ಕೋವಿಡ್ ನಿರ್ಮೂಲನೆಗೆ ಶ್ರಮಿಸಿ
Team Udayavani, Oct 20, 2020, 7:17 PM IST
ಮೊಳಕಾಲ್ಮೂರು: ಸಮಾಜದ ಪ್ರತಿಯೊಬ್ಬ ನಾಗರಿಕರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಹಾಮಾರಿ ಕೋವಿಡ್ ನಿರ್ಮೂಲನೆ ಮಾಡಲು ಶ್ರಮಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ನಿರ್ಮಲಾ ಕರೆ ನೀಡಿದರು.
ಪಟ್ಟಣದ ಜೆಎಂಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ, ತಾಲೂಕು ಕಾನೂನು ಸೇವಾ ಸಮಿತಿ ಮೊಳಕಾಲ್ಮೂರು ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೋವಿಡ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಶ್ವ ವ್ಯಾಪಿ ಹರಡಿರುವ ಕ್ರೂರಿ ಕೋವಿಡ್ ನಮ್ಮ ದೇಶದಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸಿ ಸಾಕಷ್ಟು ಸಾವು-ನೋವನ್ನುಂಟು ಮಾಡಿದೆ. ಜನಸಾಮಾನ್ಯರ ಜೀವನಕ್ಕೆ ಮಾರಕವಾಗಿದೆ. ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುವ ಹಂತ ತಲುಪಿದ್ದು, ಮಕ್ಕಳ ಶೈಕ್ಷಣಿಕ ಪ್ರಗತಿ ಕೂಡ ಕುಂಠಿತವಾಗಿದೆ. ಕೋವಿಡ್ ಭೀತಿಯಿಂದ ನ್ಯಾಯಾಲಯ ಸೇರಿದಂತೆ ಇನ್ನಿತರ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿ ಭಯದ ವಾತಾವರಣದಲ್ಲಿಯೇ ಕಾರ್ಯ ನಿರ್ವಹಿಸುವಂತಾಗಿದೆ. ಇಂತಹ ಭಯಾನಕ
ಕೋವಿಡ್ ಗೆ ಲಸಿಕೆ ಇನ್ನೂ ಲಭ್ಯವಾಗಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸ್ಯಾನಿಟೈಸರ್ ಬಳಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಕೋವಿಡ್ ನಿಯಂತ್ರಿಸಬಹುದು ಎಂದರು. ಮಾರಣಾಂತಿಕ ಕೋವಿಡ್ ವೈರಾಣು ಹರಡುವುದನ್ನು ತಡೆಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಯುಕ್ತವಾದ ವರ್ತನೆಯನ್ನು ಅನುಸರಿಸುವ ಮೂಲಕ ಬೇರೆಯವರೂ ಅನುಸರಿಸಲು ಉತ್ತೇಜನ ನೀಡಲಾಗುವುದು. ಯಾವಾಗಲೂ ಮತ್ತು ಸಾರ್ವಜನಿಕರೊಡನೆ ಇರುವಾಗ ಮುಖ ಕವಚವನ್ನು ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಲಾಗುವುದೆಂದು ಪ್ರತಿಜ್ಞಾ ವಿ ಧಿ ಬೋಧಿಸಿದರು.
ಜೆಎಂಎಫ್‌ಸಿ ನ್ಯಾಯಾಲಯದಿಂದ ಬಸ್ ನಿಲ್ದಾಣದ ಆವರಣದವರೆಗೂ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಬಸ್ ನಿಲ್ದಾಣದ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ,ಕ್ಷೇತ್ರ ಶಿಕ್ಷಣಾಧಿಕಾರಿ ಯುವರಾಜ್ ನಾಯ್ಕ, ವೃತ್ತ ನಿರೀಕ್ಷಕ ಜಿ.ಬಿ. ಉಮೇಶ್, ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಎಸ್. ಸವಿತಾ, ತಾಲೂಕು ಆರೋಗ್ಯಾಧಿ ಕಾರಿ ಡಾ| ಸುಧಾ, ವಕೀಲರ ಸಂಘದಅಧ್ಯಕ್ಷ ಪಾಪಯ್ಯ, ಕಾರ್ಯದರ್ಶಿ ಮಂಜುನಾಥ, ವಕೀಲರಾದ ರಾಜಶೇಖರ ನಾಯಕ, ಪಿ.ಜಿ. ವಸಂತಕುಮಾರ್, ಎಂ.ಎನ್. ವಿಜಯಲಕ್ಷ್ಮೀ,ಹುಲುಗಪ್ಪ, ವಿ.ಡಿ. ರಾಘವೇಂದ್ರ, ಗಂಗಮೂರ್ತಿ, ಡಿ.ಬಿ. ಬಸವರಾಜ್, ವೆಂಕಟೇಶ್, ತಿಮ್ಮಣ್ಣ, ಶೃತಿ, ಯರ್ರಿಸ್ವಾಮಿ, ಆರೋಗ್ಯ ಸಹಾಯಕಿಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.