ರೋಗ ಬಾರದಂತೆ ಜಾಗ್ರತೆ ವಹಿಸಿ
ಕೊರೊನಾ ವೈರಸ್‌ನಿಂದ ವಿಶ್ವದಾದ್ಯಂತ ಆತಂಕದ ವಾತಾವರಣ: ಮುರುಘಾಶ್ರಿ
Team Udayavani, Mar 6, 2020, 2:55 PM IST
ಚಿತ್ರದುರ್ಗ: ವಿಶ್ವದಾದ್ಯಂತ ಕೊರೊನಾ ವೈರಸ್‌ನಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ರೋಗ ಬರುವುದಕ್ಕಿಂತ ಮುಂಚೆಯೇ ಜಾಗ್ರತೆ ವಹಿಸಬೇಕು. ಅದಕ್ಕಾಗಿ ಸ್ವತ್ಛತೆ ಕಾಪಾಡಿಕೊಂಡು ಮುಖಕ್ಕೆ ಮಾಸ್ಕ್ ಧರಿಸಿ ಕೆಮ್ಮ ದಮ್ಮು ಬಾರದಂತೆ ನೋಡಿಕೊಂಡು ಸುರಕ್ಷಿತವಾಗಿರಿ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ನಗರದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್ ಸಹಯೋಗದಲ್ಲಿ ಗುರುವಾರ ನಡೆದ ಸಾಮೂಹಿಕ ಕಲ್ಯಾಣ ಮಹೋತ್ಸವದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.
ಈಗ ಎಲ್ಲಾ ಕಡೆ ಜಾತ್ರೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಸಾವಿರಾರು ಪ್ರಾಣಿ, ಪಶುಗಳ ಬಲಿ ನಡೆಸಲಾಗುತ್ತದೆ. ಪ್ರಾಣಿಬಲಿ ಮಾಡಬಾರದೆಂಬ ನಿಯಮವಿದ್ದರೂ ಕಣ್ತಪ್ಪಿಸಿ ಅನಾಗರಿಕವಾಗಿ ಹಾಗೂ ಅಮಾನವೀಯವಾಗಿ ನಡೆದುಕೊಳ್ಳಲಾಗುತ್ತಿದೆ. ಇದು ಪರಿಸರ ಮಾಲಿನ್ಯಕ್ಕೂ ಕಾರಣವಾಗಿ ಕಾಲರಾ, ಡೆಂಘೀ, ಎಚ್1ಎನ್1ನಂತಹ ಕಾಯಿಲೆಗಳು ಹರಡುವ ಸಂಭವವಿರುತ್ತದೆ. ಇದು ಅನಾಗರಿಕ ಮತ್ತ ಮೌಡ್ಯದ ಕೆಲಸ. ಇತ್ತೀಚೆಗೆ ವೈರಸ್ ಸೋಂಕಿನಿಂದಾಗಿ ಬಹುಬೇಗ ಎಲ್ಲ ಕಡೆ ಮಾರಣಾಂತಿಕ ಕಾಯಿಲೆಗಳು ಹರಡುತ್ತಿವೆ. ವಿಶ್ವದಾದ್ಯಂತ ಕೊರೊನಾ ವೈರಸ್ ನಿಂದಾಗಿ ಆತಂಕದ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್‌ನಲ್ಲಿ ನಡೆಯುತ್ತಿದ್ದ ಪುಸ್ತಕ ಮಾರಾಟ ಮೇಳವನ್ನು ಸ್ಥಗಿತಗೊಳಿಸಲಾಗಿದೆ ಎಂದರು.
ಕುದ್ನೂರು ತೋಂಟದಾರ್ಯ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಕಲ್ಯಾಣ ಕರ್ನಾಟಕದ ಭಾಗದಲ್ಲಿ ಹಬ್ಬ, ಜಾತ್ರೆ ಸಂದರ್ಭಗಳಲ್ಲಿ ಹೆಚ್ಚೆಂದರೆ 10 ಜೋಡಿ ವಿವಾಹಗಳಾಗುತ್ತವೆ. ಮುರುಘಾ ಶರಣರು 30 ವರ್ಷಗಳಿಂದ ವಿವಾಹ ನಡೆಸುತ್ತ, ದಾಸೋಹ, ಶಿಕ್ಷಣ ನೀಡುತ್ತ ಸಮಾಜ ಸೇವೆ ಮಾಡುತ್ತಿದ್ದಾರೆ. ಸಮಾಜದ ಕಟ್ಟಕಡೆಯವರೂ ಮುನ್ನೆಲೆಗೆ ಬರಬೇಕೆಂಬ ಉದ್ದೇಶದಿಂದ ಇತ್ತೀಚೆಗೆ ಶ್ರೀಗಳು ಅಸಂಖ್ಯ ಮಥರ
ಗಣಮೇಳವನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಕರ್ನಾಟಕದ ಎಲ್ಲ ಮೂಲೆಗಳಿಗೂ ಜಮುರಾ ಕಲಾವಿದರನ್ನು ಕಳುಹಿಸಿ ಮಾನವೀಯ ಮೌಲ್ಯವನ್ನು ಹಂಚುತ್ತಿದ್ದಾರೆ. ಹಸಿದವರಿಗೆ ಅನ್ನ ನೀಡುವ, ಬಿದ್ದವರನ್ನು ಮೇಲೆತ್ತುವ, ಖಾಲಿ ಕೈಗಳಿಗೆ ಕಾಯಕ ನೀಡುವ ಮುರುಘಾ ಮಠ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ನಾವು ನಡೆದರೆ ಧನ್ಯರಾಗುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಒಂದು ವಿಧವಾ ವಿವಾಹ ಸೇರಿದಂತೆ ಒಟ್ಟು 20 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವೇದಿಕೆಯಲ್ಲಿ ದಾಸೋಹಿಗಳಾದ ರಾಜಲಕ್ಷ್ಮೀ, ರವಿಶಂಕರ ರೆಡ್ಡಿ, ಸಂದೀಪ ಗುಂಡಾರ್ಪಿ ಇದ್ದರು. ಕೆಇಬಿ ಷಣ್ಮುಖಪ್ಪ, ಪೈಲ್ವಾನ್ ತಿಪ್ಪೇಸ್ವಾಮಿ, ತಿಪ್ಪಣ್ಣ ಮತ್ತಿತರರು ಭಾಗವಹಿಸಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಪ್ರೊ| ಸಿ.ಎಂ. ಚಂದ್ರಪ್ಪ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.