Chitradurga: ಕಾರು-ಲಾರಿ ಭೀಕರ ಅಪಘಾತ; 8 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತ್ಯು
Team Udayavani, Aug 13, 2023, 7:46 AM IST
ಚಿತ್ರದುರ್ಗ: ನಗರದ ಹೊರವಲಯದ ಮಲ್ಲಾಪುರ ಮೇಲ್ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 8 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಜಯಪುರ ನಿವಾಸಿಗಳಾದ ಭೀಮಾಶಂಕರ (26 ವರ್ಷ), ಕಾರು ಚಾಲಕ ಸಂಗನ ಬಸಪ್ಪ (36 ವರ್ಷ), ರೇಖಾ w/o ಸಂಗನ ಬಸಪ್ಪ (29 ವರ್ಷ), ಅಗಸ್ತ್ಯ s/o ಸಂಗನ ಬಸಪ್ಪ (8 ವರ್ಷ) ಮೃತರು.
ಇನ್ನೂ ಸಂಗನ ಬಸಪ್ಪ ಅವರ ಮಕ್ಕಳಾದ 6 ವರ್ಷದ ಅನ್ವಿತಾ, 4 ವರ್ಷದ ಆದರ್ಶ ಹಾಗೂ ಸುಮಾರು 26 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಲ್ಲರೂ ವಿಜಯಪುರ ನಿವಾಸಿಗಳಾಗಿದ್ದು, ಸಂಗಣ್ಣ ಬಸಪ್ಪ ಮತ್ತು ಅವರ ಸಂಬಂಧಿ ಈರಣ್ಣ ಅವರ ಕುಟುಂಬದವರು ಪ್ರವಾಸಕ್ಕಾಗಿ ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಮತ್ತೊಂದು ಕಾರಿನಲ್ಲಿ ಈರಣ್ಣನವರ ಕುಟುಂಬವಿತ್ತು.
ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗದ ಬಳಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಜಿಲ್ಲೆಯ ಕುದರಿ ಸಾಲವಾಡಗಿ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಗ್ರಾಮದ ಮಟ್ಟಿಗೆ ಆಷಾಡದ ಎರಡನೇ ಭಾನುವಾರ ಕರಾಳ ಭಾನುವಾರವಾಗಿದೆ.
ಕುಟುಂಬದವರೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಹೊರಟಿದ್ದ ಸಂಗಬಸಪ್ಪ ಹಾಗೂ ಅವರ ಕುಟುಂಬ ಸದಸ್ಯರಿದ್ದ ಕಾರು ಚಿತ್ರದುರ್ಗದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ಚಿಕ್ಕಮಗಳೂರ ಪ್ರವಾಸಕ್ಕೆಂದು ಶನಿವಾರ ರಾತ್ರಿ 11 ಗಂಟೆಗೆ ಸ್ವಗ್ರಾಮದಿಂದ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಚಿಕ್ಕಮಗಳೂರು ತಲುಪುವ ಮುನ್ನವೇ ಅಪಘಾತದಲ್ಲಿ ಮೃತಪಟ್ಟಿದ್ದು, ಸುದ್ದಿ ತಿಳದ ಕುಟುಂಬ ಚಿತ್ರದುರ್ಗದತ್ತ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.