ಅನುದಾನ ಬಳಸದ ಅಧಿಕಾರಿಗಳ ವಿರುದ್ಧ ಕ್ರಮ

ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ 25.81 ಕೋಟಿ ರೂ. ವಾಪಸ್‌

Team Udayavani, Jun 11, 2020, 1:25 PM IST

11-June-11

ಚಿತ್ರದುರ್ಗ: ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ನಡೆಯಿತು

ಚಿತ್ರದುರ್ಗ: ಕಳೆದ ಆರ್ಥಿಕ ವರ್ಷದಲ್ಲಿ ಜಿಪಂ ವ್ಯಾಪ್ತಿಯ ವಿವಿಧ ಇಲಾಖೆಗಳ ಅನುದಾನ ಬಳಕೆಯಾಗದೆ ವಾಪಾಸಾಗಿರುವುದನ್ನು ಪರಿಶೀಲಿಸಿ ಇದಕ್ಕೆ ಕಾರಣವಾದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಎಚ್ಚರಿಸಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ ಸುಮಾರು 25.81 ಕೋಟಿ ರೂ. ಸರ್ಕಾರಕ್ಕೆ ಹೋಗಿದೆ. ಜೊತೆಗೆ ಶಿಕ್ಷಣ, ಆರೋಗ್ಯ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅನುದಾನವೂ ವಾಪಾಸ್ಸು ಹೋಗಿದೆ. ಅನುದಾನ ಲ್ಯಾಪ್ಸ್‌ ಆಗದಂತೆ ಎಚ್ಚರಿಕೆ ವಹಿಸುವಂತೆ ಕಳೆದ ಸಭೆಯಲ್ಲೂ ಗಂಭೀರವಾಗಿ ಚರ್ಚಿಸಲಾಗಿತ್ತು. ಆದಾಗ್ಯೂ ದೊಡ್ಡ ಮಟ್ಟದಲ್ಲಿ ಅನುದಾನ ಲ್ಯಾಪ್ಸ್‌ ಆಗಿದೆ. ಕಳೆದ ಜೂನ್‌ ತಿಂಗಳಲ್ಲಿ ಕಾಮಗಾರಿಗೆ ಅನುಮೋದನೆ ನೀಡಿದ್ದರೂ ಅನುದಾನ ವಾಪಾಸಾಗಿದೆ. ಇದು ಜಿಲ್ಲೆಗೆ ಆಗಿರುವ ನಷ್ಟ ಎಂದು ಸದಸ್ಯರಾದ ಸೌಭಾಗ್ಯ ಬಸವರಾಜನ್‌ ಹಾಗೂ ಗುರುಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ವಿವಿಧ ಇಲಾಖೆಗಳಲ್ಲಿ ಹಣ ಅಪವ್ಯಯವಾಗಿರುವ ಅನುದಾನವನ್ನು ವಾಪಸ್‌ ತರಲು ಮರುಪರಿಶೀಲನೆ ಮಾಡುವಂತೆ ಸದಸ್ಯರಾದ ಕೃಷ್ಣಮೂರ್ತಿ, ಗುರುಮೂರ್ತಿ, ಪ್ರಕಾಶಮೂರ್ತಿ, ಅನಂತ್‌, ಸೌಭಾಗ್ಯ ಸೇರಿದಂತೆ ಹಲವು ಸದಸ್ಯರು ಅಧ್ಯಕ್ಷರಲ್ಲಿ ಮನವಿ ಮಾಡಿದರು. ಉಪಕಾರ್ಯದರ್ಶಿ ಓಂಕಾರಪ್ಪ ಪ್ರತಿಕ್ರಿಯಿಸಿ, ಸರ್ಕಾರದಿಂದ ಮೇ ತಿಂಗಳಲ್ಲಿ ಪತ್ರ ಬಂದಿದೆ. ಇಡೀ ಜಿಪಂ ಅ ಧೀನದಲ್ಲಿ ಬರುವ ಎಲ್ಲಾ ಇಲಾಖೆಗಳ ಅನುದಾನದ ವಿವರವನ್ನು, ಅನುದಾನ ಸ್ವೀಕಾರ, ಖರ್ಚು, ಎಷ್ಟು ಅಪವ್ಯಯವಾಗಿದೆ ಹಾಗೂ ಇದಕ್ಕೆ ಕಾರಣ ಹಾಗೂ ಕಾರಣಕರ್ತರು ಯಾರು ಇಷ್ಟು ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. 25.81 ಕೋಟಿ ರೂ. ಅನುದಾನ ವಾಪಸ್‌ಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಮತ್ತೂಮ್ಮೆ ಸರ್ಕಾರಕ್ಕೆ ಪತ್ರ ಬರೆಯಲಾವುದು ಎಂದು ಹೇಳಿದರು.

