ಕಷ್ಟಕ್ಕೆ ಸ್ಪಂದಿಸುವ ಮುರುಘಾ ಮಠದ ಸೇವೆ ಅನನ್ಯ
ಜನರಿಗೆ ಹಸಿವಾದಾಗ ನೆನಪಿಸಿಕೊಳ್ಳುವುದು ಮಧ್ಯಕರ್ನಾಟಕದ ಮುರುಘಾ ಮಠವನ್ನು: ಸಂಗಪ್ಪ
Team Udayavani, Apr 30, 2020, 3:43 PM IST
ಚಿತ್ರದುರ್ಗ: ಮುರುಘಾ ಮಠದಲ್ಲಿ 300 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಲಾಯಿತು
ಚಿತ್ರದುರ್ಗ: ಯಾರಾದರೂ ಕಷ್ಟ ಎಂದರೆ ಮೊದಲು ಸ್ಪಂದಿಸುವುದು ಮುರುಘಾಮಠ ಎಂದು ಅಪರ ಜಿಲ್ಲಾಧಿಕಾರಿ ಎ. ಸಂಗಪ್ಪ ಹೇಳಿದರು. ಮುರುಘರಾಜೇಂದ್ರ ಮಠದಲ್ಲಿ ಮಹಿಳಾ ಸೇವಾ ಸಮಾಜ, ದೇವಸ್ಥಾನಗಳ ಅರ್ಚಕರು, ಬಿಎಸ್‌ಎನ್‌ಎಲ್‌ನಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರು, ಪಡಿತರ ಚೀಟಿ ಇಲ್ಲದ ನಿವಾಸಿಗಳು, ವಿಜಯನಗರದ ಕೂಲಿ ಕಾರ್ಮಿಕರು ಸೇರಿದಂತೆ ಸುಮಾರು 300 ಕುಟುಂಬಗಳಿಗೆ ದವಸ-ಧಾನ್ಯ ವಿತರಿಸಿ ಅವರು ಮಾತನಾಡಿದರು.
ಮುರುಘಾ ಮಠದ ಸೇವೆ ಇಂದು ನಿನ್ನೆಯದಲ್ಲ, ಹಲವು ಶತಮಾನಗಳಿಂದ ಸಾಗಿಬಂದ ಪರಂಪರೆ ಇದು. ಪೂರ್ವದಿಂದ ಪಶ್ಚಿಮದ ಕಡೆ ಹೋಗುವ ಅನೇಕ ಪ್ರಯಾಣಿಕರು, ಪ್ರವಾಸಿಗರು, ಹಸಿವಾದಾಗ ನೆನಪಿಸಿಕೊಳ್ಳುವುದು ಮಧ್ಯ ಕರ್ನಾಟಕದ ಹೃದಯ ಭಾಗದಲ್ಲಿರುವ ಚಿತ್ರದುರ್ಗದ ಮುರುಘಾ ಮಠವನ್ನು ಎಂದರು. ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಬಸವಾದಿ ಶರಣರ ತತ್ವಗಳನ್ನು ಆಚರಿಸುವುದೆಂದರೆ ಹಸಿದವರಿಗೆ ಮೊದಲು ಅನ್ನ ಕೊಡುವುದು. ಶ್ರೀಮಠದಿಂದ ಪ್ರತಿ ವರ್ಷ ಬೇಸಿಗೆಯಲ್ಲಿ ಎಸ್‌ಜೆಎಂ ದಂತ ಮಹಾವಿದ್ಯಾಲಯದ ಹತ್ತಿರ ಮಜ್ಜಿಗೆ ವಿತರಣೆಯನ್ನು ಮಾಡಲಾಗುತ್ತಿತ್ತು. ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ದವಸ-ಧಾನ್ಯ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಡಿಎ ಚ್ ಒ ಡಾ| ಪಾಲಾಕ್ಷ, ಕಾಂಗ್ರೆಸ್ ಮುಖಂಡ ಹನುಮಲಿ ಷಣ್ಮುಖಪ್ಪ ಮಾತನಾಡಿದರು. ಜಂಗಮ ಸಮಾಜದ ಮಲ್ಲಿಕಾರ್ಜುನಯ್ಯ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ. ವೀರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‌ಪೀರ್, ಎಸ್.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಸಿಇಒ ಎಂ.ಜಿ. ದೊರೆಸ್ವಾಮಿ, ವಕೀಲರಾದ ಉಮೇಶ್, ಆರ್. ಶೇಷಣ್ಣಕುಮಾರ್, ಮಹಡಿ ಶಿವಮೂರ್ತಿ, ಪೈಲ್ವಾನ್ ತಿಪ್ಪೇಸ್ವಾಮಿ ಚಿತ್ರದುರ್ಗ: ಮುರುಘಾ ಮಠದಲ್ಲಿ 300 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಲಾಯಿತು. ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.