ಸ್ನಾತಕೋತ್ತರ ಕೇಂದ್ರಕ್ಕೆ ಅನುದಾನ; ಭರವಸೆ
Team Udayavani, Jun 8, 2020, 1:26 PM IST
ಚಿತ್ರದುರ್ಗ: ಜಿ.ಆರ್. ಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಸಂಸದ ನಾರಾಯಣಸ್ವಾಮಿ ಸಸಿ ನೆಟ್ಟರು
ಚಿತ್ರದುರ್ಗ: ನಗರದ ಹೊರವಲಯದಲ್ಲಿ ಜಿ.ಆರ್.ಹಳ್ಳಿ ಬಳಿ ಇರುವ ಸ್ನಾತಕೋತ್ತರ ಕೇಂದ್ರದ ಅಭಿವೃದ್ಧಿಗೆ ನೆರವಾಗುವುದಾಗಿ ಸಂಸದ ನಾರಾಯಣಸ್ವಾಮಿ ತಿಳಿಸಿದರು.
ಸ್ನಾತಕೋತ್ತರ ಕೇಂದ್ರದಲ್ಲಿ ಸಂಸದ ನಾರಾಯಣಸ್ವಾಮಿ ಸಸಿ ನೆಟ್ಟು ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದರು. ಸ್ನಾತಕೋತ್ತರ ಕೇಂದ್ರಕ್ಕೆ ಅಗತ್ಯವಿರುವ ಗ್ರಂಥಾಲಯ, ಪ್ರಯೋಗಾಲಯ ಸೇರಿದಂತೆ ಮೂಲಸೌಕರ್ಯ ಒದಗಿಸಲು ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಅನುದಾನ ಬಿಡುಗಡೆ ಮಾಡಿಸುವ ಭರವಸೆ ನೀಡಿದರು. ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಮುಖವಾಗಿ ಮುಖ್ಯದ್ವಾರ ಹಾಗೂ ನಾಮಫಲಕ ನಿರ್ಮಾಣ, ಸುತ್ತಲೂ ತಡೆಗೊಡೆ ನಿರ್ಮಾಣ, ರಸ್ತೆಯ ಎರಡೂ ಬದಿಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗಾಗಿ ತಂಗುದಾಣ ನಿರ್ಮಾಣ, ಸೂಕ್ತ ರೀತಿಯಲ್ಲಿ ಸ್ಥಳೀಯ ಬಸ್ ಸಂಚಾರ ವ್ಯವಸ್ಥೆ, ಶಾಂತಿಸಾಗರ ನೀರನ್ನು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಅನುಮತಿಯೊಂದಿಗೆ ಸ್ನಾತಕೋತ್ತರ ಕೇಂದ್ರಕ್ಕೆ ಒದಗಿಸುವ ಕುರಿತು ಸಂಸದರು ಭರವಸೆ ನೀಡಿದರು.
ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರದ ಸಂಯೋಜನಾಧಿಕಾರಿ ಹಾಗೂ ನಿರ್ದೇಶಕ ಡಾ| ಎಚ್. ವಿಶ್ವನಾಥ್, ಸಹಪ್ರಾಧ್ಯಾಪಕರಾದ ಡಾ| ಸತ್ಯನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.