ಆಮಿಷಕ್ಕೊಳಗಾಗದೆ ಮತ ಚಲಾಯಿಸಿ
ಜನರು ಸ್ವಾರ್ಥ ಮನೋಭಾವ ಬಿಟ್ಟು ದೇಶದ ಅಭಿವೃದ್ಧಿಗೆ ಶ್ರಮಿಸಲಿ: ನ್ಯಾ| ಹನುಮಂತಪ್ಪ
Team Udayavani, Jan 26, 2020, 5:30 PM IST
ಚಿತ್ರದುರ್ಗ: ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಬನ್ನಿಕಟ್ಟೆ ಆರ್. ಹನುಮಂತಪ್ಪ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಸಹಯೋಗದಲ್ಲಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮತದಾನ ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ವಿವಿಧತೆಯಲ್ಲಿ ಏಕತೆ ಸಾ ಧಿಸುವ ರಾಷ್ಟ್ರ. ಈ ರೀತಿಯ ವೈವಿಧ್ಯತೆ ಕಂಡು ಬರುವುದು ಭಾರತದಲ್ಲಿ ಮಾತ್ರ. ಆದರೆ ಪ್ರಸ್ತುತ ದಿನಗಳಲ್ಲಿ ಜನರು ತಾನು, ತನ್ನ ಕೆಲಸ ಹಾಗೂ ಕುಟುಂಬ ಎಂಬ ಸ್ವಾರ್ಥದಲ್ಲಿ ಬದುಕುತ್ತಿದ್ದಾರೆ. ಇದರಿಂದ ಹೊರಬಂದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಭಾರತೀಯರೆಲ್ಲಾ ಒಂದೇ ತಾಯಿಯ ಮಕ್ಕಳು ಎಂಬ ಮನೋಭಾವದಿಂದ ಬದುಕಬೇಕು.
ಕೋಮುವಾದಕ್ಕೆ ಒಳಗಾಗಬೇಡಿ. 1950ರ ಜ. 25 ರಂದು ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ಆರಂಭಿಸಿತು. ಹೀಗಾಗಿ ಜ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಜಾರಿಗೆ ಬಂದಿದೆ ಎಂದು ತಿಳಿಸಿದರು.
ಡಾ| ಬಿ.ಆರ್. ಅಂಬೇಡ್ಕರ್‌ರವರು ವಿವಿಧ ದೇಶಗಳ ಸಂವಿಧಾನವನ್ನು ಅಭ್ಯಸಿಸಿ ಸರ್ವವ್ಯಾಪಿ ವಿಚಾರ ಮಾಡಿ ಭಾರತದ ಸಂವಿಧಾನವನ್ನು ರಚಿಸಿದ್ದಾರೆ. ಮತದಾರರು ಜಾತಿಯ ಪರಿಕಲ್ಪನೆಯಿಂದ ಹೊರಬಂದು ರಾಷ್ಟ್ರಸೇವೆ ಮಾಡುವ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.
ಚುನಾವಣಾ ತರಬೇತುದಾರ ಡಾ| ಕೆ. ಕೆ. ಕಾಮಾನಿ ಮಾತನಾಡಿ, ಸಂವಿಧಾನದಲ್ಲಿ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಪ್ರಮುಖ ಅಂಗಗಳಾಗಿವೆ. ಶಾಸಕಾಂಗ ರೂಪಿಸುವ ಶಾಸನದ ಮೇಲೆ ದೇಶದ ಅಭಿವೃದ್ಧಿ ನಿಂತಿರುತ್ತದೆ. ಹಾಗಾಗಿ ಮತದಾರರು ಮತದಾನ ಮಾಡುವುದು ಮುಖ್ಯ. ಅವರು ಅರ್ಹರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ಐಕ್ಯೂಇಸಿ ಡಾ| ಆರ್.ಎಚ್. ರಟಗೇರಿ, ವಕೀಲರ ಸಂಘದ ಉಪಾಧ್ಯಕ್ಷ ಟಿ. ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಅನಿಲ್‌ಕುಮಾರ್, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಚಾರ್ಯ ಡಾ| ಬಸವರಾಜಪ್ಪ ಸೇರಿದಂತೆ ಸರ್ಕಾರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.