ಪಿಯು ಪರೀಕ್ಷಾ ಕೇಂದ್ರದಲ್ಲಿ ಸುರಕ್ಷತೆಗೆ ಆದ್ಯತೆ ಕೊಡಿ


Team Udayavani, Jun 13, 2020, 1:15 PM IST

13-June-11

ಚಿತ್ರದುರ್ಗ: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂ. 18 ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಡಿಸಿ ವಿನೋತ್‌ ಪ್ರಿಯಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್‌-19 ಸೋಂಕು ಹರಡುವ ಭೀತಿಯಿಂದ ಲಾಕ್‌ಡೌನ್‌ ಜಾರಿಗೊಳಿಸಿದ್ದರ ಪರಿಣಾಮವಾಗಿ ಪಿಯು ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ವಿಷಯ ಪರೀಕ್ಷೆ ಬಾಕಿ ಉಳಿದಿತ್ತು. ಜೂ. 18 ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿ ಸ್ಯಾನಿಟೈಸರ್‌, ಮಾಸ್ಕ್ ಬಳಕೆ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ವಿದ್ಯಾರ್ಥಿಗಳು ಕುಡಿಯುವ ನೀರಿನ ಬಾಟಲ್‌ ಅನ್ನು ಮನೆಯಿಂದಲೇ ತರುವಂತೆ ಸೂಚನೆ ನೀಡಬೇಕು. ಜ್ವರ ಕಂಡುಬರುವ ಅಥವಾ ಅಸ್ವಸ್ಥ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌಲಭ್ಯ ಕಲ್ಪಿಸಬೇಕು. ಖಾಸಗಿ ಶಾಲಾ ಕಾಲೇಜುಗಳ ಬಸ್‌ಗಳ ಸೌಲಭ್ಯವನ್ನು ಕೂಡ ಸೇವೆಗೆ ಪಡೆಯಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಯಾವುದೇ ಗೊಂದಲಕ್ಕೆ ಈಡು ಮಾಡದೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಸೂಚಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಚ್‌.ಸಿ ಶೋಭಾರಾಣಿ ಮಾತನಾಡಿ, ಜೂ. 18 ರಂದು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ಬಳಕೆ ಕಾರಣಗಳಿಗಾಗಿ ಬೆಳಿಗ್ಗೆ 8:30 ರಿಂದಲೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಕಲ್ಪಿಸಲಾಗುವುದು. ಜಿಲ್ಲೆಯ 20 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲ್ಲಿದ್ದು ಒಟ್ಟು 15,512 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊರ ಜಿಲ್ಲೆಯ 820 ವಿದ್ಯಾರ್ಥಿಗಳೂ ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬೇರೆ ಜಿಲ್ಲಾ ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಜ್ವರ ಇರುವ ಮಕ್ಕಳಿಗೆ ಮುಜಾಗ್ರತಾ ಕ್ರಮವಾಗಿ ಪ್ರತ್ಯಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.