ಸಾರ್ವಜನಿಕರಿಗೆ ಪಿಪಿಇ ಕಿಟ್ ವಿತರಣೆ
Team Udayavani, Apr 16, 2020, 1:05 PM IST
ಚಿತ್ರದುರ್ಗ: ವೇದಾಂತ ಮೈನ್ಸ್ ಸಂಸ್ಥೆಯಿಂದ ಜಿಲ್ಲಾಡಳಿತಕ್ಕೆ ಆ್ಯಂಬುಲೆನ್ಸ್ ಸಹಿತ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್ ನೀಡಲಾಯಿತು
ಚಿತ್ರದುರ್ಗ: ಕೋವಿಡ್-19 ಹಾವಳಿಗೆ ತತ್ತರಿಸಿರುವ ಜನತೆಗೆ ನೆರವಾಗುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೇದಾಂತ ಕಬ್ಬಿಣದ ಅದಿರು ಉದ್ಯಮ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್ ನೀಡಿದೆ.
ಜಿಲ್ಲಾಧಿಕಾರಿ ಕಚೇರಿ ಮೂಲಕ 500 ಸ್ಯಾನಿಟೈಸರ್ ಬಾಟಲಿ, 2500 ಟ್ರಿಪಲ್ ಲೇಯರ್ ಎನ್-95 ಮಾಸ್ಕ್, 500 ಪಿಪಿಇ ಕಿಟ್ ಹಾಗೂ ತುರ್ತು ಸೇವೆಗಾಗಿ ಒಂದು ಅಂಬ್ಯುಲೆನ್ಸ್ ನೀಡಲಾಗಿದೆ. ಇದರೊಟ್ಟಿಗೆ ಭೀಮಸಮುದ್ರ ಹೋಬಳಿ ಭಾಗದ ಸ್ವಸಹಾಯ ಸಂಘದ ಮಹಿಳೆಯರು ಕೈಯಿಂದ ತಯಾರಿಸಿದ ಮೂರು ಲೇಯರ್ನ್ 600 ಬಟ್ಟೆ ಮಾಸ್ಕ್ ಗಳನ್ನು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ, ಜನರಿಗೆ ವಿತರಿಸಿದೆ ಎಂದು ಸಂಸ್ಥೆಯ ನಿರ್ದೇಶಕ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.
ಇದೇ ವೇಳೆ ಚಿತ್ರದುರ್ಗ ಜಿಲ್ಲೆ ಮಾತ್ರವಲ್ಲದೆ ದೇಶದ ವಿವಿಧೆಡೆ ಕೋವಿಡ್ 19 ಹತ್ತಿಕ್ಕಲು ನೆರವಾಗುವ ಉದ್ದೇಶದಿಂದ ವೇದಾಂತ ಗ್ರೂಪ್ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಮನೆಯಲ್ಲೇ ಇದ್ದೂ ರೋಗ ನಿವಾರಣೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.