ಮಹಾರಾಷ್ಟ್ರದಿಂದ ಬಂದಐವರಿಗೆ ಸಾಂಸ್ಥಿಕ ಕ್ವಾರಂಟೈನ್
Team Udayavani, Jun 16, 2020, 1:02 PM IST
ಮೊಳಕಾಲ್ಮೂರು: ಮಹಾರಾಷ್ಟ್ರದ ಪೂನಾದಿಂದ ತಾಲೂಕಿಗೆ ಆಗಮಿಸಿರುವ ಐವರನ್ನು ಪಟ್ಟಣದ ಹೊರವಲಯದಲ್ಲಿರುವ ಆರ್.ಎಂ.ಎಸ್.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ತಾಲೂಕಿನ ರಾಂಪುರ ಗ್ರಾಮದ 36 ವರ್ಷದ ಪುರುಷ, 35 ವರ್ಷದ ಮಹಿಳೆ , 15 ವರ್ಷದ ಬಾಲಕಿ ಮತ್ತು 2 ವರ್ಷದ ಗಂಡುಮಗು ಒಂದೇ ಕುಟುಂಬದವರಾಗಿದ್ದಾರೆ. ಈ ನಾಲ್ವರು ಬೈನಲ್ಲಿರುವ ಸಂಬಂಧಿಕರನ್ನು ನೋಡಲು ಹೋಗಿದ್ದರು. ಜೂ. 12 ರಂದು ಸಂಜೆ ರಾಂಪುರಕ್ಕೆ ಆಗಮಿಸಿದ್ದರು. ಹಾಗೆಯೇ ಜೂ. 14 ರಂದು ಮೊಳಕಾಲ್ಮೂರು ಪಟ್ಟಣದ 19 ವರ್ಷದ ಯುವಕ ಪೂನಾದಿಂದ ಬಂದಿದ್ದು, ಆತನನ್ನೂ ಸೇರಿ ಒಟ್ಟು 5 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿಡಲಾಗಿದೆ.
ಈ ಐದು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಉಪ ತಹಶೀಲ್ದಾರ್ ಏಳುಕೋಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಕೋವಿಡ್-19 ತಾಲೂಕು ನೋಡಲ್ ಅಧಿಕಾರಿ ಡಿ. ಚಿದಾನಂದಪ್ಪ , ಆರ್.ಆರ್. ತಂಡದ ಒ. ಶ್ರೀನಿವಾಸ್, ವೈ. ತಿಪ್ಪೇಸ್ವಾಮಿ, ಗ್ರಾಮಲೆಕ್ಕಾಧಿಕಾರಿ ವಾಲೇಕರ್, ಆಶಾ ಕಾರ್ಯಕರ್ತೆ, ತಹಶೀಲ್ದಾರ್ ಎಂ. ಬಸವರಾಜ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ ಆರ್.ಎಂ.ಎಸ್.ಎ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.