ಹೆಸರು ನೋಂದಣಿಗೆ ಅಗತ್ಯ ದಾಖಲೆ ಸಂಗ್ರಹಿಸಿ
Team Udayavani, Jan 5, 2021, 2:45 PM IST
ಚಿತ್ರದುರ್ಗ: ಮತದಾರರ ಪಟ್ಟಿಗೆ ಹೆಸರು ನೋಂದಣಿ ಹಾಗೂ ಪಟ್ಟಿಯಿಂದ ಹೆಸರು ಕೈಬಿಡುವಾಗ ಸರಿಯಾಗಿಪರಿಶೀಲಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರುಹಾಗೂ ಆಹಾರ, ನಾಗರಿಕ ಸರಬರಾಜು ಮತ್ತುಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತ ಡಾ| ಶಮ್ಲಾ ಇಕ್ಲಾಲ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಮತದಾರರ ಪಟ್ಟಿಗೆ ಸೇರ್ಪಡೆ ಅಥವಾಹೆಸರು ತೆಗೆಯುವಾಗ ಅಗತ್ಯ ದಾಖಲೆಸಂಗ್ರಹಿಸಿಟ್ಟುಕೊಳ್ಳಬೇಕು. ಪರಿಶೀಲನೆ ವೇಳೆ ಇವುಲಭ್ಯವಾಗುವಂತಿರಬೇಕು ಎಂದು ತಿಳಿಸಿದರು.
ಮತದಾರರ ಪಟ್ಟಿಗೆ ಸೇರ್ಪಡೆಗೆ ಆನ್‌ಲೈನ್ ಹಾಗೂಆಫ್‌ಲೈನ್ ಅರ್ಜಿಗಳನ್ನು ತಿರಸ್ಕೃತಗೊಳಿಸುವಾಗಸಕಾರಣ ನೀಡಬೇಕು. ಸರಿಯಾಗಿ ಪರಿಶೀಲನೆಮಾಡಿ ನಂತರ ತಿರಸ್ಕೃತ ಮಾಡಬೇಕು. ಮತದಾರರಪಟ್ಟಿಯಿಂದ ಹೆಸರನ್ನು ಡಿಲೀಟ್ ಮಾಡುವಮೊದಲು ನೋಟೀಸ್ ನೀಡಬೇಕು ಎಂದು ತಾಕೀತುಮಾಡಿದರು.
ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ ಮಾತನಾಡಿ, ಆನ್‌ಲೈನ್‌ನಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಸಲ್ಲಿಕೆಯಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತಗೊಂಡಿವೆ. ಇಲ್ಲಿ ಸಲ್ಲಿಸುವ ಅರ್ಜಿಗಳಲ್ಲಿಸರಿಯಾದ ದಾಖಲೆಗಳನ್ನು ಒದಗಿಸಿರುವುದಿಲ್ಲ. ಈಕಾರಣದಿಂದ ಆನ್‌ಲೈನ್ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಸಭೆಗೆ ಮಾಹಿತಿ ನೀಡಿದರು.
ಮತದಾರರ ಪಟ್ಟಿ ದೋಷರಹಿತವಾಗಿದ್ದರೆ ಚುನಾವಣೆ ಸುಸೂತ್ರವಾಗಿ ನಡೆಯುತ್ತದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ದೂರುಗಳು ಬರಬಾರದು.ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಈಚೆಗೆ ನಡೆದ ಗ್ರಾಮ ಪಂಚಾಯಿತಿಚುನಾವಣೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲ ಎಂದು ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಎಲ್‌ಒ ರಿಜಿಸ್ಟರ್ ನಿರ್ವಹಿಸಲು ಸೂಚನೆ: ಮತದಾರರ ಪಟ್ಟಿಗೆ ಸಂಬಂ ಧಿಸಿದಂತೆ ಬಿಎಲ್ ಒಗಳು ಸರಿಯಾದ ರೀತಿಯಲ್ಲಿ ರಿಜಿಸ್ಟರ್ ನಿರ್ವಹಣೆ ಮಾಡಬೇಕು. ಈ ಕುರಿತು ಸಂಬಂಧಿ ಸಿದ ಅಧಿಕಾರಿಗಳುಬಿಎಲ್‌ಒಗಳಿಂದ ಮಾಹಿತಿ ನೀಡಲು ಕ್ರಮವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಸೂಚಿಸಿದರು.
18 ವರ್ಷ ಪೂರ್ಣಗೊಂಡು ಮತದಾರರ ಪಟ್ಟಿಗೆಸೇರ್ಪಡೆಗೆ ಸಲ್ಲಿಕೆಯಾಗಿರುವ ಯುವ ಮತದಾರರ ಆನ್‌ಲೈನ್ ಮತ್ತು ಆಫ್‌ಲೈನ್ ಅರ್ಜಿಗಳ ನಮೂನೆ6, 7, 8 ಮತ್ತು 8ಎ ಅರ್ಜಿಗಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾ ಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, 2020 ರ ನವೆಂಬರ್ 18 ರ ಕರಡು ಮತದಾರಪಟ್ಟಿಯಂತೆ ಜಿಲ್ಲೆಯಲ್ಲಿ 13,61,973 ಮತದಾರರಿದ್ದಾರೆ.ಹೊಸಬರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲುಮಿಂಚಿನ ನೋಂದಣಿ ಅಭಿಯಾನ ಹಾಗೂ ವ್ಯಾಪಾಕಪ್ರಚಾರದ ಮೂಲಕ ನೋಂದಣಿಗೆ ಕ್ರಮವಹಿಸಲಾಗಿದೆ ಎಂದರು.
ಕೋವಿಡ್-19 ಹಿನ್ನೆಲೆಯಲ್ಲಿ ಕಾಲೇಜುಗಳು ಪ್ರಾರಂಭವಾಗದೇ ಇರುವುದರಿಂದ ಮತದಾರರಪಟ್ಟಿಗೆ ಯುವ ಮತದಾರರ ನೋಂದಣಿ ಸಂಖ್ಯೆಕಡಿಮೆಯಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ|ಕೆ.ನಂದಿನಿದೇವಿ, ಉಪವಿಭಾಗಾಧಿಕಾರಿ ನಾಗರಾಜ್, ಆಹಾರ ಇಲಾಖೆ ಉಪನಿರ್ದೇಶಕ ಮಧುಸೂದನ್, ತಹಶೀಲ್ದಾರ್‌ಗಳಾದವೆಂಕಟೇಶಯ್ಯ, ಸತ್ಯನಾರಾಯಣ, ಜಿಲ್ಲಾ ಅಂಗವಿಕಲರಕಲ್ಯಾಣಾ ಧಿಕಾರಿ ಜೆ.ವೈಶಾಲಿ, ಪೌರಾಯುಕ್ತ ಜೆ.ಟಿ. ಹನುಮಂತರಾಜು ಮತ್ತಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.