ಪ್ರತಿಭಟನೆಯಿಂದ ಕಾಂಗ್ರೆಸ್ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ
Team Udayavani, Mar 4, 2023, 1:37 PM IST
ಚಿತ್ರದುರ್ಗ: ಲೋಕಾಯುಕ್ತವನ್ನು ದುರ್ಬಲಗೊಳಿಸಿ 59 ಪ್ರಕರಣಗಳನ್ನು ಮುಚ್ಚಿ ಹಾಕಿದ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಭಟಿಸುವ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು
ಚಿತ್ರದುರ್ಗದ ಎಸ್ ಜೆಎಂ ಹೆಲಿಪ್ಯಾಡ್ ನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಂತ್ರಿಗಳ ಕಚೇರಿಯಲ್ಲೇ 2 ಲಕ್ಷ ಹಣ ಸಿಕ್ಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರಾ, ಅಂದು ಲೋಕಾಯುಕ್ತ ಇದ್ದಿದ್ದರೆ ಅರೆಸ್ಟ್ ಆಗುತ್ತಿದ್ದರು. ಆದರೆ, ಲೋಕಾಯುಕ್ತ ದುರ್ಬಲಗೊಳಿಸಿದ್ದರು ಎಂದರು.
ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಎನ್ನುವುದಕ್ಕೆ ಮಾಡಾಳ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿರುವುದೇ ಸಾಕ್ಷಿ ಎಂದು ಸಿಎಂ ಹೇಳಿದರು.
ಇದನ್ನೂ ಓದಿ:ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧನಿದ್ದೇನೆ: ಶಾಸಕ ಶರತ್ ಬಚ್ಚೇಗೌಡ
ಈ ಆರೋಪದ ಮೂಲಕ ಕಾಂಗ್ರೆಸ್ ತನ್ನ ಪಾಪಗಳನ್ನು ತೊಳೆದುಕೊಳ್ಳಲು ಸಾಧ್ಯ ಇಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದರು.
ಶಾಸಕ ಸ್ಥಾನಕ್ಕೆ ರಾಜಿನಾಮೆ ಅಥವಾ ಪಕ್ಷದಿಂದ ಉಚ್ಚಾಟನೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ರಾಜ್ಯದಲ್ಲಿ ಅತೀ ಹೆಚ್ಚು ಕೊಲೆಗಳಾಗಿವೆ. ಜಾತಿ, ಧರ್ಮ, ರಾಜಕೀಯ ದ್ವೇಷದ ಆಧಾರದಲ್ಲಿ ಕೊಲೆಗಳು ನಡೆದಿವೆ. ಕೊಲೆಗೆ ಕಾರಣವಾದ ಪಿಎಫ್ಐ, ಎಸ್ ಡಿಪಿಐ ಮೇಲಿನ ಪ್ರಕರಣಗಳನ್ನು ವಾಪಾಸು ಪಡೆದುಕೊಂಡಿರುವ ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.
ಅತ್ಯಂತ ಕೆಳ ಸ್ಥರದಲ್ಲಿರುವ ದುಡಿಯುವ ವರ್ಗಕ್ಕೆ ನೀಡಿರುವ ಯೋಜನೆಗಳನ್ನು ಎಲ್ಲರಿಗೂ ತಲುಪಿಸಲು ಆದೇಶ ಮಾಡಿದ್ದೇವೆ. ಚಿತ್ರದುರ್ಗ ಜಿಲ್ಲೆಯಿಂದ ಫಲಾನುಭವಿಗಳ ಸಮಾವೇಶ ಆರಂಭಿಸಿದ್ದು, ಎಲ್ಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಸಮಾವೇಶ ನಡೆಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.