ನಿಸಾರ್ ನಾಡು ಕಂಡ ಶ್ರೇಷ್ಠ ಕವಿ
Team Udayavani, May 4, 2020, 1:34 PM IST
ಚಿತ್ರದುರ್ಗ: ಮುರುಘಾ ಶರಣರು ಡಾ| ನಿಸಾರ್ ಅಹಮ್ಮದ್ ಅವರನ್ನು ಆಶೀರ್ವದಿಸಿದ್ದ ಕ್ಷಣ.
ಚಿತ್ರದುರ್ಗ: ಕನ್ನಡ ನಾಡು ನುಡಿ ಬಗ್ಗೆ ಅನನ್ಯ ಪ್ರೀತಿ, ಕಾಳಜಿ ಇಟ್ಟುಕೊಂಡು “ನಿತ್ಯೋತ್ಸವ ಕವಿ’ ಎಂದೇ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದ ಪ್ರೊ| ನಿಸಾರ್ ಅಹಮ್ಮದ್ ಅಗಲಿಕೆಗೆ ಡಾ| ಶಿವಮೂರ್ತಿ ಮುರುಘಾ ಶರಣರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಡು ಕಂಡ ಶ್ರೇಷ್ಠ ಕವಿ, ವಿಮರ್ಶಕ ಅನುವಾದಕ ಇತ್ಯಾದಿ ಅನೇಕ ಬಾರಿ ನಮ್ಮೊಡನೆ ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದ ಅವರು ನವ್ಯ ದಲಿತ ಬಂಡಾಯ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತಿದ್ದರು. 2014 ರಲ್ಲಿ ಮುರುಘಾಮಠದ ಶಾಖಾ ಮಠವಾದ ನೆಲಮಂಗಲದ ವನಕಲ್ಲು ಸುಕ್ಷೇತ್ರ ಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ “ವನಕಲ್ಲು ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ನಮ್ಮದೇ ಮತ್ತೊಂದು ಶಾಖಾ ಮಠವಾದ ಅಥಣಿ ಗಚ್ಚಿನ ಮಠದಲ್ಲಿ 2017 ರಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದ ಉದ್ಘಾಟನೆ ಮಾಡಿದ್ದರು. ಒಬ್ಬ ಶ್ರೇಷ್ಠ ಚಿಂತಕರನ್ನು ಕನ್ನಡ ನಾಡು ಕಳೆದುಕೊಂಡಿದೆ. ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬದವರಿಗೆ ಬಸವಾದಿ ಪ್ರಮಥರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.