ಸಾಮಾಜಿಕ ಅಂತರ ಪಾಲಿಸದಿದ್ರೆ ಪರವಾನಗಿ ರದ್ದು

Team Udayavani, Apr 26, 2020, 5:21 PM IST

26-April-28

ಚಿತ್ರದುರ್ಗ: ದೇಶಾದ್ಯಂತ ಎರಡನೇ ಹಂತದ ಲಾಕ್‌ ಡೌನ್‌ ಆರಂಭವಾಗಿದ್ದು, ಅಂಗಡಿಗಳನ್ನು ತೆರೆಯಲು ಅವಕಾಶವಿದೆ. ಆದರೆ ಸಾಮಾಜಿಕ ಅಂತರ ಪಾಲನೆ ಮಾಡಿಸುವುದು ಅಂಗಡಿ ಮಾಲೀಕರ ಜವಾಬ್ದಾರಿ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲ ಅಂಗಡಿ, ಸರ್ಕಾರಿ ಕಚೇರಿ ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಮನೆಯಿಂದ ಹೊರ ಬರುವ ಸಾರ್ವಜನಿಕರು ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಬಳಸುವುದು ಕಡ್ಡಾಯ ಎಂದರು. ಅಂಗಡಿಗಳನ್ನು ತೆರೆಯುವ ಮಾಲೀಕರು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅಥವಾ ಖರ್ಚಿಫ್‌ ಬಳಕೆ ಮಾಡುವಂತೆ ಸೂಚಿಸಬೇಕು. ಒಂದು ವೇಳೆ ಸಾಮಾಜಿಕ ಅಂತರ ಪಾಲನೆಯಾಗದಿದ್ದರೆ ಅಂತಹ ಅಂಗಡಿಯ ಪರವಾನಗಿಯನ್ನೇ ರದ್ದು ಮಾಡುತ್ತೇವೆ ಎಂದು ಎಚ್ಚರಿಸಿದರು.

ಕೆಲಸದ ಸ್ಥಳಗಳಲ್ಲಿ ಥರ್ಮೋಮೀಟರ್‌, ಸ್ಯಾನಿಟೈಸರ್‌ ಇರುವುದು ಕಡ್ಡಾಯ. ಸರ್ಕಾರಿ ಕಚೇರಿಗಳು ಇದನ್ನು ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನ ಸೇರಬಾರದು. ಉಗುಳುವುದನ್ನು ನಿಷೇ ಧಿಸಲಾಗಿದೆ. ಗುಟಕಾ ಮಾರಾಟ ಹಾಗೂ ಬಳಕೆ ಕೂಡಾ ನಿಷೇಧವಿದೆ ಎಂದರು.

ಜನಸಂದಣಿ ತಡೆಯಲು ಬ್ಯಾರಿಕೇಡ್‌: ನಗರದ ವಿವಿಧೆಡೆ ಸುಮಾರು 60 ಕಡೆಗಳಲ್ಲಿ ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ ಕಡೆ ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಯಾವ ರಸ್ತೆಗಳಲ್ಲಿ ಅಂಗಡಿ ಇದೆ. ಯಾವ ರಸ್ತೆಯಲ್ಲಿ ಹೆಚ್ಚು ಜನ ಓಡಾಡುತ್ತಾರೆ ಎನ್ನುವ ಬಗ್ಗೆ ಸರ್ವೆ ನಡೆಸಿ ಜನ ನೇರವಾಗಿ ರಸ್ತೆಗೆ ಬಂದು ದಟ್ಟಣೆಯಾಗುವ ಬದಲು ಸುತ್ತಿ ಬಳಸಿ ಓಡಾಡಿದರೆ ಒಂದಿಷ್ಟು ಜಾಮ್‌ ಆಗುವುದು ತಪ್ಪುತ್ತದೆ ಎಂಬ ಕಾರಣಕ್ಕೆ ಹೀಗೆ ಮಾಡಿದ್ದೇವೆ ಎಂದು ಎಸ್ಪಿ ತಿಳಿಸಿದರು.

ಮೆಡಿಕಲ್‌ ಶಾಪ್‌ಗ್ಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ನಿಲ್ಲುತ್ತಿದ್ದವು. ಇದನ್ನು ತಪ್ಪಿಸುವುದು ಹಾಗೂ ಕಡಿಮೆ ಅಂತರಕ್ಕೂ ವಾಹನ ಬಳಸುವುದು ಬಿಟ್ಟು ನಡೆದು ಹೋಗುವ ಮೂಲಕ ಹೆಚ್ಚು ವಾಹನ ರಸ್ತೆಗಿಳಿಯದಿರಲಿ ಎಂಬ ಕಾರಣಕ್ಕೆ ಬ್ಯಾರಿಕೇಡ್‌ ಹಾಕಿದ್ದೇವೆ. ಕಚೇರಿಗೆ ಹೋಗುವವರಿಗೆ ತೊಂದರೆಯಾದರೆ ನಮ್ಮ ಗಮನಕ್ಕೆ ತಂದರೆ ಅಲ್ಲಿ ಓಡಾಡಲು ಅವಕಾಶ ಮಾಡಿಕೊಡುತ್ತೇವೆ ಎಂದರು.

ಸೋಷಿಯಲ್‌ ಮೀಡಿಯಾಗಳಲ್ಲಿ ಕೋವಿಡ್‌ ಕುರಿತು ತಪ್ಪು ಮಾಹಿತಿ ಹರಡು ವವರ ವಿರುದ್ಧ ದೂರು ದಾಖಲಿಸುತ್ತಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಟೀಮ್‌ ಇದೆ. ಕನಿಷ್ಠ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ಜಿ. ರಾಧಿಕಾ,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.