ಮಳೆಗಾಲಕ್ಕೂ ಮುನ್ನ ರಾಜಕಾಲುವೆ ಸ್ವಚ್ಛಗೊಳಿಸಿ


Team Udayavani, Apr 24, 2022, 3:01 PM IST

raja-kaluve

ಚಳ್ಳಕೆರೆ: ನಗರ ವ್ಯಾಪ್ತಿಯಲ್ಲಿ ಬರುವ ರಾಜಕಾಲುವೆಗಳ ಹೂಳೆತ್ತುವ ಕಾರ್ಯ ಕಳೆದ ಹತ್ತಾರು ವರ್ಷಗಳಿಂದ ನಡೆಯದೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುವ ಸಂಭವ ಹೆಚ್ಚಿದೆ. ಮಳೆಗಾಲ ಪ್ರಾರಂಭಕ್ಕೂ ಮುನ್ನ ರಾಜಕಾಲುವೆಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್‌ ರಾಜ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್‌ ಒತ್ತಾಯಿಸಿದ್ದಾರೆ.

ಶನಿವಾರ ನಗರದ ಮಹದೇವಿ ರಸ್ತೆ, ರೈಲ್ವೆ ಸ್ಟೇಷನ್‌ ರಸ್ತೆಗಳಲ್ಲಿ ಹಾದುಹೋಗಿರುವ ರಾಜಕಾಲುವೆಗಳನ್ನು ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಗರ ವ್ಯಾಪ್ತಿಯಲ್ಲಿ ಹಲವೆಡೆ ರಾಜಕಾಲುವೆಗಳು ಒತ್ತುವರಿಯಾಗಿವೆ. ಇನ್ನೂ ಕೆಲವು ಕಡೆ ರಾಜಕಾಲುವೆ ಮಣ್ಣಲ್ಲಿ ಮುಚ್ಚಿಹೋಗಿವೆ. ಇದರ ಪರಿಣಾಮ ಅಂಬೇಡ್ಕರ್‌ ನಗರದ, ಜನತಾ ಕಾಲೋನಿ, ಗಾಂಧೀನಗರ, ರಹೀಂನಗರ, ಹಳೇಟೌನ್‌, ಮಹದೇವಿ ರಸ್ತೆ, ಕಾಟಪ್ಪನಹಟ್ಟಿ, ಗೊಲ್ಲರಹಟ್ಟಿ ಹೀಗೆ ಹಲವಾರು ತಗ್ಗು ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸುತ್ತಿವೆ. ಈಗಾಗಲೇ ಹಲವು ಬಾರಿ ಮಳೆಯಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ. ಹೀಗಾಗಿ ಮಳೆಗಾಲ ಪ್ರಾರಂಭಕ್ಕೂ ಮುನ್ನ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ರಾಜಕಾಲುವೆಗಳಲ್ಲಿ ತುಂಬಿರುವ ಹೂಳು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಸ್ವಚ್ಛತಾ ಸ್ಥಳಕ್ಕೆ ಭೇಟಿ ನೀಡಿದ ನಗರಸಭೆ ಉಪಾಧ್ಯಕ್ಷೆ ಆರ್.ಮಂಜುಳಾ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ರಾಜಕಾಲುವೆಗಳ ಸ್ವಚ್ಛತಾ ಕಾರ್ಯ ನಡೆದಿದೆ. ಸಾಕಷ್ಟು ಕಡೆ ಹೂಳುತುಂಬಿ ಮುಚ್ಚಿವೆ. ಇನ್ನೂ ಕೆಲವೆಡೆ ಕಾಲುವೆ ಮುಚ್ಚಿ ಕಟ್ಟಡ ನಿರ್ಮಿಸಲಾಗಿದೆ. ಈಗಾಗಲೇ ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಸರ್ವೆ ಕಾರ್ಯ ಕೈಗೊಳ್ಳಲಾಗಿದೆ. ರಹೀಂನಗರ, ಚಿತ್ರಯ್ಯನಹಟ್ಟಿ, ಸೂಜಿಮಲ್ಲೇಶ್ವರ ನಗರ, ಕಾಟಪ್ಪನಹಟ್ಟಿ ಮೂಲಕ ಹರಿಯುವ ರಾಜಕಾಲುವೆ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ ಸಾಕಷ್ಟು ಕಡೆ ರಾಜಕಾಲುವೆಗಳ ತೆರವು ಕಾರ್ಯ ನಡೆಸಲಾಗುವುದು ಎಂದರು.

ಅರ್ಧಕ್ಕೆ ನಿಂತ ಕಾಮಗಾರಿ

ಮಳೆ ಬಂದರೆ ಅವಾಂತರ ಸೃಷ್ಟಿಸುತ್ತಿರುವ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿಯಲ್ಲಿ ರಾಜಕಾಲುವೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಸಮಸ್ಯೆಗೆ ಕಾರಣವಾಗಿದೆ. ನಗರಸಭೆ ಅಧಿಕಾರಿಗಳು ರಾಜಕಾಲುವೆ ನಿರ್ಮಾಣ ಮಾಡುವ ನೆಪದಲ್ಲಿ ಬೃಹತ್‌ ಕಾಲುವೆ ತೋಡಿ ಕಾಮಗಾರಿ ಅರ್ಧಂಬರ್ಧ ಮಾಡಲಾಗಿದೆ. ಈ ಬಗ್ಗೆ ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಎಚ್‌. ಮಹಲಿಂಗಪ್ಪ, ವೀರೇಶ್‌, ಅಜ್ಜಯ್ಯ, ರಂಗಸ್ವಾಮಿ, ತಿಪ್ಪೇಸ್ವಾಮಿ, ವೀರಭದ್ರಪ್ಪ ಮತ್ತಿತರರು ದೂರಿದರು.

ನಗರಸಭೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ನಕ್ಷೆ ತಯಾರಿಸಿ ಕಾಮಗಾರಿ ಪ್ರಾರಂಭಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಇರುವ ರಾಜಕಾಲುವೆಗಳನ್ನು ಗುರುತಿಸಿ ಹೂಳು ತೆಗೆಸುವ ಕಾರ್ಯ ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭಿಸಲಾಗುವುದು. ಮಳೆಗಾಲ ಪ್ರಾರಂಭಕ್ಕೂ ಮುನ್ನ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುವುದು. –ಟಿ.ಲೀಲಾವತಿ, ಪೌರಾಯುಕ್ತೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.