ಕೋವಿಡ್‌ ಲಸಿಕೆ ವಿರುದ್ಧ ಅಪಪ್ರಚಾರ ಮಾಡಿಲ್ಲ


Team Udayavani, Jun 5, 2021, 12:58 PM IST

Untitled-1

ಚಿತ್ರದುರ್ಗ: ಕೋವಿಡ್‌ ಲಸಿಕೆ ಕುರಿತು ಇರುವ ಗೊಂದಲಗಳನ್ನು ನಿವಾರಿಸುವಂತೆ ಕಾಂಗ್ರೆಸ್‌ ಹೇಳಲಾಗಿದೆಯೇ ಹೊರತು ಲಸಿಕೆ ವಿರುದ್ಧ ಅಪಪ್ರಚಾರ ಮಾಡಿಲ್ಲ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೋವಿಡ್ ನಿಯಂತ್ರಣದ ವಿಚಾರದಲ್ಲಿ ವೈಫಲ್ಯ ಅನುಭವಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಪ್ರತಿಪಕ್ಷಗಳ ಮೇಲೆ ಇಲ್ಲಸಲ್ಲದ್ದನ್ನು ಹೇಳಿ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಕೋವಿಡ್‌ 19 ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಲಾಗದ ರಾಜ್ಯ ಸರ್ಕಾರ ಪಕ್ಷದ ಮುಖಂಡರ ಮೂಲಕ ಅಸಂಬದ್ಧ ಹೇಳಿಕೆಗಳನ್ನು ಕೊಡಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಕೂಡಾ ಜವಾಬ್ದಾರಿಯಿಂದ ಹೇಳಿಕೆ ಕೊಡಬೇಕು ಎಂದರು.

ಕೋವಿಡ್‌ ಹತೋಟಿಗೆ ತರುವ ಸರ್ಕಾರಗಳ ಪ್ರಯತ್ನದ ಜತೆಗೆ ಕಾಂಗ್ರೆಸ್‌ ಪಕ್ಷದ ಸಹಕಾರ ಇದ್ದೇ ಇರುತ್ತದೆ. ಬೆಳೆ ವಿಮೆ ಪರಿಹಾರದ ಮೊತ್ತವನ್ನು ಶೀಘ್ರ ರೈತರಿಗೆ ಜಮಾ ಮಾಡಬೇಕು. ಈವರೆಗೆ ಪರಿಹಾರ ನೀಡದಿರುವುದನ್ನು ಖಂಡಿಸಿ ರೈತರು ಜೂನ್‌ 10 ರಂದು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ತಿಳಿಸಿದರು.

ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್‌. ಮಂಜುನಾಥ್‌ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ ಪರಿಹಾರದ ಮೊತ್ತವನ್ನು 10 ಸಾವಿರ ರೂ.ಗೆ ಹೆಚ್ಚಿಸುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರಿದ್ದಾರೆ. ಕಟ್ಟಡ ಕಾರ್ಮಿಕರಿಗೆ ಅವರು ಕಟ್ಟಿರುವ ವಿಮಾ ಕಂತಿನ ಮೊತ್ತದಲ್ಲೇ ಪರಿಹಾರ ಕೊಡಲಾಗುತ್ತದೆ ಹೊರತು ಇದಕ್ಕಾಗಿ ಸರ್ಕಾರ ಪ್ರತ್ಯೇಕ ಅನುದಾನ ಕೊಟ್ಟಿಲ್ಲ.ಶನಿವಾರದಿಂದ ಕಾಂಗ್ರೆಸ್‌ ಕಾರ್ಯಕರ್ತರು ಪರಿಹಾರಕ್ಕಾಗಿ ಅಸಂಘಟಿತ ಕಾರ್ಮಿಕರ ಹೆಸರು ನೋಂದಾಯಿಸುವ ಕೆಲಸ ಆರಂಭಿಸಲಿದ್ದಾರೆ.

ರಾಜ್ಯದಲ್ಲಿ 12 ಲಕ್ಷಕ್ಕೂ ಅಧಿಕ ಬ್ಯಾಡ್ಜ್ ಹೊಂದಿರುವ ಎಲ್ಲ ಟ್ಯಾಕ್ಸಿ ಆಟೋ ಹಾಗೂ ಕ್ಯಾಬ್‌ ಚಾಲಕರಿಗೆ ಪರಿಹಾರ ಕೊಡಬೇಕು. ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಬೀದಿ ವ್ಯಾಪಾರಿಗಳಿದ್ದಾರೆ. ಬಿಜೆಪಿ ನಾಯಕರು ಸುಖಾಸುಮ್ಮನೆ ಕಾಂಗ್ರೆಸ್‌ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಲಸಿಕೆ ವಿರುದ್ಧ ಕಾಂಗ್ರೆಸ್‌ ಅಪ್ರಚಾರ ಮಾಡಿದೆ ಎನ್ನುವುದಕ್ಕೆ ದಾಖಲೆ ಒದಗಿಸಿ ಎಂದು ಸವಾಲು ಹಾಕಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಕೆ. ತಾಜ್‌ಪೀರ್‌ ಮಾತನಾಡಿ, ದೇಶದ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ ಎಂದರು. ಜಿಪಂ ಮಾಜಿ ಸದಸ್ಯ ಯೋಗೇಶ್‌ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಜಿಲ್ಲೆಯಲ್ಲಿರದೆ ಚಿತ್ರದುರ್ಗಕ್ಕೆ ಅತಿಥಿಯಾಗಿದ್ದಾರೆ ಎಂದು ಟೀಕಿಸಿದರು.

ಮಾಜಿ ಶಾಸಕ ಡಿ.ಸುಧಾಕರ್‌, ಜಿಲ್ಲಾ ಕಾರ್ಯಾಧ್ಯಕ್ಷ ಹಾಲೇಶಪ್ಪ, ಮುಖಂಡರಾದ ಭೀಮಸಮುದ್ರದ ಜಿ.ಎಸ್‌. ಮಂಜುನಾಥ್‌, ಎನ್‌.ಡಿ.ಕುಮಾರ್‌, ಸಂಪತ್‌ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.