ಪ್ರಾಣ ಉಳಿಸಿಕೊಳ್ಳುವ ಸನ್ನಿವೇಶ ಸೃಷ್ಟಿ: ಮುರುಘಾಶ್ರೀ
Team Udayavani, Apr 20, 2020, 6:06 PM IST
ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರು ಪೊಲೀಸ್ ಇಲಾಖೆಗೆ ಸ್ಯಾನಿಟೈಸರ್ ಹಾಗೂ ಸ್ಪ್ರೇಯರ್ ವಿತರಿಸಿದರು.
ಚಿತ್ರದುರ್ಗ: ವ್ಯಕ್ತಿಯಿಂದ ವ್ಯಕ್ತಿಗೆ ಕೊರೊನಾ ಸೋಂಕು ಹರಡುತ್ತಿದೆ. ಮಾನವನ ಪ್ರಾಣವನ್ನು ಮಾನವನೇ ಉಳಿಸಬೇಕಾದ ತುರ್ತು ಸಂದರ್ಭ ಬಂದೊದಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಮುರುಘರಾಜೇಂದ್ರ ಮಠದಲ್ಲಿ ಭಾನುವಾರ ಪೊಲೀಸ್ ಇಲಾಖೆಗೆ ಸ್ಯಾನಿಟೈಸರ್ ಸ್ಪ್ರೇಯರ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಜಗತ್ತು ಸಂಕಟ ಅನುಭವಿ ಸುತ್ತಿದೆ. ಮಾನವ ತನ್ನ ಪ್ರಾಣವನ್ನು ತಾನೇ ಕಾಪಾಡಿ ಕೊಳ್ಳಬೇಕಿದೆ. ಕೊರೊನಾ ಎಂಬ ಭೀಕರ ಸೋಂಕಿನ ವಿರುದ್ಧ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯವರು ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿದ್ದಾರೆ. ಜನರ ಸೇವೆ ಮಾಡುವುದು, ಅವರ ಜೀವ ಉಳಿಸುವುದು ಅವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ನಾವು ಅವರನ್ನು ಗೌರವ ದಿಂದ ಕಾಣಬೇಕಿದೆ. ಅವರ ಆರೋಗ್ಯವೂ ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪೊಲೀಸ್ ಠಾಣೆಗಳಿಗೆ ಒಂದೊಂದು ಸ್ಯಾನಿಟೈಸರ್ ಸ್ಪ್ರೆàಯರ್ ಯಂತ್ರವನ್ನು ಶ್ರೀಮಠದಿಂದ ಕೊಡಲಾಗುತ್ತಿದೆ. ಇಲಾಖೆಯವರು ಸಹ ಅವರ ವಾಹನಗಳಿಗೆ, ಕಚೇರಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಅವರ ಆರೋಗ್ಯವನ್ನು ಕಾಪಾಡಿಕೊಳ್ಳಲಿ ಎಂದು ಆಶಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಮಾತನಾಡಿ, ಸಾರ್ವ ಜನಿಕರ ಯೋಗಕ್ಷೇಮದ ಜವಾಬ್ದಾರಿ ನಮ್ಮದು. ಅವರ ಆರೋಗ್ಯದ ಕಡೆ ನಾವು ಗಮನಹರಿಸಬೇಕಿದೆ. ಜೊತೆಗೆ ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದರು. ನಮ್ಮ ಇಲಾಖೆಗೆ ಶ್ರೀಗಳು ಸ್ಯಾನಿಟೈಸರ್ ಸ್ಪ್ರೇಯರ್ ಗಳನ್ನು ನೀಡಿರುವುದು ನಮ್ಮ ಆರೋಗ್ಯದ ಬಗ್ಗೆ ಅವರಿಗಿರುವ ಕಾಳಜಿ ದೊಡ್ಡದು ಎಂಬುದನ್ನು ತೋರಿಸುತ್ತದೆ ಎಂದರು.
ಸ್ಯಾನಿಟೈಸರ್ ಅನ್ನು ಪೊಲೀಸ್ ಇಲಾಖೆ ವಾಹನಕ್ಕೆ ಸಿಂಪಡಿಸುವ ಮೂಲಕ ಸ್ಪ್ರೇಯರ್‌ನ ಪ್ರಾತ್ಯಕ್ಷಿಕೆಯನ್ನು ತೋರಿಸಲಾಯಿತು. ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ನಂದಗಾವಿ, ಡಿವೈಎಸ್‌ಪಿ ಪಾಂಡುರಂಗಪ್ಪ, ಡಿಎಆರ್ ಡಿವೈಎಸ್ಪಿ ತಿಪ್ಪೇಸ್ವಾಮಿ, ಸಿಪಿಐಗಳಾದ ಗಿರೀಶ್, ನಹೀಂ, ಪ್ರಕಾಶ್, ಸೋಮಶೇಖರ್, ಎಸ್.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಸಿಇಒ ಎಂ.ಜಿ. ದೊರೆಸ್ವಾಮಿ, ಮಲ್ಲಿಕಾರ್ಜುನಯ್ಯ, ನಗರಸಭಾ ಸದಸ್ಯ ಸುರೇಶ್, ಬಿಜೆಪಿ ಮುಖಂಡ ಕಲ್ಲೇಶಯ್ಯ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.