ಸದಸ್ಯ ನಾಗೇಂದ್ರ ನಾಯ್ಕ ಮಾತನಾಡಿ, ವಿವಿ ಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಆದರೆ, ಇಲ್ಲಿ ಆ್ಯಂಬುಲೆನ್ಸ್‌ ಸೌಲಭ್ಯವಿಲ್ಲ. ಆ್ಯಂಬುಲೆನ್ಸ್‌ ರಿಪೇರಿ ಮಾಡಲು ಒಂದೂವರೆ ವರ್ಷ ಬೇಕಾ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್‌ಒ ಡಾ| ಪಾಲಾಕ್ಷ, ಒಂದು ವಾರದಲ್ಲಿ ಆ್ಯಂಬುಲೆನ್ಸ್‌ ರಿಪೇರಿಯಾಗಲಿದೆ ಎಂದು ಮಾಹಿತಿ ನೀಡಿದರು.ಅಧಿಕಾರಿಗಳಿಗೆ ಸರ್ಕಾರದಿಂದ ಸಿಮ್‌ ಹಾಗೂ ಮೊಬೈಲ್‌ ನೀಡಲಾಗಿದೆ. ಆದರೆ ಯಾವ ಅಧಿಕಾರಿಗಳೂ ಮೊಬೈಲ್‌ ಆನ್‌ನಲ್ಲಿ ಇಟ್ಟಿರುವುದಿಲ್ಲ. ಯಾವಾಗಲೂ ಸ್ವೀಪ್‌ ಮಾಡಿಕೊಂಡಿರುತ್ತಾರೆ. ಹಾಗಾಗಿ ಸರ್ಕಾರಿ ಅಧಿಕಾರಿಗಳು, ಸರ್ಕಾರ ನೀಡಿರುವ ಮೊಬೈಲ್‌ ನಂಬರ್‌ ಬಳಸುವಂತೆ ನಿರ್ಣಯ ಮಂಡಿಸುವಂತೆ ಸದಸ್ಯ ಯೋಗೇಶ್‌ ಬಾಬು ಒತ್ತಾಯಿಸಿದರು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಸುಶೀಲಮ್ಮ, ಜಿಪಂ ಸಿಇಒ ಟಿ. ಯೋಗೇಶ್‌ ಸೇರಿದಂತೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಗೊಂದಲದ ಗೂಡಾದ ಸಭೆ
ಇದು ಸಾಮಾನ್ಯ ಸಭೆಯೇ ಅಥವಾ ವಿಶೇಷ ಸಭೆಯೇ ಮೊದಲು ತಿಳಿಸಿ ಎಂದು ಸದಸ್ಯೆ ಸೌಭಾಗ್ಯ ಬಸವರಾಜನ್‌ ಎತ್ತಿದ ಪ್ರಶ್ನೆಗೆ ಜಿಪಂ ಸಭಾಂಗಣ ಗೊಂದಲದ ಗೂಡಾಯಿತು. ಅಧ್ಯಕ್ಷೆ ಶಶಿಕಲಾ ನೀಡಿದ ಸಮಜಾಯಿಷಿಗೆ ತೃಪ್ತರಾಗದ ಸೌಭಾಗ್ಯ, ಅಧಿಕಾರಿಗಳ ಸ್ಪಷ್ಟನೆಗೆ ಒತ್ತಾಯಿಸಿದರು. ಇದು ಆಡಳಿತಾರೂಢ ಪಕ್ಷದ ಸದಸ್ಯರನ್ನು ಕೆರಳಿಸಿತು. ಈ ವಿಚಾರದಲ್ಲಿ ಅಧಿಕಾರಿಗಳು ಮಾಡಿರುವ ಎಡವಟ್ಟಿನ ಬಗ್ಗೆ ಸದಸ್ಯರೂ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿವೆ. ಈ ಬಗ್ಗೆ ಚರ್ಚೆ ಮಾಡಲು ಅವಕಾಶ ಮಾಡಿಕೊಡಿ ಎಂದು ಕಾಂಗ್ರೆಸ್‌ ಸದಸ್ಯ ಕೃಷ್ಣಮೂರ್ತಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಆದರೂ ಪ್ರಯೋಜನ ಆಗಲಿಲ್ಲ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.