ಸುಗಮ ಕೃಷಿ ಚಟುವಟಿಕೆಗೆ ಕ್ರಮ
Team Udayavani, Apr 23, 2020, 4:12 PM IST
ಚಿತ್ರದುರ್ಗ: ವಾರ್ತಾ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಫೋನ್ -ಇನ್ ಕಾರ್ಯಕ್ರಮ ನಡೆಯಿತು.
ಚಿತ್ರದುರ್ಗ: ರೈತರು ಖಾಸಗಿ ಫರ್ಟಿಲೈಜರ್ಸ್ ಗಳಲ್ಲಿ ಬಿತ್ತನೆ ಬೀಜ, ಗೊಬ್ಬರ ಖರೀದಿಸುವಾಗ ಕಡ್ಡಾಯವಾಗಿ ರಸೀದಿ ಪಡೆಯಬೇಕು. ಇದರಿಂದ ನಕಲಿ ಬಿತ್ತನೆ ಬೀಜಗಳ ಹಾವಳಿ ತಡೆಗಟ್ಟಬಹುದು ಜಂಟಿ ಕೃಷಿ ನಿರ್ದೇಶಕ ಸದಾಶಿವ ಹೇಳಿದರು.
ನಗರದ ವಾರ್ತಾ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಬುಧವಾರ ನಡೆದ ಫೋನ್-ಇನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದ್ಯ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಮಾಗಿ ಉಳುಮೆ ಮಾಡಬೇಕು. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಅಶ್ವಿನಿ, ಭರಣಿ ಮಳೆಯಾಗುತ್ತದೆ. ಈ ಸಮಯದಲ್ಲಿ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ ಎಳ್ಳು, ಸಾಮೆ, ಹೆಸರು ಮತ್ತು ಶೇಂಗಾ, ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಚಿತ್ರದುರ್ಗದಲ್ಲಿ ಮೇ ತಿಂಗಳ ಕೊನೆಯ ವಾರ ಅಥವಾ ಜೂನ್ ತಿಂಗಳ ಮೊದಲ ವಾರದಲ್ಲಿ ಶೇಂಗಾ ಬಿತ್ತನೆ ಮಾಡಬಹುದು ಎಂದರು.
ಕೃಷಿ ಚಟುವಟಿಕೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಳಿಗೆ, 22 ಕೃಷಿ ಯಂತ್ರಧಾರೆ ಕೇಂದ್ರಗಳು, ಕೃಷಿ ಕೊಯ್ಲು ಯಂತ್ರ, ಕೃಷಿ ಉತ್ಪನ್ನಗಳ ಸಾಗಾಣಿಕೆ, ಕೃಷಿ ಯಂತ್ರಗಳ ಬಿಡಿಭಾಗಗಳ ಮಳಿಗೆ ಹಾಗೂ ರಿಪೇರಿ ಕೇಂದ್ರ, 324 ಕೃಷಿ ಪರಿಕರ ಮಾರಾಟ ಮಳಿಗೆಗಳ ಕಾರ್ಯ ಚಟುವಟಿಕೆಗೆ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬಬ್ಬೂರಿನಲ್ಲಿ ಸಿರಿಧಾನ್ಯ ಸಂಸ್ಕರಣೆ ಘಟಕ ಆರಂಭಿಸಲಾಗುತ್ತಿದೆ. ಹೊಸದುರ್ಗಕ್ಕೂ ಘಟಕ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ಪ್ರಸಕ್ತ ವರ್ಷ ಜಿಲ್ಲೆಯ 1.39 ಲಕ್ಷ ರೈತರಿಗೆ 33.34 ಕೋಟಿ ರೂ. ನೆರವು ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ ಮೊದಲನೇ ಕಂತಿನ ಹಣವನ್ನು ಆಯಾ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಶಿವರಾಜ್, ಜಿಲ್ಲಾ ವಾರ್ತಾಧಿ ಕಾರಿ ಬಿ. ಧನಂಜಯಪ್ಪ, ವಾರ್ತಾ ಸಹಾಯಕ ಬಿ.ವಿ. ತುಕಾರಾಂ ರಾವ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.