ಪಪಂ ಗದ್ದುಗೆಗೆ ಕೈ-ಕಮಲ ಫೈಟ್
•ಮೊಳಕಾಲ್ಮೂರು ಶಾಸಕ ಶ್ರೀರಾಮುಲು-ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿಗೆ ಪ್ರತಿಷ್ಠೆಯ ಚುನಾವಣೆ
Team Udayavani, May 27, 2019, 8:27 AM IST
ಮೊಳಕಾಲ್ಮೂರು: ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಬಿ. ಶ್ರೀರಾಮುಲು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು.
ಮೊಳಕಾಲ್ಮೂರು: ಇಲ್ಲಿನ ಪಟ್ಟಣ ಪಂಚಾಯತ್ ಗದ್ದುಗೇರಲು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ತುರುಸಿನ ಹಣಾಹಣಿ ನಡೆದಿದ್ದು, ಪಟ್ಟಣ ಪಂಚಾಯತ್ ಚುನಾವಣೆ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಹಾಗೂ ಮಾಜಿ ಶಾಸಕ ಕಾಂಗ್ರೆಸ್‌ನ ಎಸ್. ತಿಪ್ಪೇಸ್ವಾಮಿ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಪಟ್ಟಣದಲ್ಲಿ ಒಟ್ಟು 12,003 ಮತದಾರರಿದ್ದಾರೆ. ಕಳೆದ ಬಾರಿ 15 ವಾರ್ಡ್‌ಗಳಿದ್ದು, ಕ್ಷೇತ್ರ ಪುನರ್ ವಿಂಗಡಣೆಯಿಂದ ಈ ಬಾರಿ ಒಂದು ವಾರ್ಡ್ ಹೆಚ್ಚಳವಾಗಿದೆ. 16 ವಾರ್ಡ್‌ಗಳಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಬಿಎಸ್‌ಪಿ ಹಾಗೂ ಪಕ್ಷೇತರ ಸೇರಿ ಒಟ್ಟು 49 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇ 29ಕ್ಕೆ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದ ಜೆಡಿಎಸ್, ಕೇವಲ ಮೂರು ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಅಖಾಡದಲ್ಲಿರುವ ಅಭ್ಯರ್ಥಿಗಳು ತಮ್ಮ ತಮ್ಮ ಪಕ್ಷಗಳ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಆಯಾ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಬಿರು ಬಿಸಿಲನ್ನೂ ಲೆಕ್ಕಿಸದೆ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ.
ಯಾವ ವಾರ್ಡ್‌ನಲ್ಲಿ ಯಾರ್ಯಾರಿಗೆ ಪೈಪೋಟಿ?: ಪಟ್ಟಣದ ಒಂದನೇ ವಾರ್ಡ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಎರಡನೇ ವಾರ್ಡ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಸ್ಪರ್ಧೆ ಇದ್ದರೂ, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನೇರ ಹಣಾಹಣಿಯನ್ನು ನಿರೀಕ್ಷಿಸಬಹುದು. ಮೂರು ಮತ್ತು ನಾಲ್ಕನೇ ವಾರ್ಡ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯಲಿದೆ. ಐದನೇ ವಾರ್ಡ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಆರನೇ ವಾರ್ಡ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಸ್ಪರ್ಧೆ ಇದೆ.
ಏಳನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೇಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿಗಾಗಿ ಸೆಣಸುತ್ತಿದ್ದಾರೆ. ಎಂಟನೇ ವಾರ್ಡ್‌ನಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಒಂಭತ್ತನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳಿದ್ದು, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ಹಣಾಹಣಿ ನಡೆಯಲಿದೆ. 10ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
11ನೇ ವಾರ್ಡ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದು, ತ್ರಿಕೋನ ಸ್ಪರ್ಧೆ ನಡೆಯಲಿದೆ. 12ನೇ ವಾರ್ಡ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಇಬ್ಬರು ಪಕ್ಷೇತರರು ಕಣದಲ್ಲಿದ್ದು, ಕಾಂಗ್ರೆಸ್ ಮತ್ತು ಪಕ್ಷೇತರರೊಬ್ಬರ ಮಧ್ಯೆ ಪೈಪೋಟಿ ಏರ್ಪಟ್ಟಿದೆ. 13 ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ತ್ರಿಕೋನ ಸ್ಪರ್ಧೆ ಇದೆ. 14ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇಬ್ಬರು ಪಕ್ಷೇತರರಿದ್ದು ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯಲಿದೆ. 15ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್, ಬಿಎಸ್‌ಪಿ ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿದ್ದು, ಕಾಂಗ್ರೆಸ್, ಬಿ.ಜೆ.ಪಿ ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿಗಳ ಮಧ್ಯ ತ್ರಿಕೋಣ ಸ್ಪರ್ಧೆ ಏರ್ಪಡಲಿದೆ. 16ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ.
ಈ ಚುನಾವಣೆಯಲ್ಲಿ ಕಾಂಚಾಣ ಸದ್ದು ಮಾಡುತ್ತಿದ್ದು, ಒಂದು ಓಟಿಗೆ ಒಂದು ಸಾವಿರ ರೂ. ನಿಂದ 5 ಸಾವಿರ ರೂ. ವರೆಗೆ ಹಣ ಹಂಚಿಕೆಯಾಗುತ್ತಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ.
ಕಳೆದ ಸಲ ಏನಾಗಿತ್ತು?:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.