ಭಾವೈಕ್ಯ ಭಾವನೆ ಮೂಡಿಸಿ : ನಾಗಭೂಷಣ
Team Udayavani, Mar 28, 2021, 8:13 PM IST
ಹಿರಿಯೂರು: ಶಾಲೆಗಳಲ್ಲಿ ಶಿಕ್ಷಕರು ರಾಷ್ಟ್ರ ಪ್ರೇಮ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ದೇಶ ಭಕ್ತಿಗೀತೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ, ಭಾವ್ಯಕೈತೆ ಹಾಗೂ ಸೇವಾಮನೋಭಾವ ಬೆಳೆಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ ಹೇಳಿದರು.
ನಗರದ ಹರಿಶ್ಚಂದ್ರಘಾಟ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸೇವಾದಳದ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಬದಲಾಗುತ್ತಿರುವ ವ್ಯವಸ್ಥೆಗೆ ತಕ್ಕಂತೆ ಶಿಕ್ಷಕರೂ ಬದಲಾಗಬೇಕು. ಹೆಚ್ಚಿನ ಜ್ಞಾನ ಗ್ರಹಿಸಿಕೊಂಡು ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರಗತಿ ಕಾಣುವಂತಹ ವ್ಯವಸ್ಥೆ ನಿರ್ಮಾಣ ಮಾಡಬೇಕು ಎಂದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಸಿ. ಶಿವಾನಂದ ಮಾತನಾಡಿ, ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಂತಹ ಜವಾಬ್ದಾರಿ ಶಿಕ್ಷರದ್ದಾಗಿದೆ ಎಂದರು. ಬಿಆರ್‌ಸಿ ತಿಪ್ಪೇರುದ್ರಪ್ಪ, ಇಸಿಒ ಶಶಿಧರ್, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಚಿದಾನಂದಸ್ವಾಮಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ರಮೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಾಧ್ಯಕ್ಷರಾಗಿ ಬಿವೈವಿ ಅವಧಿ ವಿಸ್ತರಣೆ ಹೇಳಲು ಆಗಲ್ಲ: ಯದುವೀರ ಒಡೆಯರ್
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್