ರಾಜಕೀಯ ವೈಭವೀಕರಣದಿಂದ ಪ್ರಗತಿ ಕುಂಠಿತ
ಮಹಾತ್ಮ ಗಾಂಧಿಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪ್ರತಿಯೊಬ್ಬರೂ ಶ್ರಮಿಸಿ: ಹನುಮಂತಪ್ಪ
Team Udayavani, Mar 2, 2020, 3:32 PM IST
ಚಿತ್ರದುರ್ಗ: ಗ್ರಾಮೀಣ ಭಾಗದ ಒಂದೊಂದು ಮನೆಯಲ್ಲೂ ಮೂರ್‍ನಾಲ್ಕು ಪಕ್ಷ, ದ್ವೇಷ, ಅಸೂಯೆ, ಗಲಭೆ, ರಾಜಕಾರಣ ಹೆಚ್ಚಾಗಿದೆ. ಇಂತಹ ವ್ಯವಸ್ಥೆಯಲ್ಲಿ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ಕನಸಾಗಿಯೇ ಉಳಿದಿದೆ ಎಂದು ರಾಜ್ಯಸಭೆ ಮಾಜಿ ಸದಸ್ಯ ಎಚ್. ಹನುಮಂತಪ್ಪ ಬೇಸರ ವ್ಯಕ್ತಪಡಿಸಿದರು.
ಸರಸ್ವತಿ ವಿದ್ಯಾಸಂಸ್ಥೆ, ಸರಸ್ವತಿ ಕಾನೂನು ಕಾಲೇಜು ಹಾಗೂ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಸಂಯುಕ್ತಾಶ್ರಯದಲ್ಲಿ ಮಾ. 5 ರವರೆಗೆ ಹಳೇದ್ಯಾಮವ್ವನಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಹಳ್ಳಿಗಳಿಂದ ಕೂಡಿರುವ ದೇಶ. ವಿಪರ್ಯಾಸವೆಂದರೆ ಹಳ್ಳಿಗಳನ್ನು ನಗರೀಕರಣ ಮಾಡಲು ಹೊರಟಿದ್ದಾರೆ. ಗಾಂಧೀಜಿ ಚುನಾವಣೆಯೇ ಬೇಡ ಎಂದಿದ್ದರು. ರಾಜಕೀಯ ಚುನಾವಣೆಗಷ್ಟೇ ಇರಬೇಕು. ಚುನಾವಣೆ ಮುಗಿದ ನಂತರವೂ ಗ್ರಾಮಗಳಲ್ಲಿ ರಾಜಕೀಯ ಮಾಡಿಕೊಂಡು ಕಾಲ ಕಳೆಯುವುದಾದರೆ ಹಳ್ಳಿಗಳ ಉದ್ಧಾರ ಸಾಧ್ಯವಿಲ್ಲ. ಗ್ರಾಮದಲ್ಲಿ ಮುಖಂಡರೆಲ್ಲಾ ಸೇರಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ಆಡಳಿತ, ಸರ್ಕಾರ, ಸ್ವರಾಜ್ಯ ನಿಮ್ಮದಾಗಬೇಕು ಎನ್ನುವುದು ಗಾಂಧೀಜಿಯವರ ಕನಸಾಗಿತ್ತು ಎಂದರು.
ಗ್ರಾಮ ಸೇವಕರು ಹಾಗೂ ಶಿಕ್ಷಕರು ರಾಜಕಾರಣ ಮಾಡುತ್ತಿದ್ದಾರೆಂಬ ಅಪವಾದವಿದೆ. ನಿರುದ್ಯೋಗ ಸಮಸ್ಯೆ ಜಾಸ್ತಿಯಾಗಿದೆ. ಉದ್ಯೋಗ ಹುಡುಕಿಕೊಂಡು ಹಳ್ಳಿ ಯುವಕರು ದೊಡ್ಡ ದೊಡ್ಡ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಸರ್ಕಾರದಿಂದ ಬದಲಾವಣೆ ತರಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಬದಲಾವಣೆಯಾದರೆ ಸರ್ಕಾರ ಜನಜೀವನ ಬದಲಾಗುತ್ತದೆ. ಸರ್ಕಾರದ ಕಾರ್ಯಕ್ರಮಗಳು ಸಾಕಷ್ಟಿವೆ. ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗುತ್ತಿದ್ದರೂ ಸದ್ಬಳಕೆಯಾಗುತ್ತಿಲ್ಲ.
ಬಡವರು ಬಡವರಾಗಿಯೇ ಉಳಿದಿದ್ದಾರೆ ಎಂದು ವಿಷಾದಿಸಿದರು. ಸರಸ್ವತಿ ಕಾನೂನು ಕಾಲೇಜು ಪ್ರಾಚಾರ್ಯೆ ಪ್ರೊ| ಎಂ.ಎಸ್.ಸುಧಾದೇವಿ ಮಾತನಾಡಿ, ಸೇವಾ ಮನೋಭಾವದಿಂದ
ಹಳ್ಳಿಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡುವುದು ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ದೇಶ. ಯುವಶಕ್ತಿಯೇ ದೇಶದ ಭರವಸೆಯಾಗಿರುವುದರಿಂದ ಐದು ವರ್ಷಗಳ ಕಾಲ ಕಷ್ಟಪಟ್ಟು ಓದಿದರೆ ಜೀವನ ಪರ್ಯಂತ ಸುಖವಾಗಿರಬಹುದು. ವಿದ್ಯಾರ್ಥಿ ದೆಸೆಯಲ್ಲಿ ಸೋಮಾರಿಗಳಾದರೆ ಜೀವನವಿಡಿ ಕಷ್ಟಪಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ ಮಾತನಾಡಿದರು. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ವೇಣುಗೋಪಾಲ್, ಜನ್ನಪ್ಪ, ಶಿಕ್ಷಕ ಹನುಮಂತಪ್ಪ, ಅಜ್ಜಪ್ಪ, ಜಿ.ಟಿ. ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.