ಆರೋಗ್ಯ ಮೇಳ ಆಯೋಜನೆಗೆ ಸೂಚನೆ
ಹೊಳಲ್ಕೆರೆ, ಚಳ್ಳಕೆರೆ,ಮೊಳಕಾಲ್ಮೂರು ತಾಲೂಕುಗಳಲ್ಲಿ ಆರೋಗ್ಯ ಶಿಕ್ಷಣ ನೀಡಿ: ಸತ್ಯಭಾಮಾ
Team Udayavani, Mar 9, 2020, 3:08 PM IST
ಚಿತ್ರದುರ್ಗ: ಸರ್ಕಾರದ ಸೂಚನೆಯಂತೆ ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಮತ್ತು ಬುಡಕಟ್ಟು ಸಮುದಾಯಗಳು ಹೆಚ್ಚು ಸಂಖ್ಯೆಯಲ್ಲಿರುವ ಹೊಳಲ್ಕೆರೆ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮಾ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಕುರಿತು ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ, ಪಂಗಡ ಮತ್ತು ಬುಡಕಟ್ಟು ಸಮುದಾಯದ ಜನಸಂಖ್ಯೆ ಹೆಚ್ಚಿರುವ ಹೊಳಲ್ಕೆರೆ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಇಲಾಖೆಯ ಯೋಜನೆಗಳನ್ನು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಮೂರು ತಾಲೂಕುಗಳಲ್ಲಿ ಆರೋಗ್ಯ ಮೇಳ, ತಾಯಂದಿರ ಸಭೆಗಳನ್ನು ಸ್ಥಳೀಯ ಶಾಸಕರ ಜತೆಗೆ ಚರ್ಚಿಸಿ ಕೂಡಲೇ ದಿನಾಂಕ ನಿಗ ದಿ ಮಾಡಬೇಕು. ನುರಿತ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಬೇಕು. ಆರೋಗ್ಯ ಮೇಳ, ತಾಯಂದಿರ ಮೇಳಗಳಲ್ಲಿ ಸಾಂಸ್ಕೃತಿಕ ವಾತಾವರಣವೂ ಇರಬೇಕು. ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜತೆ ಚರ್ಚಿಸಿ ಜಾನಪದ ಕಲಾತಂಡಗಳನ್ನು ಕರೆಸಿ ದಿನವಿಡೀ ಕಾರ್ಯಕ್ರಮ ನಡೆಸಬೇಕು. ಆಯುಷ್ಮಾನ್ ಭಾರತ್-
ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯ ಮಾಹಿತಿ ಕೊಡಬೇಕು. ಮೇಳಕ್ಕೆ ಆಗಮಿಸುವವರು ತಪ್ಪದೇ ಆಧಾರ್ ಕಾರ್ಡ್ ತರುವಂತೆ ಸೂಚಿಸಬೇಕೆಂದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಈಗಾಗಲೇ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಮಹಿಳಾ ಗ್ರಾಮ ಸಭೆಗಳನ್ನು ಆಯೋಜಿಸುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ. ಇಂತಹ ಮಹಿಳಾ ಗ್ರಾಮಸಭೆಗಳಲ್ಲಿ ತಾಯಂದಿರು, ಗರ್ಭಿಣಿಯರು, ಕಿಶೋರಿಯರು ಸೇರಿದಂತೆ ಮಹಿಳಾ ಕೇಂದ್ರಿತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಮೂರೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು, ಬಸ್ ನಿಲ್ದಾಣ, ಶಾಲೆಗಳು, ತಾ.ಪಂ. ಕಚೇರಿ ಮುಂತಾದ ಜನನಿಬಿಡ ಸ್ಥಳಗಳಲ್ಲಿ ಗೋಡೆ ಬರಹಗಳನ್ನು ವೈವಿಧ್ಯಮಯವಾಗಿ ಬರೆಯಿಸುವ ಮೂಲಕ, ರೇಡಿಯೋ ಜಿಂಗಲ್ಸ್, ಪತ್ರಿಕಾ ಪ್ರಕಟಣೆಗಳ ಮೂಲಕ ವ್ಯಾಪಕ ಪ್ರಚಾರ ನೀಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಮ್ಮ, ಆರೊಗ್ಯ ಶಿಕ್ಷಣಾಧಿಕಾರಿ ಚಿದಾನಂದಪ್ಪ, ಸರ್ವೇಕ್ಷಣಾಧಿಕಾರಿ ಡಾ| ತುಳಸಿ ರಂಗನಾಥ್, ನಿರೂಪಣಾಧಿಕಾರಿ ಭಾರತಿ ಬಣಕಾರ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಆನಂದ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.