ಖಾತ್ರಿ ಯೋಜನೆಯಡಿ ಸಮರೋಪಾದಿ ಕೆಲಸ

Team Udayavani, May 23, 2020, 3:30 PM IST

22-May-13

ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಕೋವಿಡ್ ಲಾಕ್‌ಡೌನ್‌ ಕಾರಣಕ್ಕೆ ಜಿಲ್ಲೆಗೆ ಆಗಮಿಸಿರುವ ಕೂಲಿ ಕಾರ್ಮಿಕರು, ರೈತರಿಗೆ ನೆರವಾಗುವ ಉದ್ದೇಶದಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಸಮರೋಪಾದಿಯಲ್ಲಿ ಕೆಲಸ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಹೊನ್ನಾಂಬ ತಿಳಿಸಿದ್ದಾರೆ.

ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇಷ್ಟು ದಿನ ಬೇರೆ ಜಿಲ್ಲೆ, ರಾಜ್ಯಗಳಲ್ಲಿದ್ದು, ಈಗ ಜಿಲ್ಲೆಗೆ ಆಗಮಿಸಿರುವ ಕಾರ್ಮಿಕರಿಗೆ ಜಾಬ್‌ಕಾರ್ಡ್‌ ನೀಡಲಾಗುವುದು. ಈ ವರ್ಷ ನರೇಗಾದಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಆರಂಭಿಸಿದ್ದು, ರೈತರು ತಮ್ಮ ಹೊಲಗಳಲ್ಲಿ ಕೃಷಿಹೊಂಡ, ಬದು ನಿರ್ಮಾಣ ಕಾಮಗಾರಿ ಕೈಗೊಳ್ಳಬಹುದಾಗಿದೆ ಎಂದರು.

ನರೇಗಾದಡಿ ಏನೇನು ಮಾಡಬಹುದು?: ನರೇಗಾ ಯೋಜನೆಯಡಿ ಪ್ರಸ್ತುತ ವೈಯಕ್ತಿಕ ಕಾಮಗಾರಿಗಳು, ಬದುಗಳ ನಿರ್ಮಾಣ, ಕೃಷಿ ಹೊಂಡ, ಅರಣ್ಯದಲ್ಲಿ ಗುಂಡಿ ತೆಗೆಯುವಿಕೆ, ಅರಣ್ಯದಲ್ಲಿ ನೀರು ಇಂಗಿಸುವ ಕಾಮಗಾರಿ, ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ, ರೇಷ್ಮೆ, ಕೃಷಿ ಇಲಾಖೆಯ ವತಿಯಿಂದ ಬದು ನಿರ್ಮಾಣ, ಸಮುದಾಯ ಆಧಾರಿತ ಕಾಮಗಾರಿಗಳಾದ ಕೆರೆ ಮತ್ತು ಗೋಕಟ್ಟೆ ಹೂಳೆತ್ತುವುದು, ಕನ್ವರ್ಜೆನ್ಸ್‌ ಕಾಮಗಾರಿ ಮಾಡಬಹುದು ಎಂದು ಹೊನ್ನಾಂಬ ಮಾಹಿತಿ ನೀಡಿದ್ದಾರೆ.

75 ಲಕ್ಷ ಮಾನವ ದಿನ ಸೃಜನೆ ಗುರಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ನರೇಗಾ ಯೋಜನೆಯಡಿ 75 ಲಕ್ಷ ಮಾನವ ದಿನ ಸೃಜನೆಯ ಗುರಿ ಹೊಂದಿದ್ದು, ಇದಕ್ಕಾಗಿ ಕನಿಷ್ಟ 300 ಕೋಟಿ ರೂ. ವೆಚ್ಚ ಮಾಡುವ ಅಂದಾಜು ಮಾಡಿಕೊಳ್ಳಲಾಗಿದೆ. ಇದಕ್ಕಿಂತ ಹೆಚ್ಚಿನ ಮಾನವ ದಿನಗಳ ಸೃಜನೆಯಾದರೂ ಸರ್ಕಾರ ಅನುದಾನ ನೀಡಲು ಅವಕಾಶ ಕಲ್ಪಿಸಿದೆ. 275 ರೂ. ಕೂಲಿ ನಿಗದಿ ಮಾಡಲಾಗಿದೆ. ಕೂಲಿ ಕಾರ್ಮಿಕರು ಸಲಕೆ, ಗುದ್ದಲಿ ಮುಂತಾದ ಸಲಕರಣೆಗಳನ್ನು ಕೊಂಡೊಯ್ದರೆ ಹೆಚ್ಚುವರಿಯಾಗಿ 10 ರೂ. ಕೂಲಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಜಿಪಂ ಉಪಕಾರ್ಯದರ್ಶಿ ಡಾ| ಎಸ್‌. ರಂಗಸ್ವಾಮಿ ಮಾಹಿತಿ ನೀಡಿ, ಜಿಲ್ಲೆಯ 188 ಗ್ರಾಪಂಗಳಲ್ಲಿ ನರೇಗಾ ಕೆಲಸ ಆರಂಭವಾಗಿವೆ. ಇದುವರೆಗೆ 4.03 ಲಕ್ಷ ಮಾನವ ದಿನ ಸೃಜನೆಯಾಗಿದ್ದು, ನರೇಗಾ ಯೋಜನೆಯಡಿ ಸದ್ಯ ಜಿಲ್ಲೆಯಲ್ಲಿ 27 ಸಾವಿರ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ 10 ಕೋಟಿ ರೂ. ಕೂಲಿ ಬಾಬ್ತು ಪಾವತಿಸಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ಕೂಲಿ ಕೆಲಸವಿಲ್ಲದೆ ಆತಂಕದಲ್ಲಿದ್ದ ಜಿಲ್ಲೆಯ ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟದಿಂದ ಪಾರಾಗಲು ಸರ್ಕಾರ ಅನುಕೂಲ ಕಲ್ಪಿಸಿದೆ ಎಂದರು.

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.