ಪರಿಷತ್ ಚುನಾವಣೆ: ಮತದಾರರ ಪಟ್ಟಿಸಲ್ಲಿಕೆಗೆ ಸೂಚನೆ
Team Udayavani, Nov 11, 2021, 3:30 PM IST
ಚಿತ್ರದುರ್ಗ: ವಿಧಾನ ಪರಿಷತ್ ಸ್ಥಳೀಯಸಂಸ್ಥೆಗಳ ಮತದಾರರ ಪಟ್ಟಿಯನ್ನು ಚುನಾವಣಾಆಯೋಗಕ್ಕೆ ಸಲ್ಲಿಸಬೇಕಾಗಿದ್ದು, ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿಯನ್ನುಆದಷ್ಟು ಬೇಗ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ವಿಧಾನ ಪರಿಷತ್‌ಚುನಾವಣೆ-2021 ಚಿತ್ರದುರ್ಗ ಸ್ಥಳೀಯಸಂಸ್ಥೆಗಳ ಕ್ಷೇತ್ರದ ಸಂಬಂಧ ಚುನಾವಣಾಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು. ವಿಧಾನ ಪರಿಷತ್ತಿಗೆಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಚುನಾವಣೆ-2021ರ ಮಾದರಿ ನೀತಿಸಂಹಿತೆಈಗಾಗಲೇ ಜಾರಿಯಲ್ಲಿದ್ದು, ನೀತಿಸಂಹಿತೆಉಲ್ಲಂಘನೆಯಾಗದಂತೆ ಜವಾಬ್ದಾರಿಯಿಂದಕಾರ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನಸೂಚನೆ ನೀಡಿದರು.
ಮಾದರಿ ನೀತಿಸಂಹಿತೆ ನ. 9 ರಿಂದಜಾರಿಯಾಗಿದ್ದು, ಚುನಾವಣಾ ಪ್ರಕ್ರಿಯೆಮುಕ್ತಾಯಗೊಳ್ಳುವವರೆಗೂ ಅಂದರೆಡಿಸೆಂಬರ್ 16 ರವರೆಗೂ ಜಾರಿಯಲ್ಲಿರುತ್ತದೆ.ನೀತಿಸಂಹಿತೆ ಜಾರಿಯಲ್ಲಿರುವುದರಿಂದಯಾವುದೇ ಕಾರ್ಯಕ್ರಮ ಮಾಡುವಂತಿಲ್ಲ.ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ,ತಾಲೂಕು ಪಂಚಾಯಿತಿ ಇಒ ಹಾಗೂ ಗ್ರಾಮಪಂಚಾಯಿತಿ ಅಭಿವೃದ್ಧಿ ಅ ಧಿಕಾರಿಗಳು ಅಗತ್ಯಕ್ರಮ ವಹಿಸಬೇಕು ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ,ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ,ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಚುನಾಯಿತ ಜನಪ್ರತಿನಿ ಗಳು ಮತಚಲಾಯಿಸಲಿದ್ದಾರೆ. ಚುನಾವಣಾ ಆಯೋಗದನಿರ್ದೇಶನದಂತೆ ಸಮಯಕ್ಕೆ ಸರಿಯಾಗಿ ಮಾಹಿತಿಒದಗಿಸಬೇಕು. ಚುನಾವಣಾ ಕರ್ತವ್ಯದಲ್ಲಿಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು.
ಹಾಗಾಗಿ ಅ ಕಾರಿಗಳುಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.ಮತದಾನ ಕೇಂದ್ರಗಳ ಸ್ಥಾಪನೆ, ಮತಗಟ್ಟೆಸಿಬ್ಬಂದಿಗಳ ನೇಮಕಾತಿ, ಮತಗಟ್ಟೆ ಸಿಬ್ಬಂದಿಗಳಿಗೆತರಬೇತಿ, ಮತಗಟ್ಟೆ ಸಾಮಗ್ರಿಗಳ ಸಂಗ್ರಹಣೆ,ಮತಪೆಟ್ಟಿಗೆಗಳ ಸಿದ್ಧತೆಯನ್ನು ಕೈಗೊಳ್ಳುವಂತೆತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಇ. ಬಾಲಕೃಷ್ಣ,ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ|ರಂಗಸ್ವಾಮಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ವರಿಷ್ಠಾ ಧಿಕಾರಿ ನಂದಗಾವಿ, ಚುನಾವಣಾತಹಶೀಲ್ದಾರ್ ಸಿ.ಜೆ. ಕೃಷ್ಣಮೂರ್ತಿ ಸೇರಿದಂತೆಜಿಲ್ಲಾ ಮತ್ತು ತಾಲೂಕು ಮಟ್ಟದ ಅ ಧಿಕಾರಿಗಳುಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.