ಮುರುಘಾ ಮಠದಿಂದ ಹೊಸ ಮೈಲಿಗಲ್ಲು
ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ 9710 ಜನರಿಗೆ ಕೇವಲ 27 ದಿನದಲ್ಲಿ ಆಹಾರ ಸಾಮಗ್ರಿ ವಿತರಣೆ
Team Udayavani, May 4, 2020, 2:38 PM IST
ಚಿತ್ರದುರ್ಗ: ಸರಳ, ಸಾಮೂಹಿಕ ಕಲ್ಯಾಣ ಮಹೋತ್ಸವ, ನಿತ್ಯ ದಾಸೋಹ ಮತ್ತಿತರೆ ಕಾರಣಗಳಿಗೆ ಹೆಸರಾಗಿರುವ ಚಿತ್ರದುರ್ಗದ ಮುರುಘಾ ಮಠ, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ನಿರಂತರವಾಗಿ ಬಡವರಿಗೆ ದವಸ-ಧಾನ್ಯ ವಿತರಣೆ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ.
ಲಾಕ್‌ಡೌನ್ ಘೋಷಣೆಯಾಗಿ ಜನರು ಸಂಕಷ್ಟಕ್ಕೆ ತುತ್ತಾಗುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿದ್ದಂತೆ ಮಠದ ಅಂಗಳದಲ್ಲಿ ದಿನವೂ ಕನಿಷ್ಠ 200 ರಿಂದ 500 ಜನರವರೆಗೆ ದವಸ-ಧಾನ್ಯ ವಿತರಣೆ ಮಾಡಲು ಆರಂಭಿಸಲಾಯಿತು. ಕೂಲಿ ಕಾರ್ಮಿಕರು, ಆಟೋ ಚಾಲಕರು, ವಿಕಲಚೇತನರು, ಹೋಂ ಗಾರ್ಡ್ಸ್, ಪತ್ರಿಕಾ ವಿತರಕರು, ಕೊಳಗೇರಿ ನಿವಾಸಿಗಳು, ವಿವಿಧ ಸಮುದಾಯದ ಬಡವರು ಸೇರಿದಂತೆ ಏಪ್ರಿಲ್ 4 ರಿಂದ ಮೇ 3 ರವರೆಗೆ ನಿರಂತರ 27 ದಿನಗಳ ಕಾಲ ಬರೋಬ್ಬರಿ 9710 ಜನರಿಗೆ ಆಹಾರ ಸಾಮಗ್ರಿ ವಿತರಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ 11 ಗಂಟೆಗೆ ಡಾ| ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ದಿನಸಿ ವಿತರಿಸಲಾಗಿದೆ. ಈ ಮೂಲಕ ಕೊರೊನಾ ಸಂದರ್ಭದಲ್ಲಿ ಹಸಿದವರಿಗೆ ಅನ್ನ ನೀಡಿದ ಮಠ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ದವಸ-ಧಾನ್ಯ ವಿತರಣೆಯ ಕೊನೆಯ ದಿನವಾದ ಭಾನುವಾರ ಡಾ| ಶಿವಮೂರ್ತಿ ಮುರುಘಾ ಶರಣರು ಪೆಟ್ರೋಲ್ ಬಂಕ್ ಕಾರ್ಮಿಕರು, ಗರ್ಭಿಣಿರು, ಕೊರಿಯರ್ ಸಿಬ್ಬಂದಿ, ಸೀಬಾರ, ಗುತ್ತಿನಾಡು ಕಾರ್ಮಿಕರು, ಬಸವ ಬಳಗ, ಕೊಳಗೇರಿ ನಿವಾಸಿಗಳಿಗೆ ಆಹಾರ ಸಾಮಗ್ರಿ ವಿತರಿಸಿದರು.
