ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ
Team Udayavani, Jan 21, 2019, 10:40 AM IST
ಹೊಳಲ್ಕೆರೆ: ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳನ್ನು ಅತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಹುರುಳಿ ಬಸವರಾಜ್ ಹೇಳಿದರು.
ಪಟ್ಟಣದ ಸರಕಾರಿ ಎಂಎಂ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪೋಷಕರ ಸಭೆ ಹಾಗೂ ಪರೀಕ್ಷಾ ಪೂರ್ವಸಿದ್ಧತಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ನಿತ್ಯ ಬದುಕಿನ ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಬೆಳಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ತನಕ ವೇಳಪಟ್ಟಿಯಂತೆ ವಿದ್ಯಾಭ್ಯಾಸ ಮಾಡಬೇಕು ಎಂದರು.
ವಿದ್ಯಾರ್ಥಿಗಳು ಸಾಧನೆಗೆ ಬೆನ್ನು ತೋರಿಸದೆ ಸತತ ಪರಿಶ್ರಮ ಹಾಕುವ ಮೂಲಕ ಜೇಡರ ಬಲೆಯಂತೆ ಯಶಸ್ವಿಯಾಗಬೇಕು. ಕಾಯಕದ ರೂಪದಲ್ಲಿ ವಿದ್ಯಾಭ್ಯಾಸ ನಡೆಸಬೇಕು. ಪರೀಕ್ಷೆ ಸಮಯದಲ್ಲಿ ವಿಪರೀತ ಓದುವುದರ ಜತೆಗೆ ಶ್ರಾಂತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳಿರಿಮೆ ಬಿಟ್ಟು ಎಲ್ಲ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಬಡತನ ಶಿಕ್ಷಣಕ್ಕೂ ಸಂಬಂಧವಿಲ್ಲ. ಸತತ ಪ್ರಯತ್ನ ಮಾಡುವ ಮೂಲಕ ಸಾಧನೆಗೆ ಮುಂದಾಗಬೇಕು. ವಿದ್ಯಾರ್ಥಿಗಳು ಗೊತ್ತಿಲ್ಲದ ವಿಷಯವನ್ನು ಶಿಕ್ಷಕರಿಂದ ಕೇಳಿ ತಿಳಿದುಕೊಳ್ಳುವ ಶಕ್ತಿ ರೂಢಿಸಿಕೊಳ್ಳಬೇಕು ಎಂದರು.
ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಅನಂತ್ ಮಾತನಾಡಿ, ಜಿಲ್ಲೆಯಲ್ಲಿರುವ ಶೈಕ್ಷಣಿಕ ಅಭಿವೃದ್ಧಿಗೆ ಸರಕಾರ ಸಾಕಷ್ಟು ಸೌಲಭ್ಯ ಕಲ್ಪಿಸಿಕೊಟ್ಟಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳೂ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮವಾದ ಫಲಿತಾಂಶ ತರಲು ಶ್ರಮಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ನಿರ್ಮಾಲಾ ದೇವಿ ಮಾತನಾಡಿ, ಜಿಲ್ಲೆಯಲ್ಲಿರುವ ಅಂಗ್ಲ ಮಾಧ್ಯಮ ಸರಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಫಲಿತಾಂಶ ಪಡೆದುಕೊಳ್ಳುವ ಕೀರ್ತಿ ಪಡೆದುಕೊಂಡಿದೆ. ಸಾಕಷ್ಟು ಮೂಲ ಸಮಸ್ಯೆಗಳ ನಡುವೆ ಉತ್ತಮ ಶಿಕ್ಷಣ ನೀಡಲು ಶಾಲೆಯ ಎಲ್ಲ ಶಿಕ್ಷಕರು ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದರು.
ಶಾಲಾ ಸಮಿತಿ ಅಧ್ಯಕ್ಷ ಸೈಯ್ಯದ್ ಖಾನ್, ಸದಸ್ಯರಾದ ರಮೇಶ್, ಮಂಜುನಾಥ, ರುದ್ರೇಶ್, ಬಸಪ್ಪ, ರೆಡ್‌ಕ್ರಾಸ್ ಮಾಜಿ ಕಾರ್ಯದರ್ಶಿ ಗಿರೀಶ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಿ. ಶಿವರುದ್ರಪ್ಪ, ಎಸ್. ವೇದಮೂರ್ತಿ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.