ಸಿದ್ದು ವಿರುದ್ದ ಎಸ್ಸಿ ಮೋರ್ಚಾ ಪ್ರತಿಭಟನೆ
Team Udayavani, Nov 4, 2021, 5:32 PM IST
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯದಲಿತರ ಕುರಿತು ಅವಹೇಳನ ಮಾಡಿ ಮಾತನಾಡಿದ್ದಾರೆಎಂದು ಆರೋಪಿಸಿ ಬುಧವಾರ ಬಿಜೆಪಿ ಎಸ್ಸಿಮೋರ್ಚಾದಿಂದ ಪ್ರತಿಭಟನೆ ನಡೆಯಿತು.
ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದಬಿಜೆಪಿ ಕಾರ್ಯಕರ್ತರು, ಸಿದ್ದರಾಮಯ್ಯ ಹಾಗೂಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ,ಸ್ವಾಭಿಮಾನದಿಂದ ಬದುಕುತ್ತಿರುವ ದಲಿತರ ಕುರಿತುಸಿದ್ದರಾಮಯ್ಯ ಆಡಿರುವ ಮಾತುಗಳು ಅವರ ಘನತೆಗೆಶೋಭೆ ತರುವುದಿಲ್ಲ. ದೇಶಕ್ಕೆ ಸಂವಿಧಾನ ಕೊಟ್ಟಡಾ| ಬಿ.ಆರ್.ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್. ಇಂದಿಗೂ ದಲಿತರ ಶೋಷಣೆಕಾಂಗ್ರೆಸ್‌ನಿಂದ ಆಗುತ್ತಿದೆಯೇ ವಿನಾ ಬಿಜೆಪಿಯಿಂದಲ್ಲಎಂದು ದೂರಿದರು.
ದಲಿತ ಸಮುದಾಯದ ಹೆಚ್ಚು ಶಾಸಕರು, ಸಂಸದರುಇರುವುದು ಬಿಜೆಪಿಯಲ್ಲಿ ಎನ್ನುವುದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅವರುಸಾರ್ವಜನಿಕವಾಗಿ ದಲಿತರಲ್ಲಿ ಕ್ಷಮೆಯಾಚಿಸಬೇಕು.ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿಸದಸ್ಯೆ ಭಾರ್ಗವಿ ದ್ರಾವಿಡ್ ಮಾತನಾಡಿ, ಸಿಂದಗಿಯಲ್ಲಿನಡೆದ ದಲಿತ ಸಮಾವೇಶದಲ್ಲಿ ಸಿದ್ದರಾಮಯ್ಯನವರುದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿಕೊಂಡಿದ್ದಾರೆಎಂದು ಕೀಳಾಗಿ ಮಾತನಾಡಿದ್ದಾರೆ.
ಹಾಗಾದರೆಸಿದ್ದರಾಮಯ್ಯ ಜೆಡಿಎಸ್ ತೊರೆದು ಕಾಂಗ್ರೆಸ್‌ಸೇರಿದ್ದು ಯಾಕೆ ಎನ್ನುವುದನ್ನು ತಿಳಿಸಲಿ. ದಲಿತರಿಗೆಮುಖ್ಯಮಂತ್ರಿ ಸ್ಥಾನ ತಪ್ಪಿಸಿದ್ದು ಇದೇ ಸಿದ್ದರಾಮಯ್ಯಎಂದರು.
ದಲಿತರನ್ನು ರಾಷ್ಟ್ರಪತಿ ಮಾಡಿದ ಪಕ್ಷ ಬಿಜೆಪಿ.ಕಾಂಗ್ರೆಸ್ ದಲಿತರ ಪರವಿಲ್ಲ. ದಲಿತರಿಗಾಗಿ ಏನೂಮಾಡಿಲ್ಲ. ಸಿದ್ದರಾಮಯ್ಯ ದಲಿತರಲ್ಲಿ ಕ್ಷಮೆ ಕೇಳಬೇಕು.ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆಎಂದು ಹೇಳಿದರು.ಬಿಜೆಪಿ ಎಸ್ಸಿ ಮೋರ್ಚಾ ಪದಾ ಕಾರಿಗಳಾದನಾಗರಾಜ್, ಪರಶುರಾಂ, ತಿಮ್ಮಣ್ಣ, ಸಿದ್ದಾರ್ಥ,ಶಿವದತ್, ಜೈಪಾಲ್, ವೆಂಕಟೇಶ್ ಯಾದವ್,ಸಂಪತ್, ನಾಗರಾಜ್‌ಬೇದ್ರೆ, ದಗ್ಗೆ ಶಿವಪ್ರಕಾಶ್, ಹೆಚ್.ಬಿ.ನರೇಂದ್ರ, ಶೈಲಜಾರೆಡ್ಡಿ, ರೇಖಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.