ಕಚೇರಿಗಾಗಿ ಬಿಜೆಪಿ ಕಾರ್ಯಕರ್ತರಲ್ಲೇ ಕಿತ್ತಾಟ!
Team Udayavani, Apr 13, 2018, 1:24 PM IST
ನಾಯಕನಹಟ್ಟಿ: ಬಿಜೆಪಿ ಕಚೇರಿ ಉದ್ಘಾಟನೆ ವಿಷಯಕ್ಕೆ ಸಂಬಂಧಿಸಿದಂತೆ ಶಾಸಕ ಎಸ್.ತಿಪ್ಪೇಸ್ವಾಮಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ, ದಾಂಧಲೆ ನಡೆದ ಘಟನೆ ಗುರುವಾರ ನಡೆದಿದೆ. ಈಗಾಗಲೇ ಬಿಜೆಪಿ ಕಚೇರಿ ಇದ್ದು, ಇಲ್ಲಿಯೇ ಮತ್ತೆ ಪಕ್ಷದ ಕಚೇರಿ ಹಾಗೂ ಕಾಲ್ ಸೆಂಟರ್ ಅನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿ ಬಿ. ಶ್ರೀರಾಮುಲು ಶುಕ್ರವಾರ ಉದ್ಘಾಟಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದ ಸಿದ್ಧತೆ ನಡೆಸಿದ್ದರು. ಕಚೇರಿಗೆ ತಳಿರು ತೋರಣ, ಕುರ್ಚಿ ವ್ಯವಸ್ಥೆ ಮಾಡುವಲ್ಲಿ ನಿರತರಾಗಿದ್ದರು.
ಈ ವಿಷಯ ತಿಳಿದ ಟಿಕೆಟ್ ವಂಚಿತ ಶಾಸಕ ಎಸ್. ತಿಪ್ಪೇಸ್ವಾಮಿ ಬೆಂಬಲಿಗರು ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಶಾಸಕ ಎಸ್. ತಿಪ್ಪೇಸ್ವಾಮಿ ಈ ಕಚೇರಿ ಆರಂಭಿಸಿದ್ದಾರೆ. ಹೀಗಿರುವಾಗ ಶ್ರೀರಾಮುಲು ಅವರಿಂದ ಕಚೇರಿ ಉದ್ಘಾಟನೆ ಮಾಡಿಸುವುದು ಸರಿಯಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಪಕ್ಷದ ಕಚೇರಿಯಾಗಿದೆ. ಪಕ್ಷ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿದೆ. ಹೀಗಾಗಿ ಪಕ್ಷದ ಕಚೇರಿಯಲ್ಲಿ ಅಧಿಕೃತ ಕಾರ್ಯಕ್ರಮ ಜರುಗಲಿದೆ ಎಂದು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡಲ ಅಧ್ಯಕ್ಷರು ಇದಕ್ಕೆ ಅಗತ್ಯ ದಾಖಲೆ ಪ್ರದರ್ಶಿಸಿದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರ ಬೆಂಬಲಿಗರು, ನಾಳೆ ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು. ಅಲ್ಲದೆ ಕಚೇರಿ ಷಟರ್ ಎಳೆದು ಕೂಗಾಡಿದರು. ಪಕ್ಷದ ಮಂಡಲಾಧ್ಯಕ್ಷ ಹಾಗೂ ಕಾರ್ಯದರ್ಶಿ ಜತೆ ವಾಗ್ವಾದ ನಡೆಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಎರಡು ಬಣಗಳ ನೂರಾರು ಕಾರ್ಯಕರ್ತರು ಕೈಕೈ ಮಿಲಾಯಿಸುವ ಹಂತ ತಲುಪಿದ್ದರು.
ಶುಕ್ರವಾರ ಶ್ರೀರಾಮುಲು ಪಟ್ಟಣದ ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಪಕ್ಷದ ಪ್ರಚಾರ ಕಚೇರಿ ಹಾಗೂ ಕಾಲ್ ಸೆಂಟರ್ ಉದ್ಘಾಟಿಸುವ ಕಾರ್ಯಕ್ರಮವಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವುದಾಗಿ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.