ್ಯ ಎಂದರು.

ಈ ವಾಹನ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡಲಿದೆ. ಕೊರೋನಾ ವೈರಸ್‌ ಸೋಂಕು ಕುರಿತಂತೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವದಂತಿ, ಊಹಾಪೋಹಗಳನ್ನು ನಂಬಬಾರದು. ಸೋಂಕು ಹರಡದಂತೆ ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ ಮಾತನಾಡಿ, ಕೊರೊನಾ ವೈರಸ್‌ ಲಕ್ಷಣಗಳಾದ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಯ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತಾ ದೃಷ್ಟಿಯಿಂದ ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರವನ್ನು ಅಡ್ಡ ಹಿಡಿಯಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು. ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ರೋಗದ ಲಕ್ಷಣ ಹೊಂದಿರುವವರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಸರಿಯಾಗಿ ಬೇಯಿಸದ ಹಸಿ ಮೊಟ್ಟೆ, ಮಾಂಸ, ಸೇವೆನೆ ಮಾಡಬಾರದು. “ಕೊರೊನಾ ವೈರಸ್‌ ಬಗ್ಗೆ ಭಯಬೇಡ, ಎಚ್ಚರವಿರಲಿ’ ಎಂಬ ಸ್ಲೊಗನ್‌ನೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ಮಾತನಾಡಿ, ಜಿಲ್ಲೆಯ ತಾಲೂಕುವಾರು ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರಿಗೆ ಕೊರೊನಾ ವೈರಸ್‌ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವರು. ತಾಯಂದಿರ ಸಭೆಗಳಲ್ಲಿ, ಗ್ರಾಮ ಪಂಚಾಯತ್‌ ಸಭೆಗಳಲ್ಲಿ, ಇತರ ಸಭೆಗಳಲ್ಲಿ ಜಾಗೃತಿ ಮೂಡಿಸಲು ತಿಳಿಸಲಾಗಿದೆ. ಸಂಚಾರಿ ವಸ್ತು ಪ್ರದರ್ಶನವನ್ನು (ಟ್ಯಾಬ್ಲೊ) ಎಲ್ಲಾ ತಾಲೂಕುಗಳ ಗ್ರಾಮಗಳಲ್ಲಿ ಧ್ವನಿವರ್ಧಕ ವ್ಯವಸ್ಥೆಯೊಂದಿಗೆ ಕಳುಹಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿ ಕಾರಿ ಎಚ್‌.ಎಸ್‌. ಆನಂದ, ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಎಚ್‌.ಬಿ. ಪೂಜಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.