5 ಕೋಟಿ ವೆಚ್ಚದಲ್ಲಿ ಬೋಕಿಕೆರೆ-ಭಾಗಶೆಟ್ಟಿ ಹಳ್ಳಿ ರಸ್ತೆ ನಿರ್ಮಾಣ
Team Udayavani, Oct 7, 2019, 2:34 PM IST
ಹೊಸದುರ್ಗ: ತಾಲೂಕಿನ ಬೋಕಿಕೆರೆ- ಭಾಗಶೆಟ್ಟಿಹಳ್ಳಿ ರಸ್ತೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ತರೀಕೆರೆ ರಸ್ತೆಯಿಂದ ಭಾಗಶೆಟ್ಟಿಹಳ್ಳಿವರೆಗೆ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 5 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ಬೋಕಿಕೆರೆ, ಎಂ.ಜಿ. ದಿಬ್ಬ, ಮಾಚೇನಹಳ್ಳಿ, ಅಡವಿಸಂಗೇನಹಳ್ಳಿ, ಕಂಗುವಳ್ಳಿ, ಭಾಗಶೆಟ್ಟಿಹಳ್ಳಿ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚರಿಸಲು ಬಹಳ ಕಷ್ಟ. 5 ಕೋಟಿ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಈ ಭಾಗದ ಬಹುದಿನದ ಬೇಡಿಕೆ ಈಡೇರಿಸಿದಂತಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಅಡಿ ಅಜ್ಜಂಪುರದ ಬೆಟ್ಟದತಾವರೆಕೆರೆಯಿಂದ ವೇದಾವತಿ ನದಿ ಮೂಲಕ ವಿವಿ ಸಾಗರಕ್ಕೆ ನೀರು ಹರಿಸಲಾಗುವುದು. ಬಹುದಿನಗಳ ಬೇಡಿಕೆಯಾದ ವಿವಿಸಾಗರಕ್ಕೆ ನೀರು ಹರಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ತಾಲೂಕಿನ 44,608 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುವುದು.
ತಾಲೂಕಿನ 27 ಕೆರೆಗಳಿಗೆ ನೀರು ಹರಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಗೆ ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು. ಜಿಪಂ ಸದಸ್ಯ ಅಜ್ಜಪ್ಪ ಮಾತನಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ಹರಿದು ಬರಲಿದೆ. ಎಂದರು. ಬೋಕಿಕೆರೆ ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ಮರಿದಿಮ್ಮಪ್ಪ, ಬಿಜೆಪಿ ಮುಖಂಡರಾದ ಶೇಖರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.