ಹಳ್ಳಿಗೆ ತರಕಾರಿ ತಲುಪಿಸಲು ತೀರ್ಮಾನ

ಅನ್ಯ ಜಿಲ್ಲೆಯವರು ಬಂದರೆ ನಿಗಾ ವಹಿಸಿಜನರ ಕರೆ ಸ್ವೀಕರಿಸಿ ಸಮಸ್ಯೆಗೆ ಸೂಕ್ತ ಪರಿಹಾರ

Team Udayavani, Apr 8, 2020, 1:12 PM IST

08-April-14

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾರ್‌ ರೂಂ ಕುರಿತು ಸಭೆ ನಡೆಯಿತು.

ಚಿತ್ರದುರ್ಗ: ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ಥಾಪಿಸಿರುವ ವಾರ್‌ ರೋಂಗೆ ಬಂದಿರುವ ಕರೆಗಳು ಹಾಗೂ ಪರಿಹಾರ ಕುರಿತು ಜಿಲ್ಲಾ ಧಿಕಾರಿ ಆರ್‌. ವಿನೋತ್‌ ಪ್ರಿಯಾ ಅಧಿಕಾರಿಗಳ ಸಭೆ ನಡೆಸಿದರು. ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ದೂರವಾಣಿ ಕರೆಗಳ ಸಮಸ್ಯೆ ಕುರಿತ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಿ ಎಲ್ಲರಿಗೂ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಸೂಚಿಸಿದರು.

ತರಕಾರಿ ತಲುಪದ ಹಳ್ಳಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಂತೆ ನಡೆಸುವುದು ಅಥವಾ ವಾಹನದ ಮೂಲಕ ತರಕಾರಿ ತಲುಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ, ತರಕಾರಿ ತಲುಪದ ಹಳ್ಳಿಗಳನ್ನು ಪತ್ತೆ ಮಾಡಿ ತರಕಾರಿ ತಲುಪಿಸಲು ತೀರ್ಮಾನಿಸಲಾಯಿತು. ಜಿಲ್ಲೆಯ ಗಡಿಗಳ ಮೂಲಕ ಯಾರಾದರೂ ಜಿಲ್ಲೆಗೆ ಬಂದರೆ ಅವರು ಇಲ್ಲಿಯೇ ಉಳಿಯಬೇಕು. ನಡೆದುಕೊಂಡು ಬರುವವರನ್ನು ಪತ್ತೆ ಮಾಡಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಅಂತವರಿಗೆ ಜವನಗೊಂಡನಹಳ್ಳಿ ಹಾಸ್ಟೆಲ್‌ ನಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತುರ್ತು ವಾಹನ ಸೇವೆ ಅಗತ್ಯವಿದ್ದವರು ಆರ್‌ಟಿಒ ಸಂಪರ್ಕಿಸಬೇಕು. ಗ್ರಾಮೀಣ ಪ್ರದೇಶದವರು ಆಯಾ ಪಿಡಿಒಗಳಿಗೆ ಸಂಪರ್ಕಿಸುವಂತೆ ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಡಾ| ರಂಗಸ್ವಾಮಿ ಮಾತನಾಡಿ, ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಲು ಜಿಲ್ಲಾಡಳಿತದಿಂದ ವಾರ್‌ ರೂಂ ಸ್ಥಾಪಿಸಲಾಗಿದೆ. ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸಲು ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿ, ಆಹಾರ ಇಲಾಖೆ, ಪಶು ಸಂಗೋಪನೆ ಸೇರಿದಂತೆ ಮತ್ತಿತರೆ ಇಲಾಖೆಗಳಿಗೆ ಸಂಬಂಧಿಸಿದ ಕರೆಗಳು ಬರುತ್ತಿದ್ದು, ಎಲ್ಲ ಕರೆಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಹಾಯವಾಣಿ ಸಂಖ್ಯೆಗಳು: ಸಾರ್ವಜನಿಕರು ತಮ್ಮ ದೂರುಗಳನ್ನು ನೀಡಬಹುದಾದ ಸಹಾಯವಾಣಿ ಸಂಖ್ಯೆ 08194-222027, 08194- 222035, 08194-222038,
08194-222044, 08194-222050, 08194-222056 ಕ್ಕೆ ಕರೆ ಮಾಡಬಹುದು. ಮಾ. 28 ರಿಂದ ಏ. 7 ರವರೆಗೆ ಕಂಟ್ರೋಲ್‌ ರೂಂ ಗೆ ಒಟ್ಟು 95 ಕರೆಗಳು ಸ್ವೀಕೃತವಾಗಿದ್ದು, ಈ ಪೈಕಿ ಆಹಾರ ಇಲಾಖೆ-17, ನಗರಸಭೆ-08, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ-03, ಅರಣ್ಯ-05, ಪೊಲೀಸ್‌-03, ಕಂದಾಯ-23, ಇತರೆ-05 ಸೇರಿದಂತೆ 95 ಕರೆಗಳು ಬಂದಿವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಎಡಿಸಿ ಸಿ.ಸಂಗಪ್ಪ, ಜಿಪಂ ಸಿಇಒ ಹೊನ್ನಾಂಬ, ಎಸಿ ಪ್ರಸನ್ನ, ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು, ತಹಶೀಲ್ದಾರ್‌ ಜೆ.ಸಿ.ವೆಂಕಟೇಶಯ್ಯ, ಬಿಸಿಎಂ ಅ ಧಿಕಾರಿ ಅವಿನ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಮ್ಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.