ನಟಿ ಸುಪ್ರಿಯಾ ಸರಳ ವಿವಾಹ
Team Udayavani, May 16, 2020, 4:46 PM IST
ಚಿತ್ರದುರ್ಗ: "ಮಗಳು ಜಾನಕಿ' ಧಾರಾವಾಹಿ ನಟಿ ಸುಪ್ರಿಯಾ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ವಿಜಯ್ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.
ಚಿತ್ರದುರ್ಗ: “ಮಗಳು ಜಾನಕಿ’ ಧಾರಾವಾಹಿಯ ನಟಿ ಸುಪ್ರಿಯಾ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ವಿಜಯ್ ಅವರು ಗುರುವಾರ ತಾಲೂಕಿನ ಜಾನುಕೊಂಡ ಸಮೀಪದ ಶ್ರೀಲಕ್ಷ್ಮೀ ರಂಗನಾಥಸ್ವಾಮಿ ದೇವಸ್ಥಾನ ಆವರಣದಲ್ಲಿ ಸರಳವಾಗಿ ವಿವಾಹವಾದರು.
ವಧು ಹಾಗೂ ವರ ಇಬ್ಬರ ಕುಟುಂಬದಿಂದ ಸುಮಾರು 20 ಜನ ಮದುವೆಗೆ ಆಗಮಿಸಿದ್ದರು. ಮದುವೆ ನಂತರ ಉಪ್ಪಿಟ್ಟು, ಕೇಸರಿಬಾತ್ ಸವಿದು ಅಲ್ಲಿಂದ ತೆರಳಿದರು. “ಮಗಳು ಜಾನಕಿ’ ಧಾರಾವಾಹಿಯಲ್ಲಿ ಸಂಜನಾ ಪಾತ್ರಧಾರಿಯಾಗಿ ನಟಿಸುತ್ತಿದ್ದ ಶಿವಮೊಗ್ಗ ಮೂಲದ ಸುಪ್ರಿಯಾ, ಚಿತ್ರದುರ್ಗ ಜಿಲ್ಲೆ ಬಿ.ಜಿ. ಕೆರೆಯ ಸಾಫ್ಟ್ ವೇರ್ ಇಂಜಿನಿಯರ್ ವಿಜಯ್ ಅವರನ್ನು ಬಾಳಸಂಗಾತಿಯಾಗಿ ಸ್ವೀಕರಿಸಿದರು. ಈ ವಿವಾಹಕ್ಕೆ ಎರಡೂ ಕುಟುಂಬಗಳ ಒಪ್ಪಿಗೆ ಇತ್ತು. ರಂಗನಾಥಸ್ವಾಮಿ ದೇವಸ್ಥಾನದ ಅರ್ಚಕರು ಮದುವೆಗೆ ಪೌರೋಹಿತ್ಯ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.