ಇನ್ಮುಂದೆ ಡ್ರೋಣ್ ಕಣ್ಗಾವಲು
Team Udayavani, Apr 25, 2020, 5:30 PM IST
ಚಿತ್ರದುರ್ಗ: ನಗರದ ಜಗದ್ಗುರು ಜಯದೇವ ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆಯಿಂದ ಡ್ರೋಣ್ ಕ್ಯಾಮೆರಾ ಕಣ್ಗಾವಲಿಗೆ ಚಾಲನೆ ನೀಡಲಾಯಿತು.
ಚಿತ್ರದುರ್ಗ: ಕೋವಿಡ್ ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರ ವಿಧಿಸಿರುವ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಡ್ರೋಣ್ ಕ್ಯಾಮೆರಾ ಬಳಕೆಗೆ ಚಾಲನೆ ನೀಡಿದೆ. ನಗರದ ಜಗದ್ಗುರು ಜಯದೇವ ಕ್ರೀಡಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಡ್ರೋಣ್ ಕ್ಯಾಮರಾ ಬಳಕೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಎರಡನೇ ಹಂತ ತಲುಪಿರುವುದರಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕಿನಲ್ಲೂ ಬಿಗಿ ಬಂದೋಬಸ್ತ್ಮಾಡಲಾಗಿದೆ. ಅನೇಕ ಸಲ ಎಲ್ಲಾ ಕಡೆ ಪೊಲೀಸರು ಹೋಗುವುದು ಕಷ್ಟ. ಇಕ್ಕಟ್ಟಾದ ಜಾಗ ಹಾಗೂ ಒಂದು ರಸ್ತೆಯಲ್ಲಿ ನಿಂತು ಮತ್ತೂಂದು ರಸ್ತೆಯಲ್ಲಿನ ಚಟುವಟಿಕೆ ಗಮನಿಸುವುದು ಕಷ್ಟವಾಗುತ್ತದೆ. ಹೀಗಾಗಿ ಎಲ್ಲವನ್ನೂ ಮೇಲಿನಿಂದ ಗಮನಿಸಿ ತಕ್ಷಣ ಅಲ್ಲಿಗೆ ಧಾವಿಸಿ ಗುಂಪು ಚದುರಿಸಲು ಹಾಗೂ ರಸ್ತೆಗೆ ಬಂದವರನ್ನು ಗುರುತಿಸುವ ಉದ್ದೇಶಕ್ಕೆ ಡ್ರೋಣ್ ಕ್ಯಾಮೆರಾ ಬಳಸುತ್ತಿದ್ದೇವೆ ಎಂದರು.
ಜಿಲ್ಲಾ ಪೊಲೀಸ್ ಇಲಾಖೆ ಬಳಸುತ್ತಿರುವ ಡ್ರೋಣ್ ಕ್ಯಾಮೆರಾ 150 ಮೀಟರ್ ಎತ್ತರದಲ್ಲಿ ಹಾರಾಡುತ್ತಾ 5 ಕಿಮೀ ವ್ಯಾಪ್ತಿಯಲ್ಲಿ ಕಣ್ಗಾವಲು ಇಡಲಿದೆ. ಮುಂದಿನ ವಾರ ಮತ್ತೂಂದು ಡ್ರೋಣ್ ಕ್ಯಾಮೆರಾ ಖರೀದಿಸಲಿದ್ದೇವೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಅನಗತ್ಯವಾಗಿ ಸುತ್ತಾಡುವವರು, ಗುಂಪು ಸೇರುವವರು, ಜೂಜು ಆಡುವವರು ಸೇರಿದಂತೆ ಎಲ್ಲಾ ರೀತಿಯ ಅಕ್ರಮ ಚಟುವಟಿಕೆ ಮಾಡುವವರ ಮೇಲೆ ಕಣ್ಣಿಟ್ಟು, ಫೂಟೋ, ವೀಡಿಯೋ ಸಮೇತ ಹಿಡಿಯಲು ಈ ಕ್ಯಾಮೆರಾ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ಬಿ. ನಂದಗಾವಿ, ಡಿವೈಎಸ್ಪಿಗಳಾದ ತಿಪ್ಪೇಸ್ವಾಮಿ, ಪಾಂಡುರಂಗಪ್ಪ, ಸಿಪಿಐಗಳಾದ ಪ್ರಕಾಶ್, ನಹೀಂ ಅಹಮ್ಮದ್, ಗಣೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.