ಮತ್ತೆರಡು ಪಾಸಿಟಿವ್-ಸೋಂಕಿತರು 92
Team Udayavani, Jul 9, 2020, 1:03 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.
ಚಳ್ಳಕೆರೆಯ 26 ವರ್ಷದ ಯುವಕ ಹಾಗೂ ಹಿರಿಯೂರಿನ 44 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಬುಧವಾರ ಒಟ್ಟು 95 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಜಿಲ್ಲೆಯ ಒಟ್ಟು 92 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೇ 66 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಸದ್ಯ 26 ಸಕ್ರಿಯ ಪ್ರಕರಣಗಳಿವೆ. 26 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 10, ಭರಮಸಾಗರ-5, ಹಿರಿಯೂರು ತಾಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ 1, ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರ 3, ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ 4 ಹಾಗೂ ಹೊಸದುರ್ಗ ತಾಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 25 ಕಂಟೇನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಇದುವರೆಗೆ ಸಾರಿ ಮತ್ತು ಐಎಲ್ ಐ, ಯುಆರ್‌ಐನ ಒಟ್ಟು 2507 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 505 ಜನರು ಹೋಂ ಕ್ವಾರಂಟೈನ್ ನಲ್ಲಿ ಹಾಗೂ ಮೂವರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದಾರೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.