ಮಡಿವಾಳ ಸಮ್ಮೇಳನ ಯಶಸ್ಸಿಗೆ ಸಹಕರಿಸಿ

Team Udayavani, Nov 26, 2018, 4:48 PM IST

cta-1.jpg

ಚಳ್ಳಕೆರೆ: ರಾಜ್ಯದ ಬಹುಸಂಖ್ಯಾತ ಮಡಿವಾಳ ಸಮುದಾಯಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ನೀಡುವಂತೆ ಒತ್ತಾಯಿಸಲು ಈಗಾಗಲೇ ಸರ್ಕಾರ ಗಮನ ಸೆಳೆಯಲು ಹೋರಾಟಗಳನ್ನು ನಡೆಸಲಾಗಿದೆ. ಸರ್ಕಾರದ ನಿರ್ಲಕ್ಷ್ಯವನ್ನು ವಿರೋಧಿಸಿ ಜನವರಿಯಲ್ಲಿ ಚಿತ್ರದುರ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಸರ್ಕಾರ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ ಎಂದು ಚಿತ್ರದುರ್ಗ ಮಡಿವಾಳ ಪೀಠದ ಶ್ರೀಬಸವ ಮಾಚಿದೇವ ಸ್ವಾಮಿ ಹೇಳಿದರು.

ಭಾನುವಾರ ಪ್ರವಾಸಿ ಮಂದಿರದಲ್ಲಿ ಮಡಿವಾಳ ಸಮುದಾಯದ ರಾಜ್ಯಮಟ್ಟದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.  ರಾಜ್ಯದಲ್ಲಿ ಈಗಾಗಲೇ ಸುಮಾರು 40 ಲಕ್ಷಕ್ಕೂ ಹೆಚ್ಚು ಜನ ಮಡಿವಾಳ ಸಮುದಾಯವಿದ್ದು ಕಳೆದ ಹಲವಾರು ದಶಕಗಳಿಂದ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯ ಪಡೆಯದೆ ವಂಚಿತವಾಗಿದೆ. ಸಮುದಾಯದಲ್ಲಿ ಜಾಗೃತಿ ಮೂಡದ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಲು ಇದುವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ಸಮುದಾಯ ಸಂಘಟಿತವಾಗಿ ಹೋರಾಟದಲ್ಲಿ ಪಾಲ್ಗೊಂಡು ನ್ಯಾಯುತವಾಗಿ ದೊರೆಯಬೇಕಾದ ಬೇಡಿಕೆಗಳನ್ನು ಪಡೆಯುವ ನಿಟ್ಟಿನಲ್ಲಿ ಬೃಹತ್‌ ರಾಜ್ಯ ಮಟ್ಟದ ಸಮ್ಮೇಳ ಚಿತ್ರದುರ್ಗದಲ್ಲಿ ನಡೆಸಲಾಗುವುದು ಎಂದರು.

ಸಮ್ಮೇಳನಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಪಕ್ಷಗಳ ಗಣ್ಯರನ್ನು ಆಹ್ವಾನಿಸಲಿದ್ದು ಸಮುದಾಯದ ಎಲ್ಲ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ವರ್ಗದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಬೇಕು. ಈಗಾಗಲೇ ರಾಜ್ಯ ವ್ಯಾಪಿ ಪ್ರವಾಸ ಕೈಗೊಂಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು.

ಮಡಿವಾಳ ಸಮುದಾಯಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ದೊರಕಿದಲ್ಲಿ ಮಾತ್ರ ಈ ಸಮುದಾಯದ ಅಭ್ಯುದಯ ಸಾಧ್ಯ. ಅದ್ದರಿಂದ ತಾಲೂಕಿನ ಎಲ್ಲಾ ಮಡಿವಾಳ ಸಮುದಾಯ ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಸಮುದಾಯದ ಬಂಧುಗಳು ರಾಜ್ಯಮಟ್ಟದ ಸಮವೇಶದಲ್ಲಿ ಪಾಲ್ಗೊಳ್ಳಬೇಕು, ಸಮಾವೇಶದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ ಎಂದರು.

ಮಡಿವಾಳ ಸಮಾಜದ ರಾಜ್ಯಾಧ್ಯಕ್ಷ ನಂಜಪ್ಪ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ರಾಜ್ಯಮಟ್ಟದ ಪದಾಧಿ ಕಾರಿಗಳು ನಿರಂತರ ಹೋರಾಟ ನಡೆಸಿದರೂ ಸಹ ನಿರೀಕ್ಷಿತ ಫಲವನ್ನು ಪಡೆಯಲು ಸಾಧ್ಯವಾಗಿಲ್ಲ. ಸರ್ಕಾರ ಈ ಸಮುದಾಯದ ಬೇಡಿಕೆಯ ಬಗ್ಗೆ ನಿರ್ಲಕ್ಷ್ಯವಹಿಸಿದೆ. ಸಮುದಾಯದ ಹಲವಾರು ಪ್ರಮುಖ ನಾಯಕರು ಸಹ ಹೋರಾಟದ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಸಮುದಾಯದ ಪೂಜ್ಯ ಸ್ವಾಮೀಜಿ ಬಸವಮಾಚಿದೇವ ನೇತೃತ್ವದಲ್ಲಿಯೇ ರಾಜ್ಯಮಟ್ಟದ ಸಮಾವೇಶ ನಡೆಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.

ತಾಲೂಕು ಅಧ್ಯಕ್ಷ ಎನ್‌.ಮಂಜುನಾಥ ಮಾತನಾಡಿ, ಸಮಾವೇಶನಕ್ಕೆ ನಗರವೂ ಸೇರಿದಂತೆ ಗ್ರಾಮೀಣ ಭಾಗದಿಂದ ಸಾವಿರಾರು ಸಂಖ್ಯೆಯಲ್ಲಿ ಸಮುದಾಯದ ಮುಖಂಡರು ತಪ್ಪದೆ ಪಾಲ್ಗೊಳ್ಳಬೇಕು ಎಂದರು.

 ಜಿಲ್ಲಾಧ್ಯಕ್ಷ ರಮೇಶ್‌, ರಾಜ್ಯ ಮಡಿವಾಳ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ, ಯುವ ಘಟಕದ ರಾಜ್ಯಾಧ್ಯಕ್ಷ ಧ್ರುವಕುಮಾರ್‌, ಅಂಜಿನಪ್ಪ, ಹನುಮಂತರಾಯ, ತಾಲೂಕು ಮಡಿವಾಳ ಯುವ ಘಟಕದ ಅಧ್ಯಕ್ಷ ಕರೀಕೆರೆ ನಾಗರಾಜು, ವೀರಣ್ಣ, ನಾಗೇಶ್‌, ತಿಪ್ಪೇಸ್ವಾಮಿ, ರಾಘವೇಂದ್ರ, ಎನ್‌. ತಿಪ್ಪೇಶ್‌, ಸಿದ್ದೇಶ್‌, ರಾಮಣ್ಣ, ನಾಗರಾಜು ಇತರರು ಇದ್ದರು. 

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.