ನಂತರ ಮಾತನಾಡಿದ ಮುರುಘಾ ಶರಣರು, ಕೊರೊನಾ ಮಹಾಮಾರಿ ಜನರನ್ನು ಅಸಹಾಯಕರನ್ನಾಗಿ ಮಾಡಿದೆ. ಇಂತಹ ಸಂದರ್ಭದಲ್ಲಿ ಮನೆಯೇ ಅತ್ಯಂತ ಸುರಕ್ಷಿತ, ಬೀದಿಗೆ ಬರಬಾರದು ಎನ್ನುವುದು ಅರಿವಾಗಿದೆ. ಮುಂದೆಯೂ ಸಾಮಾಜಿಕ ಅಂತರ ಕಾಪಾಡಿಕೊಂಡಲ್ಲಿ ನಾವು ಆರೋಗ್ಯವಂತರಾಗಿ ಬದುಕಬಹುದು ಎಂದರು. ಲಾಕ್‌ಡೌನ್ ಸಂದರ್ಭದಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಿಂದ ಪೊಲೀಸ್ ಇಲಾಖೆಯ ಸಾವಿರಾರು ಸಿಬ್ಬಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ಜಿಲ್ಲೆಯ ಪೊಲೀಸ್ ಇಲಾಖೆಗೆ ಸ್ಯಾನಿಟೈಸರ್ ಯಂತ್ರೋಪಕರಣ, ಸಾವಿರಾರು ಮಾಸ್ಕ್ ವಿತರಿಸಲಾಗಿದೆ. ದವಸ-ಧಾನ್ಯ ನೀಡುವ ಸಂದರ್ಭದಲ್ಲಿ ಬೆಳಗಿನ ಉಪಾಹಾರವನ್ನು ನೀಡಲಾಗಿದೆ. ಇಂತಹ ಕಾರ್ಯಗಳು ಮುಂದೊಂದು ದಿನ ಮುರುಘಾಮಠದ ಇತಿಹಾಸದಲ್ಲಿ ದಾಖಲಾಗುತ್ತವೆ ಎಂದು ಹೇಳಿದರು.
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಮುರುಘಾಮಠದಲ್ಲಿ ದಾಸೋಹದ ಪರಂಪರೆ ಬಹಳ ಹಿಂದಿನಿಂದಲೂ ನಡೆದು ಬಂದಿದೆ. ಹಿಂದಿನ ಜಗದ್ಗುರುಗಳು ನಾಡಿನ ಸಮಸ್ಯೆ, ಜನರ ಕಷ್ಟ ಅರಿತು ಜನರಿಗೆ ಆಸರೆಯಾಗಿದ್ದ ಸಂದರ್ಭಗಳು ನಮ್ಮ ಕಣ್ಮುಂದಿವೆ. ಶ್ರೀ ಜಯದೇವ ಸ್ವಾಮಿಗಳು ಉಳಿಸಿ ಗಳಿಸಿದ್ದಾರೆ. ಜಯವಿಭವ ಸ್ವಾಮಿಗಳು, ಮಲ್ಲಿಕಾರ್ಜುನ ಸ್ವಾಮಿಗಳು ಶ್ರೀಮಠವನ್ನು ಚೆನ್ನಾಗಿ ಬೆಳೆಸಿದ್ದಾರೆ. ಈಗಿನ ಗುರುಗಳಾದ ಮುರುಘಾ ಶರಣರು ಶ್ರೀಮಠವನ್ನು ವಿಶ್ವ ಭೂಪಟದಲ್ಲಿ ಬರುವಂತೆ ಮಾಡಿದ್ದಾರೆ. ಇದು ನಮ್ಮೆಲ್ಲರ ಪುಣ್ಯ. ನಾಡಿಗೆ, ರಾಷ್ಟ್ರಕ್ಕೆ ಗೌರವ ತರುವ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ದಾಸೋಹಕ್ಕಾಗಿ 50 ಕ್ವಿಂಟಾಲ್ ಅಕ್ಕಿ ನೀಡುವುದಾಗಿ ತಿಳಿಸಿದರು.
ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ವೀರಶೈವ ಸಮಾಜದ ಅಧ್ಯಕ್ಷ ಜಯಣ್ಣ, ಜಂಗಮ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ. ವೀರೇಶ್, ಬಸವೇಶ್ವರ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ| ಪ್ರಶಾಂತ್, ಉಪ ಪ್ರಾಂಶುಪಾಲ ಡಾ| ನಾರಾಯಣಮೂರ್ತಿ, ವೈದ್ಯಕೀಯ ಅಧೀಕ್ಷಕ ಡಾ| ಪಾಲಾಕ್ಷಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.