ಅಪಘಾತ ನಿಯಂತ್ರಣಕ್ಕೆ ಬೇಕಿದೆ ಇಚ್ಛಾಶಕ್ತಿ
ಯಮರೂಪಿ ರಸ್ತೆಗಳಲ್ಲಿ ನಿತ್ಯ ಓಡಾಡುವುದೇ ಕಷ್ಟಕಾಣದ ಸೂಚನಾ ಫಲಕ-ಸ್ಪೀಡ್ ಬ್ರೇಕರ್
Team Udayavani, Mar 15, 2020, 1:03 PM IST
ಚಿತ್ರದುರ್ಗ: ಅಪಘಾತಗಳ ನಿಯಂತ್ರಣಕ್ಕೆ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂಬುದು ಕೋಟೆ ನಾಡಿನ ಜನರ ಆಕ್ರೋಶದ ಪ್ರಶ್ನೆ.
ಇದರ ಬಗ್ಗೆ ಇರುವ ಅಸಹನೆ ಜಿಲ್ಲೆಯ ಸೋಷಿಯಲ್ ಮೀಡಿಯಾಗಳಲ್ಲೂ ಹೆಚ್ಚು ಸದ್ದು ಮಾಡುತ್ತಿದೆ. ಹೆಲ್ಮೆಟ್ ಇಲ್ಲದೆ ಅಪಘಾತವಾಗಿ ದಿನವೂ ಪ್ರಾಣ ಕಳೆದುಕೊಳ್ಳುತ್ತಿದ್ದರೂ ತಲೆ ಕೆಡಿಸಿಕೊಳ್ಳದ ಜನ ಕೊರೊನಾ ಬಗ್ಗೆ ಆತಂಕಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ ಅಪಘಾತಗಳಿಂದ ಮೃತಪಟ್ಟವರು 391 ಜನ. 2018ರಲ್ಲಿ ಜಿಲ್ಲೆಯಲ್ಲಿ 1453 ಅಪಘಾತ ಸಂಭವಿಸಿ 371 ಮಂದಿ ಮೃತಪಟ್ಟು, 2439 ಜನ ಗಾಯಗೊಂಡಿದ್ದಾರೆ. 2019ರಲ್ಲಿ 1411 ಅಪಘಾತ ಸಂಭವಿಸಿ 391 ಜನ ಮೃತಪಟ್ಟಿದ್ದು, 2260 ಜನ ಗಾಯಾಳುಗಳಾಗಿದ್ದಾರೆ.
ಈ ಅಂಕಿ ಸಂಖ್ಯೆಗಳನ್ನು ಗಮನಿಸಿದಾಗ ಈ ರಸ್ತೆಯಲ್ಲಿ ಓಡಾಡಲು ಭಯವಾಗುತ್ತದೆ. ಆದರೆ, ಹೆದ್ದಾರಿಯನ್ನು ನಿರ್ವಹಣೆ ಮಾಡುವ ಅಧಿಕಾರಿಗಳು ಮಾತ್ರ ಮಾನವೀಯತೆ ಮರೆತಿದ್ದಾರೆ. ಇಷ್ಟೆಲ್ಲ ಸಾವು ನೋವಿನ ಸಂಭವಿಸಿದದಿದ್ದರೂ ಅವರಿಗೆ ಇದರ ಪರಿಣಾಮ
ತಟ್ಟಿದಂತೆ ಕಾಣಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಸಾಮಾನ್ಯವಾಗಿ ಅಪಘಾತಗಳು ಚಾಲಕರ ನಿರ್ಲಕ್ಷ್ಯ, ಬ್ರೇಕ್‌ಫೇಲ್, ಟೈರ್ ಸಿಡಿದು ವಾಹನ ಪಲ್ಟಿಯಾಗಿ ನಡೆಯುತ್ತವೆ. ಆದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪಘಾತಗಳಿಗೆ ಕಾರಣವೇ ಅವೈಜ್ಞಾನಿಕ ರಸ್ತೆ. ಯಾರೋ ಮಾಡಿದ ತಪ್ಪಿಗೆ ದಿನವೂ ಅಮಾಯಕ ಜೀವಗಳು ಬಲಿಯಾಗುತ್ತಿರುವುದು ಮಾತ್ರ ವಿಪರ್ಯಾಸ.
