ವೈದ್ಯರು-ಪೊಲೀಸರು, ಸೈನಿಕರಿಗೆ ಸಹಕಾರ ನೀಡಿ
Team Udayavani, Apr 7, 2020, 6:25 PM IST
ಚಿತ್ರದುರ್ಗ: ದೇಶಕ್ಕೆ ಕೋವಿಡ್ ಮಹಾಮಾರಿ ಬಂದಿದ್ದು, ಅದನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ಪೊಲೀಸರು, ಸೈನಿಕರಿಗೆ ಬಿಜೆಪಿ ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಜಿಲ್ಲಾಧ್ಯಕ್ಷ ಎ. ಮುರುಳಿ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಬಿಜೆಪಿ 40ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶ ಸಂಕಟದಲ್ಲಿದೆ. ಎಲ್ಲರೂ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜನ ಕೂಡಾ ಮನೆಯಲ್ಲಿ ಲಾಕ್ ಆಗಿದ್ದಾರೆ. ಈ ಕಾರಣಕ್ಕೆ ಇಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅತ್ಯಂತ ಸರಳ ವಾಗಿ ಮಾಡಲಾಗುತ್ತಿದೆ ಎಂದರು. ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್ ಮಾತನಾಡಿ ಜನಸಂಘ, ಭಾರತೀಯ ಜನತಾಪಾರ್ಟಿ ಹುಟ್ಟಿಕೊಂಡಿದ್ದೇ ಈ ದೇಶದ ಅನೇಕ ಸಮಸ್ಯೆಗಳನ್ನು ಪರಿಹರಿಸುವ ುದಕ್ಕಾಗಿ. ಸದ್ಯ ಇಡೀ ವಿಶ್ವವನ್ನೇ ತಲ್ಲಣಿಸಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಸಜ್ಜಾಗಿ ನಿಲ್ಲಬೇಕು ಎಂದರು. ಸಿದ್ದೇಶ್ ಯಾದವ್, ಸುರೇಶ್ ಸಿದ್ದಾಪುರ, ಮಲ್ಲಿಕಾರ್ಜುನ್, ನಾಗರಾಜ್ ಬೇಂದ್ರೆ, ನಂದಿ ನಾಗರಾಜ್, ನಗರಾಧ್ಯಕ್ಷ ಶಶಿಧರ್, ವೆಂಕಟೇಶ್ ಯಾದವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.