ಕೋವಿಡ್ ಹರಡದಂತೆ ಜಾಗ್ರತೆ ವಹಿಸಿ
Team Udayavani, Jul 3, 2020, 4:03 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಹರಡುವ ಸಾಧ್ಯತೆ ಇದೆ. ಈ ಬಗ್ಗೆ ಜನತೆ ಮುನ್ನೆಚ್ಚರಿಕೆ ವಹಿಸಿ ನಗರಗಳಿಗೆ ಹೋಗದೆ ಮನೆಯಲ್ಲೇ ಇರಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.
ಚಿತ್ರದುರ್ಗ ತಾಲೂಕು ಹಿರೇಗುಂಟನೂರು ಜಿಪಂ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಮಾಜಕಲ್ಯಾಣ ಇಲಾಖೆಯ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಮಂಜೂರಾದ ರೂ.1.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಳಲಿ ಗ್ರಾಮದಲ್ಲಿ ಬಹುತೇಕ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವಿದೆ. ಈ ಗ್ರಾಮದ ಮೂಲ ಭೂತ ಸೌಕರ್ಯಕ್ಕೆ ಒತ್ತು ನೀಡಿ, ಇನ್ನೂ 4 ವರ್ಷಗಳ ಅವಧಿಯಲ್ಲಿ ಸಂಸದ ಎ. ನಾರಾಯಣಸ್ವಾಮಿ ಮಾದರಿ ಗ್ರಾಮವನ್ನಾಗಿ ಮಾಡಲಿದ್ದಾರೆ ಎಂದು ಭರವಸೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಉಚಿತ ಗ್ಯಾಸ್, ಜನ್‌ಧನ್ ಖಾತೆಗೆ ಹಣ ವರ್ಗಾವಣೆ, ಅನ್ನಭಾಗ್ಯ ಯೋಜನೆ, ಅಟಲ್ ಪಿಂಚಣಿ ಯೋಜನೆ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ನೆರವಾಗಿದ್ದಾರೆ. ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದಕ್ಕಾಗಿ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಬಡವರು, ರೈತರಿಗೆ ನೆರವಾಗಿದೆ. ಇದರ ಜೊತೆಗೆ ನವೆಂಬರ್ ತನಕ ಉಚಿತ ಅಕ್ಕಿ, ಬೆಳೆ, ಗೋಧಿ ಸೇರಿದಂತೆ ಅಗತ್ಯ ಪಡಿತರ ವಿತರಣೆಗೆ ಕ್ರಮ ಕೈಗೊಂಡಿದ್ದಾರೆ. ಪ್ರಧಾನಿ ಮೋದಿಯವರು 2025ರೊಳಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಕೆಲಸ ಮಾಡುತ್ತಾರೆ ಎಂದರು.
ಸಂಸದ ಎ.ನಾರಾಯಣಸ್ವಾಮಿ ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಭಯ ಪಡದೆ ಎಚ್ಚರದಿಂದರಬೇಕು. ಸಮುದಾಯದ ಜಾಗೃತಿ ಜೊತೆಗೆ ಜಿಲ್ಲೆಯ ಅಭಿವೃದ್ಧಿಯೂ ನಡೆಯಬೇಕು. ಕೋವಿಡ್-19 ನಿಯಂತ್ರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮ ನಿರ್ಧಾರ ಕೈಗೊಂಡು ಕೋವಿಡ್-19 ನಿಯಂತ್ರಣದಲ್ಲಿ ಸಬಲರಾಗಿದ್ದೇವೆ. ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಬಡವರಿಗೆ ನೆರವಾಗಿವೆ ಎಂದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಂಠಿತಗೊಂಡಿರುವ ಅಭಿವೃದ್ಧಿ ಯೋಜನೆಗಳಿಗೆ ತ್ವರಿತಗೊಳಿಸಿ ಕಾರ್ಯಗತ ಮಾಡುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಜಿಪಂ ಸದಸ್ಯೆ ಜಯಪ್ರತಿಭಾ, ತಾಪಂ ಸದಸ್ಯ ಸುರೇಶ್, ಮುಖಂಡರಾದ ಮುರುಳಿ, ನವೀನ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಮಳಲಿ ಗ್ರಾಮದಲ್ಲಿ ಹೈಮಾಸ್ಟ್ ದೀಪಕ್ಕೆ ಭೂಮಿಪೂಜೆ, ಎನ್.ಬಳ್ಳೆಕಟ್ಟೆ-ನೆಲ್ಲಿಕಟ್ಟೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿ ಉದ್ಘಾಟನೆ, ನೂತನ ಶಾಲಾ ಕೊಠಡಿ ಉದ್ಘಾಟನೆ, ಶುದ್ಧ ಕುಡಿಯುವ ನೀರಿನ ಘಟಕದ ಭೂಮಿಪೂಜೆ ನೆರವೇರಿಸಲಾಯಿತು.
ಬೆಟ್ಟದನಾಗೇನಹಳ್ಳಿ ಹಾಗೂ ತುರೆಬೈಲು, ವಿ. ಪಾಳ್ಯ, ಹಿರೇಗುಂಟನೂರು ಗ್ರಾಮಗಳಲ್ಲಿ ಹೈಮಾಸ್ಟ್ ದೀಪ ಅಳವಡಿಕೆಯ ಭೂಮಿಪೂಜೆ ಹಾಗೂ ಅಂಬೇಡ್ಕರ್ ಭವನ ಸೇರಿದಂತೆ ಒಟ್ಟು 1.5 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್, ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ, ಜಿಪಂ ಸದಸ್ಯೆ ಜಯಪ್ರತಿಭಾ ನವೀನ್ ಭೂಮಿಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.