ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜನ ಜಾಗೃತಿ


Team Udayavani, Oct 19, 2021, 5:17 PM IST

chitrdurga news

ಚಿತ್ರದುರ್ಗ: ಕೃಷಿ, ಶಿಕ್ಷಣ, ಉದ್ದಿಮೆ ಸ್ಥಾಪನೆ, ಮನೆನಿರ್ಮಾಣ, ವಾಹನ ಹೀಗೆ ಮುಖ್ಯವಾಗಿ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಹೇಗೆ ಪಡೆಯಬೇಕು,ಇದಕ್ಕೆ ಯಾರು ಅರ್ಹರು, ಯಾವ ರೀತಿ ಬ್ಯಾಂಕ್‌ವ್ಯವಸ್ಥಾಪಕರು ತಮ್ಮ ಯೋಜನೆ ಪ್ರಸ್ತುತಪಡಿಸಬೇಕು ಎಂಬ ವಿಚಾರದ ಕುರಿತು ಗ್ರಾಹಕರು, ಸಾಲಗಾರರಲ್ಲಿ ಜಾಗೃತಿ ಮೂಡಿಸಲಾಯಿತು.

ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌, ರಾಜ್ಯ ಮಟ್ಟದಬ್ಯಾಂಕುಗಳ ಸಮಿತಿ ಹಾಗೂ ಎಲ್ಲಾ ಬ್ಯಾಂಕುಗಳಆಶ್ರಯದಲ್ಲಿ ಆಯೋಜಿಸಿದ್ದ ಸಾಲ ಸಂಪರ್ಕಕಾರ್ಯಕ್ರಮದಲ್ಲಿ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.

ಸಾಲದ ಜತೆಯಲ್ಲಿ ಪ್ರಧಾನಮಂತ್ರಿ ಸುರûಾವಿಮಾ ಯೋಜನೆ (ಪಿಎಂಎಸ್‌ಬಿವೈ), ಅಪಘಾತವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿಬಿಮಾ ಯೋಜನೆ (ಪಿಎಂಜೆಜೆಬಿವೈ), ಅಟಲ್‌ಪಿಂಚಣಿ ಯೋಜನೆ, ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡ ಹಾಗೂ ಮಹಿಳೆಯರಿಗೆ ಸಾಲ ಸೌಲಭ್ಯ,ಹೊಸ ಉದ್ಯಮ ಸ್ಥಾಪಿಸುವವರಿಗೆ 10 ಲಕ್ಷದಿಂದ1 ಕೋಟಿಯವರೆಗೂ ಸಾಲ ಸೇರಿದಂತೆ ಅನೇಕವಿಷಯಗಳ ಕುರಿತು ಅರಿವು ಮೂಡಿಸಲಾಯಿತು.

ಇದೇ ವೇಳೆ ಈ ಹಿಂದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದಬೀದಿಬದಿ ವ್ಯಾಪಾರಿಗಳಿಗೆ ಸಾಲ, ಕೆನರಾ ಎಂಎಸ್‌ಎಂಇ ಸಾಲ, ಮುದ್ರಾ ಸಾಲ, ಪಿಎಂಇಜಿಪಿಸಾಲ, ವಾಹನ ಸಾಲ, ಗೃಹ ಸಾಲ, ಇತರೆಸಾಲಗಳ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಕೆನರಾಬ್ಯಾಂಕ್‌, ಕರ್ನಾಟಕ ಬ್ಯಾಂಕ್‌, ಕರ್ನಾಟಕಗ್ರಾಮೀಣ ಬ್ಯಾಂಕ್‌, ಯೂನಿಯನ್‌ ಬ್ಯಾಂಕ್‌,ಐಸಿಐಸಿಐ, ಬ್ಯಾಂಕ್‌ ಆಫ್‌ ಬರೋಡ ಸೇರಿ ಒಟ್ಟುಎಂಟು ಮಳಿಗೆ ತೆರೆಯಲಾಗಿತ್ತು. ಅನೇಕರುಮಳಿಗೆಗಳ ಬಳಿಗೆ ಹೋಗಿ ಮಾಹಿತಿಯ ಜತೆಗೆಸಾಲ ಪಡೆಯುವ ಕುರಿತು ಅಧಿ ಕಾರಿಗಳೊಂದಿಗೆಕೆಲ ಕಾಲ ಚರ್ಚಿಸಿದರು.

ಮೇಳ ಉದ್ಘಾಟಿಸಿದ ಕೇಂದ್ರ ಹಣಕಾಸುಸೇವೆಗಳ ಇಲಾಖೆ ಕಾರ್ಯದರ್ಶಿ ದೇಬಶಿಶ್‌ಪಾಂಡೆ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಎಲ್ಲಾಬ್ಯಾಂಕುಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕುಎಂದು ಕರೆ ನೀಡಿದರು. ಪ್ರಧಾನಮಂತ್ರಿಸ್ವನಿಧಿ , ಅಟಲ್‌ ಪಿಂಚಣಿ, ಮುದ್ರಾ, ಸ್ಟಾಂಡ್‌ಅಪ್‌ ಇಂಡಿಯಾ, ಪ್ರಧಾನ ಮಂತ್ರಿ ಸುರûಾಜೀವನ ಜ್ಯೋತಿ ಬಿಮಾ ಯೋಜನೆ ಸೇರಿ ಇತರಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಜವಾಬ್ದಾರಿ ಬ್ಯಾಂಕುಗಳ ಅಧಿ ಕಾರಿಗಳದ್ದಾಗಿದೆ ಎಂದರು.

ಕೆನರಾ ಬ್ಯಾಂಕ್‌ ಕಾರ್ಯನಿರ್ವಾಹಕನಿರ್ದೇಶಕಿ ಎ. ಮಣಿಮೆಕಾಲೈ, ಕರ್ನಾಟಕ ಎಸ್‌ಎಲ್‌ಬಿಸಿ ಕನ್ವಿನರ್‌ ಬಿ. ಚಂದ್ರಶೇಖರರಾವ್‌,ಪ್ರಧಾನ ವ್ಯವಸ್ಥಾಪಕ ರಮಾ ನಾಯ್ಕ, ಬ್ಯಾಂಕ್‌ಅ ಧಿಕಾರಿಗಳಾದ ರಘುರಾಜ್‌, ಶ್ರೀನಾಥ್‌ ಜೋಷಿ,ಮಹಾದೇವಯ್ಯ, ನಬಾರ್ಡ್‌ನ ಕವಿತಾ, ಸತೀಶ್‌,ಅಮರೇಶಿ, ಸುರೇಂದರ್‌, ಚಂದ್ರಯ್ಯ, ಪಿ.ವಿ.ಸಿಂಧು ಇದ್ದರು

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.