ಮದ್ಯ ಮಾರಾಟಕ್ಕೆ ಸೇವಾಲಾಲ್ ಶ್ರೀ ಆಕ್ಷೇಪ
Team Udayavani, May 4, 2020, 1:41 PM IST
ಚಿತ್ರದುರ್ಗ: ಕೋವಿಡ್ ನಿರ್ಮೂಲನೆಗಾಗಿ ಕಳೆದ ನಲವತ್ತು ದಿನಗಳಿಂದ ದೇಶವನ್ನು ಲಾಕ್‌ಡೌನ್ ಮಾಡಿದ್ದ ಸರ್ಕಾರ, ಈಗ ಏಕಾಏಕಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದು ನಿಜಕ್ಕೂ ಕೋವಿಡ್ ವೈರಸ್ ಹರಡಲು ದಾರಿ ಮಾಡಿಕೊಟ್ಟಂತಿದೆ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.
ಭಾನುವಾರ ಪತ್ರಿಕಾ ಭವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ಇಡೀ ದೇಶ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ. ಮದ್ಯ ಮಾರಾಟದಿಂದ ಬರುವ ಆದಾಯದಲ್ಲಿ ಸರ್ಕಾರ ನಡೆಯುವುದಿಲ್ಲ. ಬೇರೆ ಬೇರೆ ಉದ್ದಿಮೆಗಳಿಂದ ಸರ್ಕಾರ ಆದಾಯ ಮೂಲಗಳನ್ನು ಕಂಡುಕೊಳ್ಳಬೇಕೆ ವಿನಃ ಸಮಾಜದ ಸ್ವಾಸ್ತ್ಯ ಹಾಳು ಮಾಡುವ ಕೆಲಸಕ್ಕೆ ಕೈಹಾಕಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಲಾಕ್‌ಡೌನ್ ಸಂದರ್ಭದಲ್ಲಿ ಕುಡಿತವಿಲ್ಲದೆ ಎಷ್ಟೊ ಬಡ ಕುಟುಂಬಗಳು ನೆಮ್ಮದಿಯಾಗಿ ಜೀವಿಸುತ್ತಿದ್ದವು. ಮದ್ಯಪಾನಕ್ಕೆ ದಾಸರಾಗಿದ್ದ ಬಹಳ ಮಂದಿ ಮದ್ಯವನ್ನೇ ಮರೆತು ಬಿಟ್ಟಿದ್ದರು. ಆದರೆ ಸರ್ಕಾರ ಎಂಎಸ್‌ಐಎಲ್ ಹಾಗೂ ಎಂಆರ್‌ಪಿ ಮೂಲಕ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿರುವುದು ಸರಿಯಾದ ಕ್ರಮವಲ್ಲ. ಕೆಂಪು, ಕಿತ್ತಳೆ ಹಾಗೂ ಹಸಿರು ವಲಯವೆಂದು ಮೂರು ಗುಂಪಾಗಿ ರಾಜ್ಯವನ್ನು ವಿಂಗಡಿಸಿ ಹಸಿರು ವಲಯಗಳಲ್ಲಿ ಮಾತ್ರ ಕುಡಿತಕ್ಕೆ ಅವಕಾಶ ಕೊಡುವ ಆತುರವಾದರೂ ಏನಿತ್ತು, ಈಗಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮದ್ಯ ಮಾರಾಟಕ್ಕೆ ನೀಡಿರುವ ಅನುಮತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮಿತಿ ಜಿಲ್ಲಾಧ್ಯಕ್ಷ ಕೆ.ಜಿ. ಅನಂತಮೂರ್ತಿ ನಾಯ್ಕ, ವಕೀಲ ಕೆ. ವೆಂಕಟೇಶ ನಾಯ್ಕ, ಭೀಮ ನಾಯ್ಕ, ಪದ್ಮಾವತಿ, ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.