ಕೋವಿಡ್ ನಿಯಂತ್ರಣ ಜಾಗೃತಿ ಸಭೆ
Team Udayavani, May 29, 2021, 4:15 PM IST
ಚಳ್ಳಕೆರೆ: ಎರಡನೇ ಹಂತದ ಕೋವಿಡ್ ಅಲೆಯಲ್ಲಿ ತಾಲೂಕಿನಾದ್ಯಂತ ಒಟ್ಟು 60ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, ಇಂದಿಗೂ ಸಹ ನೂರಾರು ಸಂಖ್ಯೆಯ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಮೂರನೇ ಅಲೆ ಪ್ರವೇಶ ಪಡೆಯುವ ಸಂಭವಿದ್ದು, ಇದು ಮಕ್ಕಳಲ್ಲಿ ಹೆಚ್ಚು ವ್ಯಾಪಿಸುವ ಸಂದರ್ಭವಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಮೀರಸಾಬಿಹಳ್ಳಿ, ಚನ್ನಮ್ಮನಾಗತಿಹಳ್ಳಿ, ಚೌಳೂರು ಮುಂತಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್ ನಿಯಂತ್ರಣ ಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಶ್ರಮವಹಿಸಿದರೂ ಸಹ ನಿರೀಕ್ಷಿತ ಮಟ್ಟದಲ್ಲಿ ನಿಯಂತ್ರಣ ಸಾಧ್ಯವಾಗಿಲ್ಲ. ಕೋವಿಡ್ ನಿಯಂತ್ರಣಕ್ಕೆ ಕೇವಲ ಅಧಿಕಾರಿಗಳು ಮಾತ್ರ ಕಾರ್ಯನಿರ್ವಹಿಸಿದರೆ ಸಾಲದು ಜನರು ಸಹ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಬೇಕು. ಮೂರನೇ ಹಂತದ ಬಗ್ಗೆ ತಜ್ಞರು ಈಗಾಗಲೇ ಮಾಹಿತಿ ನೀಡಿದ್ದು, ಮಕ್ಕಳ ಮೇಲೆ ಇದು ಹೆಚ್ಚು ಕೆಟ್ಟ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದು, ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎನ್ .ಪ್ರೇಮಸುಧಾ ಮಾಹಿತಿ ನೀಡಿ, ಕಳೆದ ವಾರಕ್ಕೆ ಹೋಲಿಸಿದಲ್ಲಿ ಈ ವಾರ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಸಾವನ್ನಪ್ಪುವವರ ಸಂಖ್ಯೆಯೂ ಸಹ ಕ್ಷೀಣಿಸುತ್ತಿದೆ. ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒಗಳು, ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್, ಇಒ ಪ್ರಕಾಶ್, ಎಚ್.ಸಮರ್ಥರಾಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.