ಕೋವಿಡ್ ಮುಕ್ತವಾಗುವತ್ತ ಜಿಲ್ಲೆ ಹೆಜ್ಜೆ
ಕೋವಿಡ್ ಆಸ್ಪತ್ರೆಯಲ್ಲಿದ್ದ ಎಲ್ಲಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್
Team Udayavani, Jun 10, 2020, 1:28 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ತೀವ್ರ ಆತಂಕಕ್ಕೆ ಒಳಗಾಗಿದ್ದ ಕೋಟೆನಾಡು ಚಿತ್ರದುರ್ಗ ಜಿಲ್ಲೆ ಮೊದಲ ಹಂತದಲ್ಲಿ ಬಂದ ಕೋವಿಡ್ ವೈರಸ್ ಎಂಬ ಮಹಾಮಾರಿಯನ್ನು ಮಣಿಸಿ ಕೋವಿಡ್ ಮುಕ್ತವಾಗುವತ್ತ ಹೆಜ್ಜೆ ಇಟ್ಟಿದೆ.
ಜಿಲ್ಲಾಸ್ಪತ್ರೆ ಬಳಿ ಇರುವ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಜನ ಸೋಂಕಿತರು ಗುಣಮುಖರಾಗಿ ಮಂಗಳವಾರ ಬಿಡುಗಡೆ ಹೊಂದುವ ಮೂಲಕ ಕೋವಿಡ್ ಆಸ್ಪತ್ರೆ ಈಗ ಸೋಂಕಿತರಿಂದ ಮುಕ್ತವಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದ ಸುಮಾರು 15 ಕೊರೊನಾ ಸೋಂಕಿತರು ಈಗ ಇಲ್ಲಿಂದ ಗುಣಮುಖರಾಗಿ ತೆರಳಿದ ಬಗ್ಗೆ ಜಿಲ್ಲಾಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದರು.
ಕೋವಿಡ್-19 ಸೋಂಕಿನಿಂದ ಗುಣಮುಖರಾದ ನಾಲ್ವರನ್ನು ಮಂಗಳವಾರ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್.ಜೆ. ಬಸವರಾಜಪ್ಪ, ಜಿಲ್ಲಾ ಸರ್ವೇಕ್ಷಣಾ ಧಿಕಾರಿ ಡಾ| ತುಳಸಿರಂಗನಾಥ, ಡಿವೈಎಸ್‌ಪಿ ಪಾಂಡುರಂಗ ಇನ್ನಿತರರು ಹೂಗುತ್ಛ ನೀಡಿ ಬೀಳ್ಕೊಟ್ಟರು.
ಕೋವಿಡ್ ವೈರಸ್ ಸೋಂಕು ದೃಢಪಟ್ಟಿದ್ದ ಪಿ-2237, ಪಿ-2248, ಪಿ-2253 ಮತ್ತು ಪಿ-2831 ಸೇರಿದಂತೆ ನಾಲ್ವರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದರು. ಇದುವರೆಗೆ ನಾಲ್ಕು ಹಂತಗಳಲ್ಲಿ ಸೋಂಕಿತರನ್ನು ಬಿಡುಗಡೆ ಮಾಡಲಾಗಿದೆ. ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಸದ್ಯಕ್ಕೆ ಯಾವುದೇ ರೋಗಿಗಳಿಲ್ಲ. ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉತ್ತರಪ್ರದೇಶ ಮೂಲದ ಕಾರ್ಮಿಕರು ಕೂಡ ಗುಣಮುಖರಾಗಿದ್ದು, ಬುಧವಾರ ಬಿಡುಗಡೆಯಾಗಲಿದ್ದಾರೆ. ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆ ಕೋವಿಡ್ ಮುಕ್ತ ಜಿಲ್ಲೆಯಾಗುವತ್ತ ಸಾಗುತ್ತಿದೆ.
339 ಜನರ ವರದಿ ಬಾಕಿ
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಒಟ್ಟು 339 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಳಸಿರಂಗನಾಥ ತಿಳಿಸಿದ್ದಾರೆ. ಇದುವರೆಗೆ 3641 ಜನರ ಮಾದರಿ ಸಂಗ್ರಹಿಸಲಾಗಿದೆ. 3174 ಜನರ ವರದಿ ನೆಗೆಟಿವ್ ಬಂದಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ 40 ಜನರಲ್ಲಿ ಕೋವಿಡ್ ವೈರಸ್ ಸೋಂಕು ಧೃಡಪಟ್ಟಿದೆ. 27 ಜನರು ಗುಣಮುಖರಾಗಿದ್ದು, 12 ಜನ ಚಳ್ಳಕೆರೆ ಕೋವಿಡ್ ಹೆಲ್ತ್‌ಕೇರ್ ಸೆಂಟರ್‌ನಲ್ಲಿ ಹಾಗೂ ಒಬ್ಬರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಎಲ್ಲರೂ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ನಾವು ಒಂದು ಹಂತದ ಗೆಲುವು ಸಾಧಿಸಿದ್ದೇವೆ. ಮುಂದೆ ಬರುವ ಸಂದರ್ಭಗಳನ್ನು ನಿಭಾಯಿಸಲು ನಮ್ಮ ವೈದ್ಯಕೀಯ ತಂಡ ಸಿದ್ಧವಿದೆ.
ಡಾ| ಎಚ್.ಜೆ. ಬಸವರಾಜಪ್ಪ,
ಜಿಲ್ಲಾ ಶಸ್ತ್ರಚಿಕಿತ್ಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.