ಹೊಸ ಮದ್ಯದಂಗಡಿಗೆ ಅನುಮತಿ ಬೇಡ
Team Udayavani, Jun 6, 2020, 3:16 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಯಾವುದೇ ಒತ್ತಡ ಬಂದರೂ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸ ಮದ್ಯದಂಗಡಿ ಅಥವಾ ಬೇರೆಡೆಯಿಂದ ವರ್ಗಾವಣೆ ಮಾಡಬಾರದು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈವರೆಗೆ ಚಳ್ಳಕೆರೆ ಕ್ಷೇತ್ರಕ್ಕೆ ನಾನು ಒಂದೂ ಮದ್ಯದ ಅಂಗಡಿ ತೆರೆಯಲು ಬಿಟ್ಟಿಲ್ಲ. ಇದನ್ನು ಅಬಕಾರಿ ಅಧಿಕಾರಿಗಳೂ ಮಾಡಬಾರದು. ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂದರು. ಅಬಕಾರಿ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿ, ಚಳ್ಳಕೆರೆ ತಾಲೂಕು ವ್ಯಾಪ್ತಿಯಲ್ಲಿ ಸದ್ಯ 13 ಎಂಎಸ್‌ಐಎಲ್ ಮದ್ಯದಂಗಡಿ ಇದ್ದು, ಹೊಸದಾಗಿ ತೆರೆಯಲು ಅವಕಾಶ ನೀಡುವಂತೆ ನಾಲ್ಕು ಅರ್ಜಿಗಳು ಬಂದಿವೆ ಎಂದು ತಿಳಿಸಿದರು.
ಚಳ್ಳಕೆರೆ ಕಸಬ ಹಾಗೂ ಪರಶುರಾಂಪುರ ಹೋಬಳಿ ವ್ಯಾಪ್ತಿಯಲ್ಲಿ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಾರರ ಸುಮಾರು 20 ಕೋಟಿಯಷ್ಟು ಬೆಳೆಗಳ ನಷ್ಟ ಆಗಿದೆ. ಅದೇ ರೀತಿ ತುರುವನೂರು ಹೋಬಳಿಯ ವ್ಯಾಪ್ತಿಯಲ್ಲಿ ಎಷ್ಟು ಹೂವು, ಹಣ್ಣು, ತರಕಾರಿ ಬೆಳೆ ನಷ್ಟ ಆಗಿದೆ ಎಂದು ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು. ಹಾಗೆಯೇ ಈರುಳ್ಳಿ ಬೆಳೆ ನಷ್ಟದ ವರದಿಯನ್ನೂ ಕೊಡಬೇಕು ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸುಧಾಕರ್ ಅವರಿಗೆ ಸೂಚಿಸಿದರು. ತಾಪಂ ಅಧ್ಯಕ್ಷ ಡಿ.ಎಂ. ಲಿಂಗರಾಜು, ಉಪಾಧ್ಯಕ್ಷೆ ಶಾಂತಮ್ಮ, ಇಒ ಎಚ್. ಕೃಷ್ಣನಾಯ್ಕ, ಬಿಇಒ ಸಿದ್ದಪ್ಪ, ಟಿಎಚ್‌ಒ ಡಾ.ಬಿ.ವಿ. ಗಿರೀಶ್, ಸಿಡಿಪಿಒ ಸುಧಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.