ಆ್ಯಂಬುಲೆನ್ಸ್- ಸ್ಕೂಟಿ ಮುಖಾಮುಖಿ ಢಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು
Team Udayavani, Jun 15, 2021, 7:26 AM IST
ಚಿತ್ರದುರ್ಗ: ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಆ್ಯಂಬುಲೆನ್ಸ್ ನಡುವೆ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆಯ ಸಜ್ಜನಕೆರೆ ಗ್ರಾಮದ ಕಾಂತರಾಜ (22 ವ), ಚಿತ್ರದುರ್ಗ ಕರುವಿನಕಟ್ಟೆ ಬಳಿಯ ಶ್ರೀಕಾಂತ (20 ವ), ನಂಜುಂಡ (20 ವ) ಎಂದು ಗುರುತಿಸಲಾಗಿದೆ. ಹೊಳಲ್ಕೆರೆಯಲ್ಲಿ ಪೇಂಟಿಂಗ್ ಕೆಲಸ ಮುಗಿಸಿಕೊಂಡು ವಾಪಾಸು ಬರುತ್ತಿದ್ದಾಗ ಅಂಬ್ಯುಲೆನ್ಸ್ ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಹೊಳಲ್ಕೆರೆ ಕಡೆಯಿಂದ ಚಿತ್ರದುರ್ಗದತ್ತ ಬರುತ್ತಿದ್ದರು. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆ್ಯಂಬುಲೆನ್ಸ್ ಸಾಗುತ್ತಿತ್ತು. ತಿರುಮಲ ಡಾಬಾ ಸಮೀಪ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ದೂರ ಬಿದ್ದಿದೆ. ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!
ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆಯ ಪೊಲೀಸರು ಮೃತರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಆ್ಯಂಬುಲೆನಲ್ಲಿ ಚಾಲಕ ಒಬ್ಬರೇ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.