ಸಹಾಯವಾಣಿ ಕೇಂದ್ರಕ್ಕೆ ಕರೆಗಳ ಮಹಾಪೂರ
400ಕ್ಕೂ ಅಧಿಕ ಕರೆ ದಾಖಲುತುರ್ತು ಅಗತ್ಯವಿದ್ದಲ್ಲಿ ಸಂಪರ್ಕಿಸಿ ಸಹಾಯ ಪಡೆಯಿರಿ
Team Udayavani, Apr 25, 2020, 11:34 AM IST
ಚಿತ್ರದುರ್ಗ: ಡಿಸಿ ಕಚೇರಿ ಸಭಾಂಗಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಕೇಂದ್ರ.
ಚಿತ್ರದುರ್ಗ: ಕೊರೊನಾ ಲಾಕ್‌ಡೌನ್‌ನಿಂದ ಯಾರೂ ಸಂಕಷ್ಟಕ್ಕೆ ಸಿಲುಕಬಾರದು ಎಂಬ ಕಾರಣಕ್ಕೆ ಜಿಲ್ಲಾಡಳಿತ ತೆರೆದಿರುವ ಸಹಾಯವಾಣಿ ಕೇಂದ್ರಕ್ಕೆ ಇದುವರೆಗೆ 400ಕ್ಕೂ ಅಧಿಕ ಕರೆಗಳು ಬಂದಿವೆ. ಮಾ. 28 ರಂದು ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಮೊದಲೆಲ್ಲ ವಿಪರೀತ ಕರೆಗಳು ಬರುತ್ತಿದ್ದವು. ಆದರೆ ಸರ್ಕಾರ ಎರಡು ತಿಂಗಳಿಗೆ ಸಾಕಾಗುವಷ್ಟು ಪಡಿತರವನ್ನು ಒಮ್ಮೆಲೆ ವಿತರಿಸುವ ತೀರ್ಮಾನ ತೆಗೆದುಕೊಂಡು ಅದರಂತೆ ಎಲ್ಲರಿಗೂ ಪಡಿತರ ವಿತರಣೆ ಮಾಡಿದ ನಂತರ ಈ ಕರೆಗಳ ಸಂಖ್ಯೆ ಕಡಿಮೆಯಾಗಿವೆ ಎನ್ನುವುದು ವಿಶೇಷ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಿನದ 24 ಗಂಟೆಯೂ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಜಿಪಂ ಉಪ ಕಾರ್ಯದರ್ಶಿ ಡಾ| ರಂಗಸ್ವಾಮಿ ಇದರ ನೋಡಲ್ ಅಧಿಕಾರಿಯಾಗಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ ತಲಾ 8 ಗಂಟೆಯಂತೆ ಮೂರು ಶಿಫ್ಟ್ ನಲ್ಲಿ 12 ಜನ ಕೆಲಸ ಮಾಡುತ್ತಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ ಒಟ್ಟು 6 ಪ್ರತ್ಯೇಕ ಸ್ಥಿರ ದೂರವಾಣಿಗಳನ್ನು ಸ್ಥಾಪಿಸಿದ್ದು, ಇಲ್ಲಿಗೆ ಬರುವ ಎಲ್ಲಾ ಕರೆಗಳನ್ನು ಸ್ವೀಕರಿಸಿ ದಾಖಲಿಸಿ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 200, ಆರೋಗ್ಯ ಇಲಾಖೆ-65, ಆಹಾರ ಇಲಾಖೆ-86 ಕರೆ ಬಂದಿರುವುದು ದಾಖಲಾಗಿದೆ. ಗ್ರಾಮೀಣಾಭಿವೃದ್ಧಿ, ಪೊಲೀಸ್, ಕೃಷಿ, ತೋಟಗಾರಿಕೆ, ನಗರ ಸ್ಥಳೀಯ ಸಂಸ್ಥೆಗಳು, ಪಶುಸಂಗೋಪನೆ, ಸಮಾಜಕಲ್ಯಾಣ, ತೂಕ ಮತ್ತು ಅಳತೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳಿಗೆ ಸಂಬಂಧಿಸಿದ ಕರೆಗಳು ಬಂದಿವೆ. ತುರ್ತು ವೈದ್ಯಕೀಯ ಸೇವೆ, ಶವಸಂಸ್ಕಾರ, ಮದುವೆ ಕಾರಣಗಳಿಗಾಗಿ ಹೊರ ಜಿಲ್ಲೆ, ರಾಜ್ಯಗಳಿಗೆ ತೆರಳಲು ಪಾಸ್ ಬಯಸಿ ಫೋನ್ ಮಾಡುತ್ತಾರೆ. ಈಗ ಇ-ಪಾಸ್ ವ್ಯವಸ್ಥೆ ಜಾರಿಯಾಗಿರುವುದರಿಂದ ಇದರ ಸಂಖ್ಯೆಯೂ ಕಡಿಮೆಯಾಗಬಹುದು ಎನ್ನಲಾಗಿದೆ.
ಅಗತ್ಯವಿದ್ದಲ್ಲಿ, ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲೆಯ ನಾಗರೀಕರು ಕರೆ ಮಾಡಬಹುದು. ಸಹಾಯವಾಣಿ ಸಂಖ್ಯೆಗಳು: 08194-222050, 222044, 222027, 222038, 222056, 222035
ಲಾಕ್‌ಡೌನ್‌ನಿಂದ ಕೂಲಿಕಾರರು, ಹಮಾಲರು, ಸರಕು ಸಾಗಾಣಿಕೆ ವಾಹನಗಳ ಕೊರತೆಯ ನಡುವೆಯೂ ಜಿಲ್ಲೆಯ ಬಡವರಿಗಾಗಿ ನೀಡುತ್ತಿರುವ 2
ತಿಂಗಳ ಉಚಿತ ಪಡಿತರವನ್ನು ಶೇ. 94 ರಷ್ಟು ಪೂರ್ಣಗೊಳಿಸಲಾಗಿದೆ. ಆಹಾರ ಇಲಾಖೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಮಧುಸೂದನ್,
ಆಹಾರ ಮತ್ತು ನಾಗರಿಕ ಸರಬರಾಜು
ಇಲಾಖೆ ಉಪನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.