ಕೋವಿಡ್ ಪಿಡುಗು ಹೊಡೆದೋಡಿಸಿ
Team Udayavani, Nov 14, 2020, 8:09 PM IST
ಚಿತ್ರದುರ್ಗ: ಕೋವಿಡ್ ವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆ ಹೆಚ್ಚಾಗುತ್ತಿದ್ದು, ಈ ಪಿಡುಗನ್ನುತಡೆಗಟ್ಟುವಲ್ಲಿ ಜನತೆ ಕೈಗೊಳ್ಳಬೇಕಾದ ಸುರಕ್ಷತಾ, ಮುಂಜಾಗ್ರತಾ ಕ್ರಮಗಳ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಲು “ಶ್ರವ್ಯ-ದೃಶ್ಯ’ ಮಾಧ್ಯಮದ ಮೂಲಕ ಬೃಹತ್ ಎಲ್‌ಇಡಿ ಪರದೆ ಹೊಂದಿರುವ ಮೊಬೈಲ್ ವಾಹನಗಳನ್ನು ಬಳಸಿಕೊಂಡು ಜಿಲ್ಲೆಯಾದ್ಯಂತ ವಿಶೇಷ ಜಾಗೃತಿ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್-19 ಜನಾಂದೋಲನ ವಿಶೇಷ ಜಾಗೃತಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್-19 ತಡೆಗಟ್ಟುವಿಕೆ ಹಾಗೂ ಕೈಗೊಳ್ಳಬೇಕಾದಮುಂಜಾಗ್ರತಾ ಕ್ರಮಗಳ ಕುರಿತು ಪ್ರತಿ ದಿನ 10 ಗ್ರಾಮಗಳಂತೆ ಜಿಲ್ಲೆಯ 180 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡಿದ್ದು, ಈ ಗ್ರಾಮಗಳಲ್ಲಿ ನ.14 ರಿಂದ ಡಿಸೆಂಬರ್ 2 ರವರೆಗೆ ಎಲ್‌ಇಡಿ ಪ್ರದರ್ಶನ ಏರ್ಪಡಿಸಿ ಕೋವಿಡ್-19 ಜಾಗೃತಿ ಮೂಡಿಸಲಾಗುವುದು ಎಂದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಮಾತನಾಡಿ, ಕೋವಿಡ್-19 ಸೋಂಕು ರೋಗಕ್ಕೆ ಲಸಿಕೆ ಇಲ್ಲದ ಕಾರಣ ಜಾಗೃತಿ ಮೂಡಿಸುವುದೊಂದೆ ಮಾರ್ಗವಾಗಿರುವುದರಿಂದ ಜಿಲ್ಲೆಯ ಗ್ರಾಮೀಣ ಜನರಲ್ಲಿ ಈ ಕುರಿತು ಜಾಗೃತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ -19 ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ವಾರ್ತಾ ಇಲಾಖೆ ಸಿಬ್ಬಂದಿಗಳಾದ ತಿಪ್ಪಯ್ಯ, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.