ಇಲ್ಲಿವೆ ಯಮರೂಪಿ ಹೆದ್ದಾರಿಗಳು: ಬೆಂಗಳೂರು-ಪುಣೆ, ಮಂಗಳೂರು- ಕೊಲ್ಲಾಪುರ ಹಾಗೂ ಬೀದರ್- ಶ್ರೀರಂಗ ಪಟ್ಟಣ ಸಂಪರ್ಕ ಕಲ್ಪಿಸುವ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಹಾದು ಹೋಗಿವೆ. ಚಿತ್ರದುರ್ಗ ಜಿಲ್ಲೆಯವರಿಗಿಂತ ಈ ಹೆದ್ದಾರಿಗಳಲ್ಲಿ ಹಾದು ಹೋಗುವಾಗ ರಸ್ತೆಯ ಬಗ್ಗೆ ಅರಿವಿಲ್ಲದೆ ಅಪಘಾತಕ್ಕೀಡಾಗುವವರ ಸಂಖ್ಯೆಯೂ ದೊಡ್ಡದಿದೆ. ಜತೆಗೆ ಈ ಹೆದ್ದಾರಿಗಳ ಅಕ್ಕಪಕ್ಕದಲ್ಲಿರುವ ಅನೇಕ ಗ್ರಾಮಗಳ ಜನತೆ ಕೂಡಾ ನೊಂದಿದ್ದಾರೆ.
ಐತಿಕಾಸಿಕ ಪ್ರವಾಸಿ ತಾಣವೂ ಆಗಿರುವ ಚಿತ್ರದುರ್ಗ ಜಿಲ್ಲೆಗೆ ಬರುವವರ ಸಂಖ್ಯೆಯೂ ದೊಡ್ಡದಿದೆ. ಸರಿಯಾದ ಸರ್ವೀಸ್ ರಸ್ತೆ ಇಲ್ಲದಿರುವುದು, ಅಗತ್ಯವಿರುವ ಕಡೆ ಅಂಡರ್ ಪಾಸ್, ಫ್ಲೈ ಓವರ್, ಸ್ಕೈ ವಾಕರ್ ಇಲ್ಲದಿರುವುದು ಸಮಸ್ಯೆಗೆ ಮೂಲ ಕಾರಣ. ಹೆದ್ದಾರಿಗೆ ಎಲ್ಲೆಂದರಲ್ಲಿ ಜನ, ಜಾನುವಾರುಗಳು ನುಗ್ಗುವಂತಿದೆ. ಇದರಿಂದ ಏಕಾಏಕಿ ಬ್ರೇಕ್ ಹಾಕಿ ಅಪಘಾತ ಸಂಭವಿಸುತ್ತಿವೆ. ಹೆದ್ದಾರಿಗಳಲ್ಲಿರುವ ಅವೈಜ್ಞಾನಿಕ ರಸ್ತೆ ತಿರುವುಗಳು, ಕಾಣದ ಸೂಚನಾ ಫಲಕಗಳು ಹಾಗೂ ಸ್ಪೀಡ್ ಬ್ರೇಕರ್ ಅಳವಡಿಸದಿರುವುದು ಅಪಘಾತಕ್ಕೆ ಕಾರಣವಾಗಿದೆ.
34 ಅಪಘಾತ ವಲಯಗಳಿವೆ: ಈ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಗಳು ನಡೆದು, ಕಟ್ಟು ನಿಟ್ಟಿನ ಎಚ್ಚರಿಕೆ ಕೊಟ್ಟರೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಆರ್ ಟಿಒ, ಪಿಡಬ್ಲ್ಯೂಡಿ, ಪೊಲೀಸ್ ಇಲಾಖೆ ಜತೆಗೂಡಿ ಹೆಚ್ಚು ಅಪಘಾತ ಸಂಭವಿಸುವ 34 ಅಪಘಾತ ವಲಯಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿ, ಇದಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದರೂ ಎಚ್ಚೆತ್ತುಕೊಳ್ಳದಿರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ.
ಕಳೆದ ತಿಂಗಳು ನಡೆದ ರಸ್ತೆ ಸುರಕ್ಷತಾ ಮೀಟಿಂಗ್‌ನಲ್ಲಿ ಒಂದು ತಿಂಗಳು ಕಾಲಾವಕಾಶ ಕೊಟ್ಟು ಅಪಘಾತ ತಡೆಯಲು ಅಗತ್ಯ ಕ್ರಮ ಜರುಗಿಸಲು ಸೂಚಿಸಲಾಗಿತ್ತು. ಈ ಬಗ್ಗೆ ಮುಂದಿನ ಮೀಟಿಂಗ್‌ನಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
ಆರ್.ವಿನೋತ್ ಪ್ರಿಯಾ,
ಜಿಲ್ಲಾಧಿಕಾರಿಗಳು, ಚಿತ್ರದುರ್ಗ.
ತಿಪ್ಪೇಸ್ವಾಮಿ ನಾಕೀಕೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.